Kerala; 5 ವರ್ಷಗಳಲ್ಲಿ 64 ಜನರಿಂದ ಲೈಂಗಿ*ಕ ದೌರ್ಜನ್ಯ: ಯುವತಿ ಹೇಳಿಕೆ !!
ಶಾಲೆಯಲ್ಲಿ ಕ್ರೀಡೆಯಲ್ಲಿ ಸಕ್ರಿಯಳಾಗಿದ್ದ ವೇಳೆ ಶುರುವಾಯಿತು... ನೆರವಿಗೆ ಧಾವಿಸಿದ NGO
Team Udayavani, Jan 11, 2025, 6:33 PM IST
ಪತ್ತನಂತಿಟ್ಟ: ಕೇರಳದಲ್ಲಿ ನಡೆದ ಕಳವಳಕಾರಿ ಘಟನೆಯೊಂದರಲ್ಲಿ ಕಳೆದ ಐದು ವರ್ಷಗಳಲ್ಲಿ 64 ಮಂದಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು 18 ವರ್ಷದ ಯುವತಿಯೊಬ್ಬಳು ಹೇಳಿಕೊಂಡಿದ್ದು, ಈ ಕುರಿತು ಪ್ರಕರಣಗಳು ದಾಖಲಾಗಿವೆ.
ಕೌನ್ಸೆಲಿಂಗ್ ಅವಧಿಯಲ್ಲಿ ತನ್ನ ಮೇಲಾದ ದೌರ್ಜನ್ಯವನ್ನು ಬಹಿರಂಗಪಡಿಸಿದ ನಂತರ ಮಕ್ಕಳ ಕಲ್ಯಾಣ ಸಮಿತಿ (CWC) ನೀಡಿದ ದೂರಿನ ಮೇರೆಗೆ ಪತ್ತನಂತಿಟ್ಟ ಪೊಲೀಸರು ಪ್ರಕರಣಗಳನ್ನು ದಾಖಲಿಸಿದ್ದಾರೆ.
ಮಹಿಳಾ ಸಮಕ್ಯ ಎಂಬ NGO ಸದಸ್ಯರು ದೈನಂದಿನ ಕ್ಷೇತ್ರ ಭೇಟಿಯ ಭಾಗವಾಗಿ ಯುವತಿಯ ಮನೆಗೆ ಬಂದಾಗ ಕಳವಳಕಾರಿ ವಿಷಯ ಬೆಳಕಿಗೆ ಬಂದಿದೆ. ತಾನು ಐದು ವರ್ಷಗಳಿಂದ ಅನುಭವಿಸಿದ ಭಯಾನಕತೆಯನ್ನು ವಿವರಿಸಿದ ನಂತರ, ಎನ್ಜಿಒ ಪತ್ತನಂತಿಟ್ಟ ಜಿಲ್ಲೆಯ ಮಕ್ಕಳ ಕಲ್ಯಾಣ ಸಮಿತಿಗೆ ವರದಿ ನೀಡಿದೆ.
ಕೌನ್ಸೆಲಿಂಗ್ ಅವಧಿಯಲ್ಲಿ ಮನಶ್ಶಾಸ್ತ್ರಜ್ಞ ರ ಮುಂದೆ ನೋವು ತೋಡಿಕೊಂಡಿದ್ದು, ತನ್ನ ನೆರೆಹೊರೆಯವರು ನಾನು 13 ವರ್ಷದವಳಿದ್ದಾಗ ದೌರ್ಜನ್ಯ ಆರಂಭಿಸಿದ್ದರು ಎಂದು ಹೇಳಿಕೊಂಡಿದ್ದಾಳೆ.
ಶಾಲೆಯಲ್ಲಿ ಕ್ರೀಡೆಯಲ್ಲಿ ಸಕ್ರಿಯವಾಗಿದ್ದ ಹುಡುಗಿಗೆ ತರಬೇತಿ ಅವಧಿಯಲ್ಲಿ ಲೈಂಗಿ*ಕ ದೌರ್ಜನ್ಯ ನಡೆದಿದೆ. ಆಕೆಯ ಕೆಲವು ವಿಡಿಯೋ ಗಳನ್ನು ಮಾಡಿ ಹಂಚಲಾಗಿದೆ. ನಿರಂತರ ಶೋಷಣೆ ಆಕೆಗೆ ತೀವ್ರ ಆಘಾತ ಉಂಟುಮಾಡಿದೆ.
ಪ್ರಕರಣಕ್ಕೆ ಸಂಬಂಧಿಸಿ 10ಕ್ಕೂ ಹೆಚ್ಚು ಜನರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂತ್ರಸ್ತೆಯಿಂದ ವಿವರವಾದ ಹೇಳಿಕೆ ದಾಖಲಿಸಿಕೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಕರಣ ಗಂಭೀರವಾದದ್ದು
”ಸಮಿತಿಯು ಸಂತ್ರಸ್ತೆಗೆ ಅಗತ್ಯ ಆರೈಕೆ ಮತ್ತು ರಕ್ಷಣೆ ನೀಡಲಿದೆ.ಪ್ರಕರಣ ಗಂಭೀರವಾಗಿದ್ದು, ಬಾಲಕಿ 8 ನೇ ತರಗತಿಯಲ್ಲಿದ್ದಾಗಿನಿಂದ ಸುಮಾರು ಐದು ವರ್ಷಗಳಿಂದ ದೌರ್ಜನ್ಯಕ್ಕೊಳಗಾಗಿದ್ದಾಳೆ. ಆಕೆ ಕ್ರೀಡೆಯಲ್ಲಿ ಸಕ್ರಿಯಳಾಗಿದ್ದಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿಯೂ ದೌರ್ಜನ್ಯಕ್ಕೆ ಒಳಗಾಗಿದ್ದಾಳೆ ” ಎಂದು ದೂರು ದಾಖಲಿಸಿರುವ ಸಿಡಬ್ಲ್ಯುಸಿ ಪತ್ತನಂತಿಟ್ಟ ಜಿಲ್ಲಾಧ್ಯಕ್ಷ ಎನ್.ರಾಜೀವ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ayodhya; ರಾಮಮಂದಿರ ಪ್ರಾಣ ಪ್ರತಿಷ್ಠಾ ಮೊದಲ ವಾರ್ಷಿಕೋತ್ಸವ ಸಂಭ್ರಮ
Ramesh Bidhuri ಬಿಜೆಪಿಯ ಸಿಎಂ ಫೇಸ್ ಎಂದು ಅಭಿನಂದನೆ ಸಲ್ಲಿಸಿದ ಕೇಜ್ರಿವಾಲ್!
Kannauj: ಕುಸಿದು ಬಿದ್ದ ನಿರ್ಮಾಣ ಹಂತದ ಕಟ್ಟಡದ ಮೇಲ್ಛಾವಣಿ… ಹಲವರು ಸಿಲುಕಿರುವ ಶಂಕೆ
Mine Tragedy: ಇಂದು ಮತ್ತೆ ಮೂರು ಮೃತದೇಹಗಳು ಪತ್ತೆ, ಐವರಿಗಾಗಿ ಮುಂದುವರೆದ ಕಾರ್ಯಾಚರಣೆ
Tragedy: Live-In ಸಂಗಾತಿಯನ್ನು ಕೊಂದು ದೇಹವನ್ನು ಫ್ರಿಡ್ಜ್ ನಲ್ಲಿ ಇಟ್ಟು ಮನೆ ತೊರೆದ ಹಂತಕ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.