20 ನಿಮಿಷ ಮೊದಲೇ ಪ್ಲಾಟ್‌ಫಾರ್ಮ್ ಗೆ ಹೋಗಿ


Team Udayavani, Jan 7, 2019, 12:30 AM IST

railway-platform-india.jpg

ನವದೆಹಲಿ:  ಇನ್ನು ಮುಂದೆ ನೀವು ರೈಲು ಹೊರಡುವ 20 ನಿಮಿಷ ಮುಂಚಿತವಾಗಿಯೇ ರೈಲ್ವೆ ಪ್ಲಾಟ್‌ಫಾರ್ಮ್ ಅನ್ನು ತaxಲೇಬೇಕು. ಇಲ್ಲದಿದ್ದರೆ, ಹೋದ ದಾರಿಗೆ ಸುಂಕವಿಲ್ಲ ಎನ್ನುತ್ತಾ ವಾಪಸ್‌ ಬರಬೇಕು!

 ವಿಮಾನ ನಿಲ್ದಾಣದ ರೀತಿಯಲ್ಲೇ ಒಂದು ರೈಲು, ಪ್ಲಾಟ್‌ಫಾರಂಗೆ ಆಗಮಿಸುವುದಕ್ಕೂ 15-20 ನಿಮಿಷ ಮೊದಲೇ ಪ್ಲಾಟ್‌ಫಾರಂ ಅನ್ನು ಮುಚ್ಚುವಂಥ ಪ್ರಸ್ತಾವನೆಯನ್ನು ರೈಲ್ವೆ ಇಲಾಖೆ ರೂಪಿಸಿದೆ. ಅಲಹಾಬಾದ್‌ ಹಾಗೂ ಹುಬ್ಬಳ್ಳಿ ರೈಲ್ವೆ ಸ್ಟೇಷನ್‌ನಲ್ಲಿ ಈ ಯೋಜನೆಯನ್ನು ಜಾರಿಗೆ ತರಲು ಕಾರ್ಯವಿಧಾನ ರೂಪಿಸಲಾಗಿದೆ. ಇಲ್ಲಿ ಅತ್ಯಾಧುನಿಕ ತಂತ್ರಜ್ಞಾನವನ್ನು ಬಳಸಿ ಪ್ರಯಾಣಿಕರ ಭದ್ರತಾ ತಪಾಸಣೆ ಮಾಡಲಾಗುತ್ತದೆ. ಸದ್ಯ ವಿಮಾನ ನಿಲ್ದಾಣದಲ್ಲಿ ಒಂದು ಗಂಟೆಗೂ ಹೆಚ್ಚು ಮೊದಲೇ ತೆರಳಬೇಕಿದ್ದು, ಭದ್ರತಾ ತಪಾಸಣೆ ನಡೆಸಿ ನಂತರ ಬೋರ್ಡಿಂಗ್‌ ಸ್ಥಳಕ್ಕೆ ತೆರಳಲು ಅನುವು ಮಾಡಲಾಗುತ್ತದೆ. ನಿರ್ದಿಷ್ಟ ಬೋರ್ಡಿಂಗ್‌ ಸಮಯದ ನಂತರ ಆಗಮಿಸಿದವರನ್ನು ವಾಪಸ್‌ ಕಳುಹಿಸಲಾಗುತ್ತದೆ. ಆದರೆ ರೈಲ್ವೆ ರೂಪಿಸಿರುವ ಯೋಜನೆಯಲ್ಲಿ ಕೇವಲ 20 ನಿಮಿಷ ಮುಂಚಿತವಾಗಿ ರೈಲ್ವೆ ನಿಲ್ದಾಣವನ್ನು ಪ್ರಯಾಣಿಕರು ತಲುಪಬೇಕಿರುತ್ತದೆ.

ಗೋಡೆ ನಿರ್ಮಾಣ:
ಇದಕ್ಕೂ ಮೊದಲು ರೈಲ್ವೆ ನಿಲ್ದಾಣದಲ್ಲಿ ಯಾವ ಯಾವ ಭಾಗದಿಂದ ಜನರು ಆಗಮಿಸುತ್ತಾರೆ ಎಂಬುದನ್ನು ಗುರುತಿಸಿ, ಆ ಎಲ್ಲ ಪ್ರದೇಶಗಳನ್ನೂ ಗೋಡೆ ನಿರ್ಮಾಣ ಮಾಡಿ ಮುಚ್ಚಲಾಗುತ್ತದೆ. ಇನ್ನು ಕೆಲವು ಕಡೆ ಆರ್‌ಪಿಎಫ್ ಸಿಬ್ಬಂದಿಯನ್ನು ನಿಯೋಜಿಸಲಾಗುತ್ತದೆ. ಜೊತೆಗೆ ತೆರೆಯಬಹುದಾದ ಗೇಟ್‌ಗಳನ್ನೂ ನಿರ್ಮಿಸಿ ಪ್ಲಾಟ್‌ಫಾರ್ಮ್ಗೆ ಮುಖ್ಯ ದ್ವಾರದ ಹೊರತಾಗಿ ಬೇರೆ ದಾರಿಯಿಂದ ಪ್ರವೇಶಿಸಲು ಸಾಧ್ಯವಾಗದಂತೆ ಮಾಡಲಾಗುತ್ತದೆ. ಪ್ರವೇಶ ದ್ವಾರದಲ್ಲಿ ಭದ್ರತಾ ತಪಾಸಣೆ ಮಾಡಲಾಗುತ್ತದೆ. ಜನರು ರೈಲನ್ನೇರಲು ಕೊನೇ ಕ್ಷಣದಲ್ಲಿ ಬಂದು ರೈಲು ತಪ್ಪಿಸಿಕೊಳ್ಳುವುದನ್ನು ಈ ಮೂಲಕ ತಡೆಯಲು ನಿರ್ಧರಿಸಲಾಗಿದೆ.

