ಲಿಂಗ ಪರಿವರ್ತನೆ ನಿಷೇಧ
ಇಂಥ ಕಾನೂನು ಜಾರಿಗೆ ತಂದ ಮೊದಲ ರಾಜ್ಯವಿದು
Team Udayavani, Aug 30, 2019, 5:18 AM IST
ಚೆನ್ನೈ: ಶಿಶು ಮತ್ತು ಮಕ್ಕಳ ಲಿಂಗ ಪರಿವರ್ತನೆ ಶಸ್ತ್ರಚಿಕಿತ್ಸೆಯನ್ನು ನಿಷೇಧಿಸಿ ತಮಿಳುನಾಡು ಸರ್ಕಾರ ಸರ್ಕಾರ ಆದೇಶ ಹೊರಡಿಸಿದೆ. ಕಳೆದ ಏಪ್ರಿಲ್ನಲ್ಲಿ ಮದ್ರಾಸ್ ಹೈಕೋರ್ಟ್ ಆದೇಶಕ್ಕೆ ಅನುಗುಣವಾಗಿ ರಾಜ್ಯ ಸರ್ಕಾರ ಈ ಪ್ರಕಟಣೆ ಹೊರಡಿಸಿದೆ. ಆದರೆ ಜೀವಕ್ಕೆ ಅಪಾಯವಿರುವಂಥ ಸಂದರ್ಭಗಳಲ್ಲಿ ಈ ಶಸ್ತ್ರ ಚಿಕಿತ್ಸೆ ನಡೆಸಲು ಅನುಮತಿ ನೀಡಲಾಗುತ್ತದೆ ಎಂದು ಆದೇಶದಲ್ಲಿ ಸೂಚಿಸಲಾಗಿದೆ. ಇಂಥ ಆದೇಶ ಹೊರಡಿಸಿದ ಮೊದಲ ರಾಜ್ಯ ತಮಿಳುನಾಡು ಆಗಿದೆ.
ಇದಕ್ಕೆ ಸಮಿತಿಯೊಂದು ಅನುಮತಿ ನೀಡಲಿದ್ದು, ಇದರಲ್ಲಿ ಮಕ್ಕಳ ತಜ್ಞರು, ಎಂಡೋಕ್ರಿನಾಲಜಿಸ್ಟ ಹಗೂ ಸಾಮಾಜಿಕ ಕಾರ್ಯಕರ್ತರು ಮತ್ತು ಸರ್ಕಾರಿ ಪ್ರತಿನಿಧಿಗಳು ಇರಲಿದ್ದಾರೆ. ವೈದ್ಯಕೀಯ ಶಿಕ್ಷಣ ನಿರ್ದೇಶಕರು ಈ ಸಮಿತಿಯನ್ನು ರಚಿಸುತ್ತಾರೆ. ಕಳೆದ ಏಪ್ರಿಲ್ನಲ್ಲಿ ಈ ಸಂಬಂಧ ದಂಪತಿ ಮದ್ರಾಸ್ ಕೋರ್ಟ್ ಮೊರೆ ಹೋಗಿದ್ದರು. ಈ ವೇಳೆ ವಿಶ್ವ ಆರೋಗ್ಯ ಸಂಸ್ಥೆ ಕೂಡ ಶಿಶುಗಳ ಲಿಂಗ ಪರಿವರ್ತನೆ ಮಾಡಬಾರದು ಎಂದು ಅಭಿಪ್ರಾಯ ವ್ಯಕ್ತಪಡಿಸಿದೆ. ಹೀಗಾಗಿ ಇದನ್ನು ನಿಷೇಧಿಸಬೇಕು ಎಂದು ಕೋರ್ಟ್ ಅಭಿಪ್ರಾಯಪಟ್ಟಿತ್ತು.
40 ಕ್ಕೂ ಹೆಚ್ಚು ವಿಧದ ಭಿನ್ನ ಲಿಂಗೀಯರಿದ್ದಾರೆ. ಭಿನ್ನ ಲಿಂಗ ವರ್ತನೆಯು ಹುಟ್ಟುತ್ತಲೇ ಬರುವುದಿಲ್ಲ. ವ್ಯಕ್ತಿಯ ವಿಕಾಸದ ಯಾವುದೇ ಹಂತದಲ್ಲಿ ಇದು ಕಾಣಿಸಿಕೊಳ್ಳಬಹುದು. ಅಲ್ಲದೆ, ಒಮ್ಮೆ ಲಿಂಗ ಪರಿವರ್ತನೆ ಮಾಡಿದರೆ ಮತ್ತೆ ಮರಳಿಸಲಾಗುವುದಿಲ್ಲ ಎಂದೂ ಕೋರ್ಟ್ ಅಭಿಪ್ರಾಯಪಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Successful: ರಾಜ್ಯದ 4,873 ಗ್ರಾಮಗಳು ಬಯಲು ಶೌಚ ಮುಕ್ತ: ಕೇಂದ್ರದ ಮೆಚ್ಚುಗೆ
Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ
ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ
Sheesh Mahal Row: ಶೀಶ್ಮಹಲ್ ವರ್ಸಸ್ ರಾಜ್ ಮಹಲ್: ದಿಲ್ಲೀಲಿ ಬಿಜೆಪಿ, ಆಪ್ ಹೈಡ್ರಾಮ
Foundation: ಆಂಧ್ರ ಅಭಿವೃದ್ಧಿಗೆ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡುವೆವು: ಮೋದಿ
MUST WATCH
ಹೊಸ ಸೇರ್ಪಡೆ
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!
Sullia: ಮಗುವಿಗೆ ಸುಟ್ಟು ಗಾಯ ಮಾಡಿದ್ದ ತಾಯಿ; ಆರೋಪ ಸಾಬೀತು; ಶಿಕ್ಷೆ ಪ್ರಕಟ
Naxals Surrender: ಶರಣಾದ ನಕ್ಸಲರ ಪ್ರಕರಣಗಳಿಗೆ ತ್ವರಿತ ನ್ಯಾಯಾಲಯ: ಸಿಎಂ ಸಿದ್ದರಾಮಯ್ಯ
Dinner Politics: ಊಟ, ಅಜೆಂಡಾ ನಮ್ಮದು, ಬೇರೆಯವರಿಗೆ ಆತಂಕ ಏಕೆ?: ಸತೀಶ್ ಜಾರಕಿಹೊಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.