Ghaziabad: ನ್ಯಾಯಾಲಯದಲ್ಲಿ ನ್ಯಾಯಾಧೀಶರ ಜತೆ ವಕೀಲರ ಘರ್ಷಣೆ… ಪೊಲೀಸರಿಂದ ಲಾಠಿ ಚಾರ್ಜ್
Team Udayavani, Oct 29, 2024, 4:03 PM IST
ಗಾಜಿಯಾಬಾದ್: ನ್ಯಾಯಾಧೀಶರು ಮತ್ತು ವಕೀಲರ ನಡುವಿನ ವಾಗ್ವಾದ ಹಿಂಸಾರೂಪಕ್ಕೆ ತಿರುಗಿ ಪೊಲೀಸರಿಂದ ಲಾಠಿ ಚಾರ್ಜ್ ನಡೆದ ಘಟನೆ ಮಂಗಳವಾರ(ಅ.29) ಗಾಜಿಯಾಬಾದ್ ಜಿಲ್ಲಾ ನ್ಯಾಯಾಲಯದಲ್ಲಿ ನಡೆದಿದೆ.
ಜಿಲ್ಲಾ ನ್ಯಾಯಾಲಯದಲ್ಲಿ ಜಾಮೀನು ಕುರಿತ ಅರ್ಜಿ ವಿಚಾರಣೆ ನಡೆಯುತ್ತಿತ್ತು ಎನ್ನಲಾಗಿದೆ ಈ ವೇಳೆ ನ್ಯಾಯಾಧೀಶರು ಹಾಗೂ ವಕೀಲರ ನಡುವೆ ಮಾತಿನ ಚಕಮಕಿ ನಡೆದಿದ್ದು ಇದು ವಿಕೋಪಕ್ಕೆ ತಿರುಗಿ ಘರ್ಷಣೆಗೆ ಕಾರಣವಾಗಿದೆ ಕೊನೆಗೆ ನ್ಯಾಯಾಧೀಶರು ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ಕರೆಸಿ ವಕೀಲರನ್ನು ನ್ಯಾಯಾಲಯದಿಂದ ಹೊರ ಕಳುಹಿಸುವ ಪ್ರಯತ್ನ ನಡೆದಿದೆ ಈ ವೇಳೆ ಪೊಲೀಸರು ಹಾಗೂ ವಕೀಲರ ನಡುವೆ ಘರ್ಷಣೆಗಳು ನಡೆದು ಬಳಿಕ ಪೊಲೀಸರು ನ್ಯಾಯಾಲಯದ ಒಳಗಿದ್ದ ಖುರ್ಚಿಗಳನ್ನು ಎತ್ತಿ ವಕೀಲರನ್ನು ನ್ಯಾಯಾಲಯದಿಂದ ಹೊರ ಹಾಕಿದ್ದಾರೆ, ಈ ಘರ್ಷಣೆಯಲ್ಲಿ ಕೆಲ ವಕೀಲರಿಗೆ ಕೈ, ಕಾಲಿಗೆ ಸಣ್ಣ ಮಟ್ಟದ ಗಾಯಗಳಾಗಿದ್ದು, ಪೊಲೀಸರ ವರ್ತನೆ ವಿರುದ್ಧ ವಕೀಲರು ನ್ಯಾಯಾಲಯದ ಹೊರಗೆ ಪ್ರತಿಭಟನೆಗೆ ಮುಂದಾಗಿದ್ದಾರೆ ಎನ್ನಲಾಗಿದೆ.
ವಕೀಲರ ಮೇಲೆ ಲಾಠಿ ಚಾರ್ಜ್ ಮಾಡಿದ ಪೊಲೀಸರು:
ನ್ಯಾಯಾಲಯದ ಕೊಠಡಿಯಲ್ಲಿ ಗದ್ದಲ ಎಬ್ಬಿಸುತ್ತಿದ್ದ ವಕೀಲರ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದು ಅಷ್ಟು ಮಾತ್ರವಲ್ಲದೆ ನ್ಯಾಯಾಲಯದ ಕೊಠಡಿಯಲ್ಲಿದ್ದ ಕುರ್ಚಿಗಳನ್ನು ಎತ್ತಿ ನ್ಯಾಯಾಲಯದ ಕೊಠಡಿಯಿಂದ ವಕೀಲರನ್ನು ಹೊರ ಓಡಿಸಿದ್ದಾರೆ. ಇದಾದ ನಂತರ ವಿವಾದ ಮತ್ತಷ್ಟು ಹೆಚ್ಚಾಗಿ. ಘಟನೆಯನ್ನು ಖಂಡಿಸಿ ನ್ಯಾಯಾಲಯದ ಹೊರಗೆ ವಕೀಲರು ಧರಣಿ ನಡೆಸಿ ನ್ಯಾಯಾಧೀಶರು ಮತ್ತು ಪೊಲೀಸರ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ.
