ರಾಹುಲ್ ಮದುವೆ ಯಾವಾಗ.. ಮಹಿಳೆ ಕೇಳಿದ ಪ್ರಶ್ನೆಗೆ ಸೋನಿಯಾ ಗಾಂಧಿ ಕೊಟ್ಟ ಉತ್ತರವೇನು ಗೊತ್ತಾ?
Team Udayavani, Jul 29, 2023, 3:11 PM IST
ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಾರ್ವಜನಿಕರನ್ನ ತಲುಪುವ ಪ್ರಯತ್ನದಲ್ಲಿ ಹರಿಯಾಣದ ಸೋನಿಪತ್ನ ರೈತ ಮಹಿಳೆಯರೊಂದಿಗೆ ಸಂವಾದದಲ್ಲಿ ನಿರತರಾಗಿದ್ದಾರೆ. ಅವರೊಂದಿಗಿನ ಸಂಭಾಷಣೆಯ ವಿಡಿಯೋಗಳನ್ನು ಟ್ವಿಟರ್ನಲ್ಲಿ ಹಂಚಿಕೊಳ್ಳುತ್ತಿದ್ದಾರೆ.
ರಾಹುಲ್ ಗಾಂಧಿ ಅವರು ಇತ್ತೀಚೆಗೆ ಮಹಿಳೆಯರ ಹೊಲಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಸೋನಿಯಾ ಗಾಂಧಿ ಅವರ ನಿವಾಸದಲ್ಲಿ ರೈತ ಮಹಿಳೆಯರಿಗೆ ಭೋಜನಕೂಟ ಏರ್ಪಡಿಸುವ ಭರವಸೆ ನೀಡಿದ್ದರು. ತನ್ನ ಭರವಸೆಯನ್ನು ಈಡೇರಿಸಿದ ರಾಹುಲ್,ರೈತ ಮಹಿಳೆಯರನ್ನ ಪ್ರಿಯಾಂಕಾ ಗಾಂಧಿ ಮನೆಗೆ ಆಹ್ವಾನಿಸಿ, ಸೋನಿಯಾ ಗಾಂಧಿ ಜೊತೆಗೆ ಭೋಜನಕ್ಕೆ ವ್ಯವಸ್ಥೆ ಮಾಡಿದ್ದರು.
ಹೀಗೆ ಮನೆಗೆ ಬಂದ ರೈತ ಮಹಿಳೆಯರ ಪೈಕಿ ಓರ್ವ ಮಹಿಳೆ ರಾಹುಲ್ ಅವರ ಮದುವೆ ಯಾವಾಗ? ಮಾಡಲಿದ್ದೀರಿ ಎಂದು ಸೋನಿಯಾ ಗಾಂಧಿ ಅವರನ್ನು ಪ್ರಶ್ನಿಸಿದ್ದಾರೆ. ಇದಕ್ಕೆ ನಗುತ್ತಲೇ ಉತ್ತರಿಸಿದ ಸೋನಿಯಾ ಗಾಂಧಿ ʻನೀವು ಹುಡುಗಿಯನ್ನು ಹುಡುಕಿ..ʼ ಎಂದು ಉತ್ತರಿಸಿದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ.
मां, प्रियंका और मेरे लिए एक यादगार दिन, कुछ खास मेहमानों के साथ!
सोनीपत की किसान बहनों का दिल्ली दर्शन, उनके साथ घर पर खाना, और खूब सारी मज़ेदार बातें।
साथ मिले अनमोल तोहफे – देसी घी, मीठी लस्सी, घर का अचार और ढेर सारा प्यार।
पूरा वीडियो यूट्यूब पर:https://t.co/2rATB9CQoz pic.twitter.com/8ptZuUSDBk
— Rahul Gandhi (@RahulGandhi) July 29, 2023
ಈ ವೇಳೆ ಮಹಿಳೆಯರ ಜೊತೆಗೆ ಆಹಾರ, ಮಹಿಳಾ ಸಬಲೀಕರಣ ಮತ್ತು ಜಿಎಸ್ಟಿ ಬಗ್ಗೆ ಚರ್ಚೆ ನಡೆಸಿದರು. ಸರ್ಕಾರ ನನ್ನ ಮನೆಯನ್ನು ಕಿತ್ತುಕೊಂಡ ಹಿನ್ನಲೆ ದೆಹಲಿಯಲ್ಲಿರುವ ತನ್ನ ಸಹೋದರಿ ಪ್ರಿಯಾಂಕಾ ಗಾಂಧಿ ಅವರ ಮನೆಗೆ ಆಹ್ವಾನಿಸಿದ್ದೇನೆ ಎಂದು ರಾಹುಲ್ ಗಾಂಧಿ ತಮ್ಮ ಟ್ವಿಟರ್ ಪೋಸ್ಟ್ನಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.