ಅಂಜೂರ ಮರದಿಂದ 32 ಅಡಿ ಗಣೇಶನ ಮೂರ್ತಿ ತಯಾರು
Team Udayavani, Aug 31, 2022, 7:25 AM IST
ಚೆನ್ನೈ: ಅಂಜೂರ ಮರದಿಂದ ತಯಾರಿಸಲಾದ 32 ಅಡಿ ಎತ್ತರದ ಗಣೇಶನ ಮೂರ್ತಿಯು ಈ ವರ್ಷದ ಗಣೇಶೋತ್ಸವದ ವಿಶೇಷತೆಯಲ್ಲಿ ಒಂದಾಗಿದೆ.
ಗಣೇಶ ಚತುರ್ಥಿಯ ಅಂಗವಾಗಿ ತಮಿಳುನಾಡಿನ ನಾಗಪಟ್ಟಣಂ ಜಿಲ್ಲೆಯಲ್ಲಿ 83 ಅಂಜೂರದ ಮರಗಳನ್ನು ಬಳಸಿ ನಿಂತ ಭಂಗಿಯ ಗಣೇಶನ ಮೂರ್ತಿಯನ್ನು ತಯಾರಿಸಲಾಗಿದೆ.
ಕಲಾವಿದರಾದ ಸ್ಥಪತಿ ತಿರುನಾವುಕರಸರ್ ಈ ಬೃಹತ್ ಮೂರ್ತಿಯನ್ನು ಕೆತ್ತಿದ್ದಾರೆ. ನಾಗೈ ವಿಶ್ವರೂಪ ವಿನಾಯಗಾರ್ ಸಮಿತಿ ವತಿಯಿಂದ ಈ ಮೂರ್ತಿಯು ಪ್ರತಿಷ್ಠಾಪನೆಗೊಳ್ಳುತ್ತಿದೆ. “ಜನವರಿಯಲ್ಲಿ ಪವಿತ್ರ ಅಂಜೂರ ಮರದಿಂದ ಗಣೇಶನ ಮೂರ್ತಿಯ ಕೆತ್ತನೆಯ ಕಾರ್ಯ ಆರಂಭಿಸಲಾಯಿತು.
ಕೆಲವು ದಿನಗಳ ಹಿಂದೆ ಕೆತ್ತನೆ ಕಾರ್ಯ ಪೂರ್ಣಗೊಂಡಿತು. ಅಂಜೂರ ಮರದಲ್ಲಿ ಮೂರ್ತಿ ತಯಾರಿಸಬೇಕೆಂಬುದು ನನ್ನ 15 ವರ್ಷಗಳ ಕನಸಾಗಿತ್ತು. ಕೊರೊನಾ ಹಿನ್ನೆಲೆಯಲ್ಲಿ ಎರಡು ವರ್ಷಗಳಿಂದ ಸ್ಥಗಿತಗೊಂಡಿದ್ದ ಗಣೇಶೋತ್ಸವ ಈ ವರ್ಷ ಅದ್ದೂರಿಯಾಗಿ ಆಚರಿಸಲಾಗುತ್ತಿದೆ,” ಎಂದು ಸ್ಥಪತಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.