![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Feb 6, 2020, 3:10 PM IST
ಉತ್ತರಪ್ರದೇಶ; ರಾಸಾಯಾನಿಕ ಕಾರ್ಖಾನೆಯಿಂದ ವಿಷಕಾರಿ ಅನಿಲ ಸೋರಿಕೆಯಾದ ಕಾರಣ ಮೂರು ಮಕ್ಕಳು ಸೇರಿದಂತೆ 7 ಜನರು ಸಾವನ್ನಪ್ಪಿದ ಘಟನೆ ಸಿತಾಪುರ್ ಜಿಲ್ಲೆಯಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಬಿಸ್ವಾನ್ ನ ರಾಸಾಯನಿಕ ಕಾರ್ಖಾನೆಯ ಪೈಪ್‌ಲೈನ್‌ನಿಂದ ಅನಿಲ ಸೋರಿಕೆಯಾಗಿದ್ದು, ಪರಿಣಾಮವಾಗಿ ಕಾರ್ಖಾನೆಯೊಳಗೆ ಮಲಗಿದ್ದವರು ಸಾವನ್ನಪ್ಪಿದ್ದಾರೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ ಎಂದು ವರದಿ ತಿಳಿಸಿದೆ.
ಸ್ಥಳೀಯರು ಅನಿಲ ಸೋರಿಕೆಯಾಗುತ್ತಿರುವ ಕುರಿತು ಪೊಲೀಸರಿಗೆ ಮಾಹಿತಿ ನೀಡಿದ್ದು , ಆದರೇ ತೀವ್ರತರವಾದ ವಾಸನೆಯಿಂದ ಕಾರ್ಖಾನೆಯೊಳಗೆ ತಕ್ಷಣ ಪ್ರವೇಶಿಸಲು ಸಾಧ್ಯವಾಗಲಿಲ್ಲ. ಕೂಡಲೇ ಪೊಲೀಸರು ಆಸುಪಾಸಿನಲ್ಲಿ ವಾಸಿಸುತ್ತಿದ್ದ ಜನರನ್ನು ತೆರವುಗೊಳಿಸಿದ್ದಾರೆ. ನಂತರ ಕಾರ್ಖಾನೆಯೊಳಗೆ ಇದ್ದ ಮೂರು ಮಕ್ಕಳು ಸೇರಿದಂತೆ 7 ಜನರ ಮೃತದೇಹಗಳನ್ನು ಹೊರ ತೆಗೆಯಲಾಯಿತು ಎಂದು ಸಿತಾಪುರ್ ಎಸ್’ಪಿ ಎಲ್ ಆರ್ ಕುಮಾರ್ ತಿಳಿಸಿದ್ದಾರೆ.
ಸ್ಥಳೀಯರ ಘಟನೆಯಲ್ಲಿ ಕೆಲವು ಪ್ರಾಣಿಗಳು ಸಾವನ್ನಪ್ಪಿವೆ ಎಂದು ತಿಳಿಸಿದ್ದಾರೆ. ಆದರೆ ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಉತ್ತರಪ್ರದೇಶ ಮುಖ್ಯಮಂತ್ರಿ ಘಟನೆಯ ಕುರಿತು ಸಂತಾಪ ಸೂಚಿಸಿದ್ದು , ಅಧಿಕಾರಿಗಳಿಗೆ ಸಮಗ್ರ ತನಿಖೆ ನಡೆಸುವಂತೆ ತಿಳಿಸಿದ್ದಾರೆ. ಮೃತರ ಕುಟುಂಬಗಳಿಗೆ 4 ಲಕ್ಷ ಪರಿಹಾರ ನೀಡುತ್ತೇವೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆಂದು ಸುದ್ದಿಸಂಸ್ಥೆ ಎಎನ್ ಐ ವರದಿ ಮಾಡಿದೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.