ಪರ್ರೀಕರ್ ಗೋವಾ ಸಿಎಂ ಆಗಿ ಮುಂದುವರಿಯುವರು: ಡೆಪ್ಯುಟಿ ಸ್ಪೀಕರ್
Team Udayavani, Sep 15, 2018, 12:38 PM IST
ಪಣಜಿ : ಮನೋಹರ್ ಪರ್ರೀಕರ್ ಅವರು ಗೋವೆಯ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ಗೋವಾ ವಿಧಾನಸಭಾ ಡೆಪ್ಯುಟಿ ಸ್ಪೀಕರ್ ಹೇಳಿದ್ದಾರೆ. ಹಾಗಾಗಿ ಪರ್ರೀಕರ್ ಅನಾರೋಗ್ಯದ ಪ್ರಯುಕ್ತ ಗೋವೆಯಲ್ಲಿ ಮುಖ್ಯಮಂತ್ರಿಯನ್ನು ಬದಲಾಯಿಸಲಾಗುವುದೆಂಬ ಊಹಾಪೋಹಗಳಿಗೆ ತೆರೆ ಬಿದ್ದಂತಾಗಿದೆ.
ಗೋವೆಯ ಮುಖ್ಯಮಂತ್ರಿ ಪರ್ರೀಕರ್ ಅವರು ವಿಮಾನ ಮೂಲಕ ಇಂದು ಶನಿವಾರ ಮಧ್ಯಾಹ್ನ 1.30ಕ್ಕೆ ದಿಲ್ಲಿಯ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸಯನ್ಸಸ್ (ಏಮ್ಸ್) ತಲುಪಿ ಅಲ್ಲಿ ಹೆಚ್ಚಿನ ಚಿಕಿತ್ಸೆ ಪಡೆಯಲಿದ್ದಾರೆ ಎಂದು ಡೆಪ್ಯುಟಿ ಸ್ಪೀಕರ್ ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ಅವರು ಪರ್ರೀಕರ್ ಅವರಿಗಾಗಿ ವಿಶೇಷ ವಿಮಾನವನ್ನು ವ್ಯವಸ್ಥೆಗೊಳಿಸಿದ್ದಾರೆ. ಏಮ್ಸ್ ನಲ್ಲಿ ಪರ್ರೀಕರ್ ಅವರನ್ನು ಸಂಪೂರ್ಣ ಖಾಸಗಿ ವಾರ್ಡ್ ನಲ್ಲಿ ಇರಿಸಿ ಹೆಚ್ಚುವರಿ ಚಿಕಿತ್ಸೆ ನೀಡಲಾಗುವುದು ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Results: ಮಹಾರಾಷ್ಟ್ರ, ಝಾರ್ಖಂಡ್ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ
Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!
Winter Session: ಸಂಸತ್ ಅಧಿವೇಶನ ನಾಡಿದ್ದಿಂದ:”ವಕ್ಫ್’ ವಿಧೇಯಕ ಮಂಡನೆ?
Election Results: ಝಾರ್ಖಂಡ್, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?
Adani ಗ್ರೂಪ್ಗೆ ಸಾಲ: ಜಾಗತಿಕ ಬ್ಯಾಂಕ್ಗಳಿಂದ ತಾತ್ಕಾಲಿಕ ಬ್ರೇಕ್?
MUST WATCH
ಹೊಸ ಸೇರ್ಪಡೆ
Election Results: ಮಹಾರಾಷ್ಟ್ರ, ಝಾರ್ಖಂಡ್ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ
ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.