ಜಿಗಿದ ಜಿಡಿಪಿ ಪ್ರಮಾಣ ಶೇ13.5: ಕೇಂದ್ರ ಸರ್ಕಾರದ ದತ್ತಾಂಶಗಳಲ್ಲಿ ಉಲ್ಲೇಖ
Team Udayavani, Sep 2, 2022, 6:40 AM IST
ನವದೆಹಲಿ: ಪ್ರಸಕ್ತ ವಿತ್ತೀಯ ವರ್ಷದ ಮೊದಲ ತ್ತೈಮಾಸಿಕದಲ್ಲಿ ಒಟ್ಟು ದೇಶಿಯ ಉತ್ಪನ್ನ (ಜಿಡಿಪಿ) ಶೇ.13.5ಕ್ಕೆ ಏರಿಕೆಯಾಗಿದೆ. ಕಳೆದ ವಿತ್ತೀಯ ವರ್ಷದ ಇದೇ ಅವಧಿಗೆ ಹೋಲಿಕೆ ಮಾಡಿದರೆ, ಇದು ಗರಿಷ್ಠ ಪ್ರಮಾಣದ ಏರಿಕೆಯಾಗಿದೆ ಎಂದು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ ವರದಿಯಲ್ಲಿ ಉಲ್ಲೇಖೀಸಲಾಗಿದೆ. ಸೇವಾ ಕ್ಷೇತ್ರದಲ್ಲಿ ಉಂಟಾಗಿರುವ ವಿಸ್ತರಣೆ, ದೇಶೀಯ ಕ್ಷೇತ್ರದಲ್ಲಿ ವಿವಿಧ ಸೇವೆಗಳಿಗೆ ಬೇಡಿಕೆ ಹೆಚ್ಚಾಗಿರುವುದಿಂದ ಈ ಬೆಳವಣಿಗೆ ಉಂಟಾಗಿದೆ.
ಜಗತ್ತಿನ ವಿತ್ತೀಯ ವ್ಯವಸ್ಥೆಗೆ ಹಿಂಜರಿಕೆ ಕಾಡಬಹುದು ಎಂಬ ಭೀತಿಯ ನಡುವೆಯೇ ಇದೊಂದು ಧನಾತ್ಮಕ ಬೆಳವಣಿಗೆಯಾಗಿದೆ. ಜತೆಗೆ ಕಳೆದ ವಿತ್ತೀಯ ವರ್ಷದ ಮೊದಲ ತ್ತೈಮಾಸಿಕಕ್ಕೆ ಹೋಲಿಕೆ ಮಾಡಿದರೆ ಇದು ಒಂದು ವರ್ಷದ ಅವಧಿಯ ಗರಿಷ್ಠ ಏರಿಕೆಯಾಗಿದೆ. ಆದರೆ, ಆರ್‌ಬಿಐ ನಿರೀಕ್ಷೆ ಮಾಡಿದ್ದಕ್ಕಿಂತ ಶೇ.2.7 ಕಡಿಮೆಯಾಗಿದೆ. ಜಿಡಿಪಿ ಪ್ರಮಾಣ ಶೇ.16.2ಕ್ಕೆ ಏರಿಕೆಯಾಗಲಿದೆ ಎಂದು ಆರ್‌ಬಿಐ ನಿರೀಕ್ಷೆ ಮಾಡಿತ್ತು.
2020-21ನೇ ವಿತ್ತೀಯ ವರ್ಷದಲ್ಲಿ ಕೊರೊನಾ ಸೋಂಕು ತಡೆಗೆ ವಿಧಿಸಿದ್ದ ಹಲವು ಪ್ರತಿಬಂಧಕ ಕ್ರಮಗಳಿಂದಾಗಿ ಅರ್ಥ ವ್ಯವಸ್ಥೆ ಶೇ.23.9ರಷ್ಟು ಕುಸಿತ ಕಂಡಿತ್ತು.
ಉಕ್ರೇನ್ ಮೇಲೆ ರಷ್ಯಾ ದಾಳಿ ಮಾಡಿದ್ದರಿಂದ ಜಗತ್ತಿನ ವ್ಯವಸ್ಥೆಯ ಮೇಲೆ ಹಲವು ರೀತಿಯಲ್ಲಿ ಪ್ರತಿಕೂಲ ಪರಿಣಾಮ ಉಂಟಾಗಿದೆ. ಅಮೆರಿಕ ಕೂಡ 40 ವರ್ಷಗಳಲ್ಲಿಯೇ ಅತ್ಯಧಿಕ ಪ್ರಮಾಣದ ಹಣದುಬ್ಬರ ಏರಿಕೆಯನ್ನು ಅನುಭವಿಸುತ್ತಿದೆ. ಕೊರೊನಾ ಕಾರಣದಿಂದ ಚೀನಾದ ಅರ್ಥವ್ಯವಸ್ಥೆ ಇಳಿಮುಖವಾಗಿದೆ. ಏಪ್ರಿಲ್-ಜೂನ್ ಅವಧಿಯಲ್ಲಿ ಆ ದೇಶದ ಅರ್ಥ ವ್ಯವಸ್ಥೆ ಶೇ.0.4ರಷ್ಟು ಬೆಳವವಣಿಗೆ ಸಾಧಿಸಿತ್ತು.
ನಿರುದ್ಯೋಗ ಪ್ರಮಾಣ ಇಳಿಕೆ:
ಪ್ರಸಕ್ತ ವಿತ್ತೀಯ ವ್ಯವಸ್ಥೆಯ ಮೊದಲ ತ್ತೈಮಾಸಿಕ ಅವಧಿಯಲ್ಲಿ ನಗರ ಪ್ರದೇಶದ ನಿರುದ್ಯೋಗ ಪ್ರಮಾಣ ಶೇ.12.6ರಿಂದ ಶೇ.7.6ಕ್ಕೆ ಇಳಿಕೆಯಾಗಿದೆ. ಈ ಬಗ್ಗೆ ರಾಷ್ಟ್ರೀಯ ಮಾದರಿ ಸಮೀಕ್ಷಾ ಸಂಸ್ಥೆ (ಎನ್‌ಎಸ್‌ಎಸ್‌ಒ) ವರದಿಯಲ್ಲಿ ಅಭಿಪ್ರಾಯಪಡಲಾಗಿದೆ. ಹೀಗಾಗಿ, ದೇಶದಲ್ಲಿ ಉದ್ಯೋಗಗಗಳು ಮತ್ತು ಅದಕ್ಕೆ ಬೇಕಾಗಿರುವ ಮಾನವ ಸಂಪನ್ಮೂಲ ಹೆಚ್ಚಾಗಿದೆ ಎಂದು ವಿಶ್ಲೇಷಿಸಲಾಗಿದೆ. ಈ ವರ್ಷದ ಜನವರಿಯಿಂದ ಮಾರ್ಚ್ ಅವಧಿಯಲ್ಲಿ ನಿರುದ್ಯೋಗ ಪ್ರಮಾಣ ಶೇ.8.2 ಆಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್… ರಸ್ತೆಯಲ್ಲೇ ನಡೆಯಿತು ಪವಾಡ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ
Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್
Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್ ಜಾಮೀನ ಮಂಜೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.