ಭದ್ರತೆಗೆ ಏನೇನಿದೆ?
ಆದರೆ ಈ ಯೋಜನೆಯಿಂದಾಗಿ ಭದ್ರತಾ ಸಿಬ್ಬಂದಿಯ ಸಂಖ್ಯೆ ಹೆಚ್ಚಳವಾಗುವುದಿಲ್ಲ. ಬದಲಿಗೆ ಭದ್ರತೆ ತಪಾಸಣೆಗೆ ಯಂತ್ರಗಳನ್ನು ಹೆಚ್ಚಾಗಿ ಅವಲಂಬಿಸಲಾಗುತ್ತದೆ. ಸಿಸಿಟಿವಿ ಕ್ಯಾಮೆರಾಗಳು, ಅಕ್ಸೆಸ್‌ ಕಂಟ್ರೋಲ್‌, ಬ್ಯಾಗ್‌ ಮತ್ತು ಲಗೇಜ್‌ ತಪಾಸಣೆ ವ್ಯವಸ್ಥೆ, ಬಾಂಬ್‌ ಪತ್ತೆ ಮತ್ತು ವಿಲೇವಾರಿ ವ್ಯವಸ್ಥೆಯನ್ನು ಅಳವಡಿಸಲಾಗುತ್ತದೆ. ಅಷ್ಟೇ ಅಲ್ಲ ಫೇಸ್‌ ರಿಕಾಗ್ನಿಶನ್‌(ಮುಖ ಗುರುತಿಸುವಂಥ ವ್ಯವಸ್ಥೆ) ಸೌಲಭ್ಯವನ್ನೂ ಅಳವಡಿಸಲಾಗುತ್ತದೆ. ಇದರಿಂದ ಯಾವುದೇ ಅಪರಾಧಿ ರೈಲ್ವೆ ಸ್ಟೇಷನ್‌ಗೆ ಕಾಲಿಟ್ಟರೂ ತಕ್ಷಣ ಈ ತಂತ್ರಜ್ಞಾನವು ಆತನನ್ನು ಗುರುತಿಸುತ್ತದೆ. 2016ರಲ್ಲೇ ರೂಪಿಸಲಾದ ಇಂಟಗ್ರೇಟೆಡ್‌ ಸೆಕ್ಯುರಿಟಿ ಸಿಸ್ಟಂನ ಅಂಗವಾಗಿ ಇದನ್ನು ಜಾರಿಗೊಳಿಸಲಾಗುತ್ತಿದ್ದು, ಈ ಒಟ್ಟು ಯೋಜನೆಗೆ 385 ಕೋಟಿ ರೂ. ನಿಗದಿಸಲಾಗಿದೆ.

202 ರೈಲು ನಿಲ್ದಾಣಗಳಲ್ಲಿ:
ಎಲ್ಲ ಪ್ರಯಾಣಿಕರನ್ನೂ ವೈಯಕ್ತಿಕ ತಪಾಸಣೆ ಮಾಡುವುದಿಲ್ಲ. ಬದಲಿಗೆ, 8 ಅಥವಾ 10ನೇ ಪ್ರಯಾಣಿಕರನ್ನು ಒಮ್ಮೆ ತಪಾಸಣೆ ಮಾಡಲಾಗುತ್ತದೆ. ಆರಂಭದಲ್ಲಿ ಹುಬ್ಬಳ್ಳಿ ಹಾಗೂ ಅಲಹಾಬಾದ್‌ನಲ್ಲಿ ಇದನ್ನು ಜಾರಿಗೆ ತರಲಾಗುತ್ತದೆ. ನಂತರದ ಹಂತದಲ್ಲಿ 202 ರೈಲ್ವೆ ಸ್ಟೇಷನ್‌ಗಳಲ್ಲೂ ಇದನ್ನು ಜಾರಿಗೊಳಿಸಲು ರೂಪುರೇಷೆ ಸಿದ್ಧಪಡಿಸಲಾಗಿದೆ.
 

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.