#Ghaziabad
कोर्ट में वकीलों और जज में हुई झड़प, पुलिस ने वकीलों को कोर्ट रूम से बाहर खदेड़ा, कोर्ट रूम के अंदर लाठियां चली, कुर्सियां फेंकी गईं। एक केस की सुनवाई के दौरान ये झड़प हुई थी pic.twitter.com/vsAiYeKrzr— Akash Garg (@gargakash6957) October 29, 2024
ಘರ್ಷಣೆ ಶುರುವಾಗಿದ್ದು ಹೀಗೆ:
ಮಾಹಿತಿ ಪ್ರಕಾರ ಜಿಲ್ಲಾ ನ್ಯಾಯಾಧೀಶರ ನ್ಯಾಯಾಲಯದಲ್ಲಿ ಪ್ರಕರಣವೊಂದರ ವಿಚಾರಣೆ ನಡೆಯುತ್ತಿತ್ತು ಎನ್ನಲಾಗಿದ್ದು ನ್ಯಾಯಾಧೀಶರು ಪ್ರಕರಣದ ವಿಚಾರಣೆಯನ್ನು ಮುಂದಿನ ದಿನಕ್ಕೆ ಮುಂದೂಡಿದ್ದಾರೆ ಆದರೆ ವಕೀಲರು ವಿಚಾರಣೆ ಇಂದೇ ನಡೆಸಬೇಕೆಂದು ಪಟ್ಟುಹಿಡಿದಿದ್ದರು, ಒಂದು ವೇಳೆ ವಿಚಾರಣೆ ನಡೆಸಲು ಸಾಧ್ಯವಾಗದಿದ್ದರೆ ಈ ಪ್ರಕರಣವನ್ನು ಬೇರೆ ನ್ಯಾಯಾಲಯಕ್ಕೆ ವರ್ಗಾಯಿಸಿ ಎಂದು ವಕೀಲರು ನ್ಯಾಯಾಧೀಶರಿಗೆ ಮನವಿ ಮಾಡಿದ್ದರು ಆದರೆ ನ್ಯಾಯಾಧೀಶರು ತಮ್ಮ ಹೇಳಿಕೆಗೆ ಅಚಲವಾಗಿದ್ದು, ಇಂದು ಪ್ರಕರಣವನ್ನು ವರ್ಗಾವಣೆ ಮಾಡುವುದಿಲ್ಲ ಅಥವಾ ವಿಚಾರಣೆ ನಡೆಸುವುದಿಲ್ಲ ಎಂದು ಹೇಳಿ ವಿಚಾರಣೆಯ ಮುಂದಿನ ದಿನಾಂಕವನ್ನು ಹೇಳಿದ್ದರು ಇದರಿಂದ ಕುಪಿತಗೊಂಡ ವಕೀಲರು ನ್ಯಾಯಾಧೀಶರ ಜೊತೆ ಮಾತಿನ ಚಕಮಕಿ ನಡೆಸಿ ಬಳಿಕ ವಿಕೋಪಕ್ಕೆ ತಿರುಗಿ ಘರ್ಷಣೆ ಏರ್ಪಟ್ಟಿದೆ.
गाज़ियाबाद में जिला जज और वकीलों के बीच हुई तू-तू मैं-मैं ने बवाल का रूप ले लिया। कचहरी बनी अखाड़ा, वकीलों पर लाठीचार्ज और जजों ने कोर्ट में काम बंद किया। #Ghaziabad #CourtClash #LawAndOrder pic.twitter.com/as0t39tfaq
— Ajay Tomar | अजय तोमर (@ajay_tomar1) October 29, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Girl Trapped: 24 ಗಂಟೆಗಳ ಕಾಲ 540 ಅಡಿ ಆಳದ ಕೊಳವೆ ಬಾವಿಯಲ್ಲಿ ಸಿಲುಕಿದ್ದ ಯುವತಿ ಮೃತ್ಯು
Hunger Strike: ಹದಗೆಟ್ಟ ಅರೋಗ್ಯ… ಪ್ರಶಾಂತ್ ಕಿಶೋರ್ ಆಸ್ಪತ್ರೆಗೆ ದಾಖಲು
Delhi Election 2025: ದೆಹಲಿ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆ; ಬಿಜೆಪಿ V/s AAP
Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು
UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bidar: ಗುತ್ತಿಗೆದಾರರ ಬಿಲ್ ಬಾಕಿ ಉಳಿಯಲು ಬಿಜೆಪಿ ಕಾರಣ, ಗ್ಯಾರಂಟಿಯಲ್ಲ: ಜಾರಕಿಹೊಳಿ
Jaiswal: ಚಾಂಪಿಯನ್ಸ್ ಟ್ರೋಫಿಗೆ ಯಶಸ್ವಿ ಜೈಸ್ವಾಲ್; ಇಂಗ್ಲೆಂಡ್ ಸರಣಿಯಲ್ಲೇ ಪದಾರ್ಪಣೆ?
Maha Kumbh Mela 2025: 144 ವರ್ಷಗಳಿಗೊಮ್ಮೆ ಮಹಾಕುಂಭ ಮೇಳ- ಇದರ ಹಿಂದಿದೆ ರೋಚಕ ಸಂಗತಿ!
Dharmasthala: ಭಾರತೀಯ ಆಧ್ಯಾತ್ಮಿಕ ತವರೂರು ಶ್ರೀ ಕ್ಷೇತ್ರ ಧರ್ಮಸ್ಥಳ: ಜಗದೀಪ್ ಧನ್‌ಕರ್
BSY POCSO Case: ಜ.10ಕ್ಕೆ ವಿಚಾರಣೆ ಮುಂದೂಡಿದ ಧಾರವಾಡ ಹೈಕೋರ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.