ಉತ್ತರಾಖಂಡದಲ್ಲಿ ಹಿಮನದಿ ಒಡೆದು ಪ್ರವಾಹ ಸೃಷ್ಟಿ : ಹಲವರು ನಾಪತ್ತೆ
ಸ್ಥಳಕ್ಕಾಗಮಿಸಿ ಕಾರ್ಯಚರಣೆಯಲ್ಲಿ ತೊಡಗಿದ ರಕ್ಷಣಾ ಪಡೆಗಳು
Team Udayavani, Feb 7, 2021, 2:07 PM IST
ಚಮೋಲಿ : ನಂದದೇವಿ ಹಿಮನದಿ ಸಿಡಿದು ನೀರಿನ ಮಟ್ಟ ಇದ್ದಕ್ಕಿದ್ದಂತೆ ಏರಿ ಜಲಾಶಯಗಳು ತುಂಬಿ ಹರಿದಿವೆ. ಆ ಪರಿಣಾಮದಿಂದಾಗಿ ಉತ್ತರಾಖಂಡದ ಚಮೋಲಿ ಜಿಲ್ಲೆಯ ಪವರ್ ಪ್ರಾಜೆಕ್ಟ್ ಬಳಿಯ ಧೌಲಿಗಂಗ ಎಂಬಲ್ಲಿ ಭಾರಿ ಪ್ರವಾಹ ಸೃಷ್ಟಿಯಾಗಿದೆ.
ಓದಿ : ಗೇರು ಕೃಷಿಯಲ್ಲಿ ಕಂಡುಬರುವಂತಹ ಚಹಾ ಸೊಳ್ಳೆ ರೋಗದ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ,
ಚಮೋಲಿಯ ತಪೋವನ್ ಪ್ರದೇಶದ ರೈನಿ ಗ್ರಾಮದ ಹಿಮನದಿಯ ಒಡೆದಿದ್ದು, ಜಲಾಶಯಗಳು ತುಂಬಿ ಹರಿದಿವೆ. ಪ್ರವಾಹದ ಕಾರಣದಿಂದ ಹಲವು ಆಸ್ತಿ ಪಾಸ್ತಿಗಳಿಗೆ ನಷ್ಟವುಂಟಾಗಿದ್ದು, ಹಲವರು ನೀರು ಪಾಲಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಇನ್ನು, ಹಲವರ ಪ್ರಾಣಹಾನಿಯಾಗಿರುವ ಸಾದ್ಯತೆ ಕೂಡ ಇದೆ ಎಂದು ಎಎನ್‌ಐ ವರದಿ ತಿಳಿಸಿದೆ.
#WATCH | Water level in Dhauliganga river rises suddenly following avalanche near a power project at Raini village in Tapovan area of Chamoli district. #Uttarakhand pic.twitter.com/syiokujhns
— ANI (@ANI) February 7, 2021
ಈಗಾಗಲೇ ರಕ್ಷಣಾ ತಂಡ ಸ್ಥಳಕ್ಕೆ ತಲುಪಿದ್ದು, ಅವಾಂತರ ಸೃಷ್ಟಿಯಾದ ಭಾಗದಿಂದ ಜನರ ಸ್ಥಳಾಂತರಿಸುವ ಕಾರ್ಯ ನಡೆಯುತ್ತಿದೆ. ನೂರಾರು ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ಐಟಿಬಿಪಿ) ಸಿಬ್ಬಂದಿಯನ್ನು ಕೂಡ ಸ್ಥಳಕ್ಕೆ ಕರೆತರಲಾಗಿದೆ ಎಂದು ವರದಿ ತಿಳಿಸಿದೆ.
ಏತನ್ಮಧ್ಯೆ, ಧೌಲಿಗಂಗಾ ನದಿಯ ದಂಡೆಯಲ್ಲಿರುವ ಹಳ್ಳಿಗಳಲ್ಲಿ ವಾಸಿಸುವ ಜನರನ್ನು ಸ್ಥಳಾಂತರಿಸುವಂತೆ ಚಮೋಲಿ ಜಿಲ್ಲಾಧಿಕಾರಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಸದ್ಯ, ಸ್ಥಳಕ್ಕೆ ಜಿಲ್ಲಾಧಿಕಾರಿ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಭೇಟಿ ನೀಡಿ ಘಟನೆಯ ಬಗ್ಗೆ ಪರಿಶೀಲಿಸಿದ್ದಾರೆ.
