ವಿವಾಹಕ್ಕೂ ಮುನ್ನ ಕೌನ್ಸಿಲಿಂಗ್ ಕಡ್ಡಾಯಗೊಳಿಸಿರುವ ಸರ್ಕಾರದ ನಿರ್ಧಾರ ತಪ್ಪು : ತಾನಾವಡೆ
Team Udayavani, Jun 3, 2021, 5:15 PM IST
ಪಣಜಿ: ಸರ್ಕಾರವು ರಾಜ್ಯದಲ್ಲಿ ವಿವಾಹ ನೋಂದಣಿಗೂ ಮುನ್ನ ಕೌನ್ಸಿಲಿಂಗ್ ಖಡ್ಡಾಯಗೊಳಿಸಿರುವುದಕ್ಕೆ ರಾಜ್ಯ ಬಿಜೆಪಿಯಿಂದಲೇ ವಿರೋಧ ವ್ಯಕ್ತವಾಗುವಂತಾಗಿದೆ. ಈ ನಿರ್ಣಯದಿಂದಾಗಿ ಜನತೆಗೆ ಹೆಚ್ಚಿನ ತೊಂದರೆಯುಂಟಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಸದಾನಂದ ತಾನಾವಡೆ ಅಭಿಪ್ರಾಯಪಟ್ಟಿದ್ದಾರೆ.
ರಾಜ್ಯದಲ್ಲಿ ವಿಚ್ಛೇದನಾ ಪ್ರಮಾಣವನ್ನು ನಿಯಂತ್ರಿಸಲು ಸರ್ಕಾರ ಕೈಗೊಂಡಿರುವ ಈ ನಿರ್ಣಯ ಯಶಸ್ವಿಯಾಗುವುದಿಲ್ಲ. ದೇಶದಲ್ಲಿ ವಿಚ್ಛೇದನ ಪ್ರಮಾಣ ಶೇ 28 ರಷ್ಟಿದೆ, ಗೋವಾದಲ್ಲಿ ಈ ಪ್ರಮಾಣ ಶೇ 18 ರಷ್ಟಿದೆ. ಹಾಗೆ ನೋಡಿದರೆ ಗೋವಾದಲ್ಲಿ ವಿಚ್ಛೇದನ ಪ್ರಮಾಣ ಕಡಿಮೆಯಿದೆ. ವಿವಾಹ ನೋಂದಣಿ ಮಾಡಲು ವಿಧಾನವನ್ನು ಅತ್ಯಂತ ಸರಳಗೊಳಿಸಬೇಕಿದೆ, ಈ ನಿಟ್ಟಿನಲ್ಲಿ ಸರ್ಕಾರ ಪ್ರಯತ್ನಿಸಬೇಕು ಎಂದಿದ್ದಾರೆ.
ಇದನ್ನೂ ಓದಿ : ಮತ್ತೆ ಒಂದು ವಾರ ಲಾಕ್ ಡೌನ್ ವಿಸ್ತರಣೆ, ಪ್ಯಾಕೇಜ್ ಘೋಷಣೆ: ಸಿಎಂ ಯಡಿಯೂರಪ್ಪ
ಸದ್ಯ ರಾಜ್ಯದಲ್ಲಿ ವಿವಾಹ ನೋಂದಣಿ ಪ್ರಕ್ರಿಯೆ ಗೊಂದಲದಿಂದ ಕೂಡಿದೆ. ಇದನ್ನು ಸುಲಭಗೊಳಿಸಬೇಕು. ಅದನ್ನು ಹೊರತುಪಡಿಸಿ ವಿವಾಹ ನೋಂದಣಿಗೂ ಮುನ್ನ ಕೌನ್ಸಿಲಿಂಗ್ ಕಡ್ಡಾಯಗೊಳಿಸಿರುವ ಸರ್ಕಾರದ ನಿರ್ಣಯ ತಪ್ಪು ಎಂದು ಹೇಳಿದ್ದಾರೆ.
ಸರ್ಕಾರದ ಈ ನಿರ್ಣಯಕ್ಕೆ ಸಂಬಂಧಿಸಿದಂತೆ ಈಗಾಗಲೇ ಮುಖ್ಯಮಂತ್ರಿ ಪ್ರಮೋದ ಸಾವಂತ್ ರವರ ಬಳಿ ಅಭಿಪ್ರಾಯ ವ್ಯಕ್ತಪಡಿಸಿದ್ದು, ಈ ನಿರ್ಣಯವನ್ನು ಕೂಡಲೇ ರದ್ಧುಗೊಳಿಸುವಂತೆ ಸೂಚಿಸಿದ್ದೇನೆ. ಸರ್ಕಾರವು ಜನತೆಯ ಪರವಾನಗಿ ನಿರ್ಣಯ ತೆಗೆದುಕೊಳ್ಳಬೇಕು. ಈ ನಿಟ್ಟಿನಲ್ಲಿ ನಾನು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿದ್ದೇನೆ ಎಂದಿದ್ದಾರೆ.
ಇದನ್ನೂ ಓದಿ : ಆರ್ಥಿಕ ಸಂಕಷ್ಟ : ವೇತನರಹಿತ ರಜೆ ತೆಗೆದುಕೊಳ್ಳಿ : ಹಿರಿಯ ಉದ್ಯೋಗಿಗಳಿಗೆ ಇಂಡಿಗೋ ಸೂಚನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra polls: ಗೋಪಾಲ್ ಶೆಟ್ಟಿ ನಾಮಪತ್ರ ಹಿಂಪಡೆಯುವಲ್ಲಿ ಯಶಸ್ವಿಯಾದ ಬಿಜೆಪಿ
Maharashtra polls; ಫಲಿತಾಂಶದ ಬಳಿಕವೇ ಸಿಎಂ ಯಾರೆಂದು ನಿರ್ಧಾರ: ಕಾಂಗ್ರೆಸ್
Andhra; ಮಿತ್ರ ಪಕ್ಷ ಟಿಡಿಪಿಯ ಗೃಹ ಸಚಿವೆಗೇ ವಾರ್ನಿಂಗ್ ನೀಡಿದ ಡಿಸಿಎಂ ಪವನ್ ಕಲ್ಯಾಣ್!
Agra: ಭಾರತೀಯ ವಾಯುಪಡೆ ಮಿಗ್ 29 ಯುದ್ಧ ವಿಮಾನ ಪತನ, ಪೈಲಟ್ ಪಾರು
Jammu Kashmir: ಕಲಂ-370- ವಿಧಾನಸಭೆ ಮೊದಲ ಕಲಾಪದಲ್ಲೇ ಪಿಡಿಪಿ-ಬಿಜೆಪಿ ಕೋಲಾಹಲ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.