ಶಾಲಾ ಬಿಸಿಯೂಟದ ಪಾತ್ರೆಗೆ ಬಿದ್ದು ಸಾವನ್ನಪ್ಪಿದ ಮೂರು ವರ್ಷದ ಮಗು
Team Udayavani, Feb 4, 2020, 1:06 PM IST
ಸಾಂದರ್ಭಿಕ ಚಿತ್ರ: Representative Image
ಮಿರ್ಜಾಪುರ: ಶಾಲೆಯ ಬಿಸಿಯೂಟ ತಯಾರಿಕೆಯ ಸಮಯದಲ್ಲಿ ಮಗುವೊಂದು ಪಾತ್ರೆಗೆ ಬಿದ್ದು ಸಾವನ್ನಪ್ಪಿದ ಘಟನೆ ದೆಹಲಿಯ ಮಿರ್ಜಾಪುರದಲ್ಲಿ ನಡೆದಿದೆ.
ದೆಹಲಿಯ ಮಿರ್ಜಾಪುರದ ಲಾಲ್ ಗಂಜ್ ಪ್ರದೇಶದ ರಾಂಪುರ ಅತಾರಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ಸಾವನ್ನಪ್ಪಿದ ಬಾಲಕಿಯನ್ನು ಮೂರು ವರ್ಷದ ಆಂಚಲ್ ಎಂದು ಗುರುತಿಸಲಾಗಿದೆ.
ಶಾಲೆಯಲ್ಲಿ ಕಟ್ಟಡ ಸಾಮಾಗ್ರಿಗಳನ್ನು ಹಾಕಲಾಗಿತ್ತು. ಓಡಿಕೊಂಡು ಬಂದ ಪುಟ್ಟ ಬಾಲಕಿ ಕಟ್ಟಡ ಸಾಮಾಗ್ರಿಗಳಿಗೆ ಎಡವಿ ಪಾತ್ರೆಯೊಳಗೆ ಬಿದ್ದಿದ್ದಾಳೆ. ಕೂಡಲೇ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಸುಮಾರು 80% ರಷ್ಟು ಸುಟ್ಟ ಗಾಯಗಳಿಂದ ಬಳಲುತ್ತಿದ್ದ ಕಾರಣ ಚಿಕಿತ್ಸೆ ಫಲಿಸದೆ ಬಾಲಕಿ ಮೃತಪಟ್ಟಿದ್ದಾಳೆ ಎಂದು ವರದಿಯಾಗಿದೆ.
ಅಡುಗೆ ಮಾಡುವವನ ನಿರ್ಲಕ್ಷ್ಯದಿಂದ ಮಗು ಪಾತ್ರೆಗೆ ಬಿದ್ದಿದೆ ಎಂದು ಮಗುವಿನ ತಂದೆ ಆರೋಪಿಸಿದ್ದಾರೆ. ಮಗು ಪಾತ್ರೆಗೆ ಬೀಳುವ ಸಮಯದಲ್ಲಿ ಅಡುಗೆಯವ ಕಿವಿಗೆ ಇಯರ್ ಫೋನ್ ಹಾಕಿಕೊಂಡಿದ್ದ. ಮಗು ಬೀಳುವುದನ್ನು ಕಂಡ ಆತ ಅಲ್ಲಿಂದ ಓಡಿ ಹೋಗಿದ್ದಎನ್ನಲಾಗಿದೆ.
ಶಾಲೆಯ ಮುಖ್ಯೋಪಧ್ಯಾಯರನ್ನು ಅಮಾನತುಗೊಳಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ ಐಆರ್ ದಾಖಲಾಗಿದ್ದು, ಹೆಚ್ಚಿನ ತನಿಖೆಗೆ ಆದೇಶಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belthangady: ಬೈಕ್ ಸವಾರ ಸಾವು ಪ್ರಕರಣ; ಸರಕಾರಿ ಬಸ್ ಚಾಲಕನಿಗೆ ಶಿಕ್ಷೆ;ದಂಡ
Egg Thrown: ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ: ಬಿಜೆಪಿ ನಾಯಕರು ಗರಂ
New Products KMF: ಮಾರುಕಟ್ಟೆಗೆ ಬಂತು “ನಂದಿನಿ’ ಇಡ್ಲಿ, ದೋಸೆ ಹಿಟ್ಟು
GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ
Pro Kabaddi League-11: ಇಂದು ಎಲಿಮಿನೇಟರ್ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.