ಗೋವಾ ವಿಧಾನಸಭಾ ಚುನಾವಣೆ ಹಿನ್ನೆಲೆ: ಮತದಾನಕ್ಕೆ ಎಂ3 ಆಧುನಿಕ ಇವಿಎಂ ಮಷಿನ್
Team Udayavani, Oct 5, 2021, 11:57 AM IST
ಪಣಜಿ: ಗೋವಾ ವಿಧಾನಸಭಾ ಚುನಾವಣೆಯು ಜನವರಿ 2022 ರಲ್ಲಿ ನಡೆಯಲಿರುವ ಸಾಧ್ಯತೆಯನ್ನು ಚುನಾವಣಾ ಆಯೋಗ ವ್ಯಕ್ತಪಡಿಸಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಎಂ3 ಆಧುನಿಕ ಇವಿಎಂ ಮಷಿನ್ ಗೋವಾಕ್ಕೆ ದಾಖಲಾಗಿದೆ. ಅಕ್ಟೋಬರ್ 26 ರಂದು ಈ ಮಷಿನ್‍ನ ಪ್ರಾಥಮಿಕ ತಪಾಸಣೆ ನಡೆಸಲಾಗುವುದು. ನಂತರ ಈ ಮಷಿನ್ ರಾಜಕೀಯ ಪಕ್ಷ ಹಾಗೂ ಜನ ಸಾಮಾನ್ಯರಿಗೆ ವೀಕ್ಷಣೆಗೆ ಇಡಲಾಗುವುದು ಎಂದು ಚುನಾವಣಾಧಿಕಾರಿ ನಾರಾಯಣ ಸಾವಂತ್ ಮಾಹಿತಿ ನೀಡಿದರು.
ಈ ಕುರಿತಂತೆ ಚರ್ಚೆ ನಡೆಸಲು ಮುಖ್ಯ ಚುನಾವಣಾಧಿಕಾರಿ ಕುಣಾಲ್ ರವರ ಅಧ್ಯಕ್ಷತೆಯಲ್ಲಿ ಸರ್ವಪಕ್ಷೀಯ ಬೈಠಕ್ ನಡೆಸಲಾಯಿತು. ಮುಖ್ಯ ಚುನಾವಣಾ ಆಯೋಗದ ಕಾರ್ಯಾಲಯದಲ್ಲಿ ನಡೆದ ಬೈಠಕ್‍ನಲ್ಲಿ ಬಿಜೆಪಿ, ರಾಷ್ಟ್ರೀಯ ಕಾಂಗ್ರೆಸ್, ಗೋವಾ ಫೊರ್‍ವರ್ಡ್, ರಾಷ್ಟ್ರವಾಧಿ ಕಾಂಗ್ರೇಸ್, ಎಂಜಿಪಿ ಪಕ್ಷದ ಪ್ರತಿನಿಧಿಗಳು ಉಪಸ್ಥಿತರಿದ್ದರು. ಈ ಬೈಠಕ್‍ನ ನಂತರ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಚುನಾವಣಾಧಿಕಾರಿ ನಾರಾಯಣ ಸಾವಂತ್ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.
ಮತದಾರಪಟ್ಟಿಯಲ್ಲಿ ಹೊಸದಾಗಿ ಹೆಸರು ಸೇರಿಸಲು ಮತ್ತು ಹೆಸರು ರದ್ಧುಗೊಳಿಸಲು ನವೆಂಬರ್ 1 ರಿಂದ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ನವೆಂಬರ್ 20-21 ರಂದು ಮತ್ತು 27 -28 ರಂದು ಪ್ರತಿಯೊಂದು ಬೂತ್ ನಲ್ಲಿ ಚುನಾವಣಾಧಿಕಾರಿಗಳು ಉಪಸ್ಥಿತರಿರುವರು. 5 ಜನವರಿ 2022 ರಂದು ಅಂತಿಮ ಮತದಾರಪಟ್ಟಿಯನ್ನು ಘೋಷಿಸಲಾಗುವುದು ಎಂದು ಈ ಸಂದರ್ಭದಲ್ಲಿ ಚುನಾವಣಾಧಿಕಾರಿ ನಾರಾಯಣ ಸಾವಂತ್ ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ
Aligarh ಮುಸ್ಲಿಮ್ ವಿವಿ ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ
Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ
Maharashtra: ಮತ ನೀಡಿದರೆ ಮದುವೆ ಮಾಡಿಸುವೆ: ಶರದ್ ಬಣದ ನಾಯಕ
India-Afghanistan: ಆಫ್ಘನ್ ಜೊತೆಗೆ ಬಾಂಧವ್ಯ ಪುನಃಸ್ಥಾಪನೆಗೆ ಭಾರತ ಸಜ್ಜು?
MUST WATCH
ಹೊಸ ಸೇರ್ಪಡೆ
Karkala: ಡಾ. ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆಯಲ್ಲಿ 24*7 ಸಿಟಿ ಸ್ಕ್ಯಾನ್ ಸೌಲಭ್ಯ ಉದ್ಘಾಟನೆ
Manipal: ಡಿಸಿ ಕಚೇರಿ ಆವರಣದಲ್ಲೂ ಬೀದಿನಾಯಿ ಉಪಟಳ
Malpe: ಕೋಡಿಬೆಂಗ್ರೆ-ಹಂಗಾರಕಟ್ಟೆ ಸಂಪರ್ಕ ಇನ್ನು ದೂರ
Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ
Bengaluru: ಬೆಂಗಳೂರಲ್ಲಿ ಶೀಘ್ರ ಪ್ರತಿ ಕೆಜಿ ಈರುಳ್ಳಿ ಬೆಲೆ 100?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.