ಗೋವಾ ಬಿಜೆಪಿ ಸರ್ಕಾರ ಜನತೆಯ ಪ್ರೀತಿ ಕಳೆದುಕೊಂಡಿದೆ : ದಿನೇಶ್ ಗುಂಡೂರಾವ್
Team Udayavani, Jun 19, 2021, 5:28 PM IST
ಪಣಜಿ: ಗೋವಾ ಬಿಜೆಪಿ ಸರ್ಕಾರ ಜನತೆಯ ಪ್ರೀತಿ ಕಳೆದುಕೊಂಡಿದೆ. ರಾಜ್ಯದ ಜನತೆ ಬಯಸದ ಯೋಜನೆಗಳನ್ನು ಜನರ ಮೇಲೆ ಹೇರಲಾಗಿದೆ. ಈ ಯೋಜನೆಗಳು ಗೋವಾದ ಪರಿಸರವನ್ನು ನಾಶಪಡಿಸುತ್ತಿವೆ ಎಂದು ಕಾಂಗ್ರೆಸ್ ಗೋವಾ ಪ್ರಭಾರಿ ದಿನೇಶ್ ಗುಂಡೂರಾವ್ ಗೋವಾ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಮಡಗಾಂವನಲ್ಲಿ ಶನಿವಾರ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು- ಗೋವಾ ಬಿಜೆಪಿ ಸರ್ಕಾರದ ಬಳಿ ಯಾವುದೇ ನೈತಿಕತೆ ಉಳಿದಿಲ್ಲ. ಕಾನೂನು ಬಾಹಿರವಾಗಿ ಅಧಿಕಾರ ಉಳಿಸಿಕೊಳ್ಳಲು ಎಲ್ಲ ಕೆಲಸವನ್ನೂ ಬಿಜೆಪಿ ಮಾಡುತ್ತಿದೆ. ಬಿಜೆಪಿಯನ್ನು ಸೋಲಿಸಬಲ್ಲ ಏಕೈಕ ಪಜಕ್ಷವೆಂದರೆ ಅದುವೇ ಕಾಂಗ್ರೇಸ್ ಪಕ್ಷ. ಕಳೆದ ಬಾರಿ ಗೋವಾ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಜನತೆ ನಮಗೆ ಮತ ಹಾಕಿ ಗೆಲ್ಲಿಸಿದರೂ ದುರಾದೃಷ್ಠವಶಾತ್ ನಮ್ಮ ಬಳಿ ಸರ್ಕಾರ ರಚಿಸಲು ಸಾಧ್ಯವಾಗಲಿಲ್ಲ. ನಾವು ರಾಜ್ಯದ ಜನರ ಪ್ರೀತಿ ವಿಶ್ವಾಸ ಗಳಿಸಬೇಕು ಎಂದು ಕಾಂಗ್ರೇಸ್ ಕಾರ್ಯಕರ್ತರಿಗೆ ಗುಂಡೂರಾವ್ ಕಿವಿಮಾತು ಹೇಳಿದರು.
2022 ರಲ್ಲಿ ಗೋವಾದಲ್ಲಿ ಕಾಂಗ್ರೇಸ್ ಪಕ್ಷ ಅಧಿಕಾರಕ್ಕೆ ಬಂದರೆ ಗೋವಾದಲ್ಲಿ ಪರಿಸರ ನಾಶಮಾಡಬಲ್ಲ ಎಲ್ಲ ಯೋಜನೆಗಳನ್ನೂ ರದ್ಧುಮಾಡಲಾಗುವುದು ಎಂದು ಗುಂಡೂರಾವ್ ಪುನರುಚ್ಚರಿಸಿದರು. 2019 ರಲ್ಲಿ ಕಾಂಗ್ರೇಸ್ ಪಕ್ಷಕ್ಕೆ ದ್ರೋಹ ಬಗೆದು ಬಿಜೆಪಿಗೆ ಸೇರಿದ ಶಾಸಕರು ಕಾಂಗ್ರೇಸ್ ಪಕ್ಷಕ್ಕೆ ಹಿಂದಿರುಗಲು ಬಯಸುತ್ತಾರೆ. ಆದರೆ ನಾವು ಅವರನ್ನು ಕಾಂಗ್ರೇಸ್ ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ, ಏಕೆಂದರೆ ನಮ್ಮ ಪಕ್ಷದಲ್ಲಿ ಕೆಲ ತತ್ವ ಸಿದ್ಧಾಂತಗಳಿವೆ ಎಂದು ದಿನೇಶ್ ಗುಂಡೂರಾವ್ ನುಡಿದರು.
ಗೋವಾ ಬಿಜೆಪಿ ಸರ್ಕಾರದಲ್ಲಿ ಸಮನ್ವಯತೆಯಿಲ್ಲ ಮುಖ್ಯಮಂತ್ರಿ ತ್ತು ಆರೋಗ್ಯ ಸಚಿವರು ಇವರಿಬ್ಬರ ನಡುವೆ ಪರಸ್ಪರ ವಿಶ್ವಾಸವಿಲ್ಲ ಎಂದು ದಿನೇಶ್ ಗುಂಡೂರಾವ್ ಆಡಳಿತ ಪಕ್ಷ ಬಿಜೆಪಿ ವಿರುದ್ಧ ಠೀಕಾ ಪ್ರಹಾರ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.