ಬಹುತೇಕ ಹುದ್ದೆ ತ್ಯಾಗ ಮಾಡಲಿದ್ದಾರೆ ಪಾರೀಕರ್?
Team Udayavani, Oct 13, 2018, 10:04 AM IST
ಪಣಜಿ: ದಿಲ್ಲಿಯ ಏಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗೋವಾ ಸಿಎಂ ಮನೋಹರ್ ಪಾರೀಕರ್ ಶುಕ್ರವಾರ ಆಸ್ಪತ್ರೆಯಲ್ಲೇ ಬಿಜೆಪಿ ಹಾಗೂ ಮಿತ್ರಪಕ್ಷಗಳ ನಾಯಕರ ಜತೆ ಮಾತುಕತೆ ನಡೆಸಿದ್ದಾರೆ. ತಮ್ಮ ಸರಕಾರವು ಸುಸೂತ್ರವಾಗಿ ಸಾಗಲಿ ಎಂಬ ಉದ್ದೇಶದಿಂದ ಈ ಭೇಟಿ ನಡೆದಿದೆ ಎಂದು ಮೂಲಗಳು ತಿಳಿಸಿವೆ. ಬಿಜೆಪಿ ನಾಯಕರು ಹಾಗೂ ಮಿತ್ರಪಕ್ಷಗಳ ನಾಯಕರು ಪ್ರತ್ಯೇಕವಾಗಿ ಪಾರೀಕರ್‌ರನ್ನು ಭೇಟಿಯಾಗಿದ್ದಾರೆ. ಗೋವಾದಲ್ಲಿ ನಾಯಕತ್ವ ಬದಲಾವಣೆ ಆಗುತ್ತದೆ ಎಂಬ ಊಹಾಪೋಹಗಳನ್ನೂ ಈ ನಾಯಕರು ತಳ್ಳಿಹಾಕಿದ್ದಾರೆ. ಇದೇ ವೇಳೆ, ದಸರಾ ಬಳಿಕ ಪಾರೀಕರ್ ಅವರು ತಮ್ಮಲ್ಲಿರುವ ಬಹುತೇಕ ಹುದ್ದೆಗಳನ್ನು ಬಿಟ್ಟುಕೊಡುವ ಸಾಧ್ಯತೆಯಿದೆ ಎಂದು ಗೋವಾ ಫಾರ್ವರ್ಡ್ ಪಕ್ಷದ ನಾಯಕ ವಿಜಯ್ ಸರ್ದೇಸಾಯಿ ಹೇಳಿದ್ದಾರೆ. ಈ ನಡುವೆ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಗೋವಾ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಗಿರೀಶ್ ಚೋಡಂಕರ್ ಜತೆ ಮಾತುಕತೆ ವೇಳೆ, ಪಾರೀಕರ್ ಆರೋಗ್ಯ ವಿಚಾರಿಸಿದ್ದಾರೆ. ಅವರು ಆದಷ್ಟು ಬೇಗ ಗುಣಮುಖರಾಗಲಿ ಎಂದೂ ಹಾರೈಸಿದ್ದಾರೆ ಎಂದು ಚೋಂಡಕರ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್ ಕ್ಷಮೆಗೆ ವೈದ್ಯರ ಪಟ್ಟು
Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್ ವಿರುದ್ಧ ತಾಬ್ಡೆ 100 ಕೋಟಿ ದಾವೆ!
Adani: ಲಂಚ ಕೇಸ್; ಜಗನ್ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ
Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ
Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.