तपोवन में रेस्क्यू कार्य जारी।
पुलिस प्रसाशन मोके पर। pic.twitter.com/OuQT3wEVz5
— chamoli police (@chamolipolice) February 7, 2021
ಓದಿ : ಬೆಟ್ಟದಲ್ಲಿ ಬೆಂಕಿ : ಚಿರತೆಗೆ ಹೆದರಿ ಜಾಗರಣೆ
ಇನ್ನು, ಪರಿಸ್ಥಿತಿಯನ್ನು ಎದುರಿಸಲು ಜಿಲ್ಲಾಡಳಿತ, ಪೊಲೀಸ್ ಮತ್ತು ವಿಪತ್ತು ನಿರ್ವಹಣಾ ಇಲಾಖೆಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಉತ್ತರಾಖಂಡ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಹೇಳಿದ್ದಾರೆ. ಯಾವುದೇ ರೀತಿಯ ವದಂತಿಗಳಿಗೆ ಜನರು ಗಮನ ಹರಿಸಬೇಡಿ ಎಂದು ಮುಖ್ಯಮಂತ್ರಿ ಮನವಿ ಮಾಡಿದರು, ಸರ್ಕಾರ ಅಗತ್ಯವಿರುವ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಅಲ್ಕಾನಂದ ಸಮೀಪವಿರುವ ಪ್ರದೇಶಗಳಿಂದ ಜನರನ್ನು ಸ್ಥಳಾಂತರಿಸಲಾಗುತ್ತಿದೆ ಮತ್ತು ಮುಂಜಾಗ್ರತಾ ಕ್ರಮವಾಗಿ ಭಾಗೀರಥಿ ನದಿಯ ಹರಿವನ್ನು ನಿಲ್ಲಿಸಲಾಗಿದೆ ಎಂದು ರಾವತ್ ಮಾಹಿತಿ ನೀಡಿದ್ದಾರೆ.
ಪ್ರವಾಹ ಪೀಡಿತ ಪ್ರದೇಶದಲ್ಲಿ ಸಿಲುಕಿರುವವರಿಗೆ ಸಿಎಂ ರಾವತ್ ಸಹಾಯವಾಣಿ ಸಂಖ್ಯೆಯನ್ನು ಬಿಡುಗಡೆ ಮಾಡಿದ್ದಾರೆ. “ನೀವು ಪೀಡಿತ ಪ್ರದೇಶದಲ್ಲಿ ಸಿಲುಕಿಕೊಂಡಿದ್ದರೆ ದಯವಿಟ್ಟು 1070, 1905 ಅಥವಾ 9557444486 ಗೆ ಕರೆ ಮಾಡಿ. ಘಟನೆಯ ಬಗ್ಗೆ ಹಳೆಯ ವೀಡಿಯೊಗಳ ವದಂತಿಗಳನ್ನು ಹರಡಬೇಡಿ” ಎಂದು ಮುಖ್ಯಮಂತ್ರಿ ರಾವತ್ ತಿಳಿಸಿದ್ದಾರೆ.
आप 1905 पर भी सम्पर्क कर सकते हैं https://t.co/WnpJRbcUek
— Trivendra Singh Rawat (@tsrawatbjp) February 7, 2021
ಓದಿ : ಅಶ್ಲೀಲ ವೀಡಿಯೋ ಚಿತ್ರೀಕರಣದಲ್ಲಿ ಭಾಗಿಯಾಗಿದ್ದ ಮುಂಬಯಿ ನಟಿ ಬಂಧನ..!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Borewell Tragedy: ಹೇಗಾದರು ಮಾಡಿ ನನ್ನ 3ವರ್ಷದ ಮಗಳನ್ನು ರಕ್ಷಣೆ ಮಾಡಿ ಕೊಡಿ.. ತಾಯಿ ಅಳಲು
Video: 2 ವಾರದಲ್ಲಿ ಮದುವೆಯಾಗಬೇಕಿದ್ದ ಯುವತಿ 70 ಅಡಿ ಎತ್ತರದ ಸೇತುವೆಯಿಂದ ನದಿಗೆ ಜಿಗಿದಳು
EX PM: ಪಂಚಭೂತಗಳಲ್ಲಿ ಲೀನ; ಸಕಲ ಸರ್ಕಾರಿ-ಸೇನಾ ಗೌರವದೊಂದಿಗೆ ಡಾ.ಸಿಂಗ್ ಅಂತ್ಯಕ್ರಿಯೆ
Snowfall; ಭಾರೀ ಹಿಮಪಾತದಿಂದಾಗಿ ಜಮ್ಮು-ಶ್ರೀನಗರ ಹೆದ್ದಾರಿ ಬಂದ್; ಸಿಲುಕಿದ ವಾಹನಗಳು
Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.