Germany visas; ಭಾರತೀಯ ಉದ್ಯೋಗಿಗಳಿಗೆ 20,000 ದಿಂದ 90,000ಕ್ಕೆ ಏರಿಕೆ: ಪ್ರಧಾನಿ ಮೋದಿ
'ಮೇಕ್ ಫಾರ್ ದಿ ವರ್ಲ್ಡ್'ಗೆ ಸೇರಲು ಸರಿಯಾದ ಸಮಯ...
Team Udayavani, Oct 25, 2024, 7:49 PM IST
ಹೊಸದಿಲ್ಲಿ: ಹೂಡಿಕೆಗೆ ಭಾರತಕ್ಕಿಂತ ಉತ್ತಮವಾದ ಸ್ಥಳವಿಲ್ಲ ಮತ್ತು ದೇಶದ ಬೆಳವಣಿಗೆಯ ಕತೆಗೆ ಸೇರಲು ಇದು ಸರಿಯಾದ ಸಮಯ ಎಂದ ಪ್ರಧಾನಿ ನರೇಂದ್ರ ಮೋದಿ, ದೇಶದಲ್ಲಿ ಹೂಡಿಕೆ ಮಾಡಲು ಜರ್ಮನಿಯ ಉದ್ಯಮಗಳನ್ನು ಶುಕ್ರವಾರ ಆಹ್ವಾನಿಸಿದ್ದಾರೆ.
ಇಲ್ಲಿ 18 ನೇ ಏಷ್ಯಾ-ಪೆಸಿಫಿಕ್ ಕಾನ್ಫರೆನ್ಸ್ ಆಫ್ ಜರ್ಮನ್ ಬಿಸಿನೆಸ್ 2024 ಅನ್ನು ಉದ್ದೇಶಿಸಿ ಮಾತನಾಡಿ, ವಿದೇಶಿ ಹೂಡಿಕೆದಾರರು ಭಾರತದ ಬೆಳವಣಿಗೆಯ ಕತೆಯಲ್ಲಿ ಭಾಗವಹಿಸಲು, ‘ಮೇಕ್ ಇನ್ ಇಂಡಿಯಾ’ ಉಪಕ್ರಮ ಮತ್ತು ‘ಮೇಕ್ ಫಾರ್ ದಿ ವರ್ಲ್ಡ್’ಗೆ ಸೇರಲು ಸರಿಯಾದ ಸಮಯ ಇದಾಗಿದೆ ಎಂದು ಒತ್ತಿ ಹೇಳಿದರು.
ನುರಿತ ಭಾರತೀಯ ಉದ್ಯೋಗಿಗಳಿಗೆ ವೀಸಾಗಳನ್ನು 20,000 ರಿಂದ 90,000 ಕ್ಕೆ ಹೆಚ್ಚಿಸಲು ಜರ್ಮನಿ ನಿರ್ಧರಿಸಿರುವುದರಿಂದ ಭಾರತದ ಕೌಶಲ್ಯಪೂರ್ಣ ಮಾನವಶಕ್ತಿಯಲ್ಲಿ ಯುರೋಪಿಯನ್ ರಾಷ್ಟ್ರವು ವ್ಯಕ್ತಪಡಿಸಿರುವ ವಿಶ್ವಾಸ ಅದ್ಭುತವಾಗಿದೆ ಎಂದರು.
“ಭಾರತವು ಜಾಗತಿಕ ವ್ಯಾಪಾರ ಮತ್ತು ಉತ್ಪಾದನಾ ಕೇಂದ್ರವಾಗುತ್ತಿದೆ. ಭಾರತವು ಪ್ರಜಾಪ್ರಭುತ್ವ, ಜನಸಂಖ್ಯಾಶಾಸ್ತ್ರ, ಬೇಡಿಕೆ ಮತ್ತು ಮಾಹಿತಿಯ ಬಲವಾದ ಸ್ತಂಭಗಳ ಮೇಲೆ ನಿಂತಿದೆ. ರಸ್ತೆಗಳು ಮತ್ತು ಬಂದರುಗಳಲ್ಲಿ ದಾಖಲೆಯ ಹೂಡಿಕೆಗಳನ್ನು ಮಾಡುತ್ತಿದೆ ಮತ್ತು ಇಂಡೋ-ಪೆಸಿಫಿಕ್ ಪ್ರದೇಶವು ಪ್ರಪಂಚದ ಭವಿಷ್ಯಕ್ಕಾಗಿ ಬಹಳ ಮುಖ್ಯವಾಗಿದೆ” ಎಂದರು.
ಜರ್ಮನಿ ಛಾನ್ಸಲರ್ ಮೆಚ್ಚುಗೆ
ರಷ್ಯಾ- ಉಕ್ರೇನ್ ಮತ್ತು ಮಧ್ಯಪ್ರಾಚ್ಯ ಸಂಘರ್ಷ ಪರಿಹರಿಸುವ ನಿಟ್ಟಿನಲ್ಲಿ ಭಾರತ ಪ್ರಧಾನಿ ನರೇಂದ್ರ ಮೋದಿ ವಹಿಸುತ್ತಿರುವ ಪಾತ್ರದ ಬಗ್ಗೆ ಜರ್ಮನಿ ಛಾನ್ಸಲರ್ ಒಲಾಫ್ ಶೋಲ್ಜ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
3 ದಿನಗಳ ಭಾರತ ಪ್ರವಾಸದಲ್ಲಿರುವ ಅವರು ಹೊಸದಿಲ್ಲಿಯಲ್ಲಿ ಪ್ರಧಾನಿ ಮೋದಿ ಜತೆಗೆ ವಿಸ್ತೃತ ಮಾತುಕತೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸಂಘರ್ಷ ಮುಕ್ತಾಯಗೊಳಿ ಸುವ ನಿಟ್ಟಿನಲ್ಲಿ ವಿಶ್ವಾಸಾರ್ಹ ಸಂಬಂಧಗಳನ್ನು ಬೆಳೆಸುವ ಮೂಲಕ ಸಮಸ್ಯೆಗಳಿಗೆ ಪರಿಹಾರ ಒದಗಿಸಲು ಬಯಸುವ ಭಾರತದ ಪ್ರಯತ್ನಕ್ಕೆ ಬೆಂಬಲವಿದೆ ಎಂದಿದ್ದಾರೆ. ಪ್ರಧಾನಿ ಮೋದಿ ಅವರ ಪ್ರಯತ್ನ ಹಾಗೂ ಬದ್ಧತೆ ಬಗ್ಗೆ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುತಿನ್, ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಮೆಚ್ಚುಗೆ ವ್ಯಕ್ತ ಪಡಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್ ಶಿವಸೇನೆ ಇಂಗಿತ!
Kota; ಮತ್ತೊಬ್ಬ ವಿದ್ಯಾರ್ಥಿ ಆತ್ಮಹ*ತ್ಯೆ: ವರ್ಷದ 17ನೇ ಕೇಸು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.