Loksabha ಚುನಾವಣೆಗೆ ಸಜ್ಜು: ಜ.12ರಿಂದ ದೇಶಾದ್ಯಂತ ಪಿಎಂ ಮೋದಿ ಪ್ರವಾಸ
ವಿವಿಧ ರಾಜ್ಯಗಳಿಗೆ ಭೇಟಿ, ಸರಕಾರದ ಸಾಧನೆಗಳ ವಿವರಣೆ... ಫೆಬ್ರವರಿ ಅಂತ್ಯದವರೆಗೆ ಹಲವು ಪ್ರಚಾರ ರ‍್ಯಾಲಿಗಳಲ್ಲಿ ಭಾಗಿ
Team Udayavani, Jan 10, 2024, 6:35 AM IST
ಹೊಸದಿಲ್ಲಿ: ಮುಂಬರುವ ಲೋಕಸಭೆ ಚುನಾ ವಣೆಗಾಗಿ ಈಗಾಗಲೇ ಬಿಜೆಪಿ ಮತ್ತು ಕಾಂಗ್ರೆಸ್ ಪ್ರಚಾರ ಕಾರ್ಯವನ್ನು ಆರಂಭಿಸಿವೆ. ಇದರ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಜ.12ರಿಂದ ಫೆಬ್ರವರಿ ಅಂತ್ಯದ ವರೆಗೆ ದೇಶಾದ್ಯಂತ ಪ್ರವಾಸ ನಡೆಸಿ, ಎಲ್ಲ ರಾಜ್ಯಗಳಿಗೆ ಭೇಟಿ ನೀಡಲಿದ್ದಾರೆ. ಈ ವೇಳೆ ಕಳೆದ 9 ವರ್ಷಗಳಲ್ಲಿ ಸರಕಾರದ ಸಾಧನೆಗಳು ಮತ್ತು ಅಭಿವೃದ್ಧಿ ಕಾರ್ಯಗಳ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ರಾಜ್ಯಗಳ ಭೇಟಿ ಸಂದರ್ಭದಲ್ಲಿ ಸಾರ್ವಜನಿಕ ರ‍್ಯಾಲಿಗಳಲ್ಲಿ ಭಾಗವಹಿಸುವ ಅವರು, ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ ಹಾಗೂ ಕೋಟ್ಯಂತರ ರೂಪಾಯಿ ವೆಚ್ಚದ ಹಲವು ಮೆಗಾ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಅವರು ಜ.12ರಂದು ಮಹಾರಾಷ್ಟ್ರಕ್ಕೆ ಭೇಟಿ ನೀಡುತ್ತಿದ್ದಾರೆ. ಈ ವೇಳೆ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಲೋಕಾರ್ಪಣೆ ಮಾಡಲಿದ್ದಾರೆ. 13ರಂದು ಬಿಹಾರದ ಪಶ್ಚಿಮ ಚಂಪಾರಣ್ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಫೆಬ್ರವರಿ ಅಂತ್ಯದ ವೇಳೆಗೆ ತೆಲಂಗಾಣ, ಪಶ್ಚಿಮ ಬಂಗಾಲ, ಬಿಹಾರ, ಉತ್ತರ ಪ್ರದೇಶ, ತಮಿಳುನಾಡು…ಹೀಗೆ ಸರಕಾರ ರಚನೆಗೆ ಮುಖ್ಯ ಪಾತ್ರ ವಹಿಸುವ ಎಲ್ಲ ರಾಜ್ಯಗಳಿಗೆ ಭೇಟಿ ನೀಡಿ, ಹಲವು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.
ಬಿಹಾರ, ಉತ್ತರ ಪ್ರದೇಶದಂತಹ ದೊಡ್ಡ ರಾಜ್ಯ ಗಳಿಗೆ 2-3 ಬಾರಿ ಭೇಟಿ ನೀಡಲಿದ್ದಾರೆ. ಇದೇ ವೇಳೆ ಬಿಜೆಪಿಯಿಂದ ಆಯೋಜಿಸುವ ಸಾರ್ವಜ ನಿಕ ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದರ ನಡುವೆಯೇ ಅಯೋಧ್ಯೆ ರಾಮ ಮಂದಿರದಲ್ಲಿ ಜ.22ರಂದು ನಡೆಯುವ ರಾಮಲಲ್ಲಾ ಪ್ರಾಣಪ್ರತಿಷ್ಠೆ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.