ಮುಂಗಾರು ಅಧಿವೇಶನದಲ್ಲಿ ಯುಸಿಸಿ ಜಾರಿಗೆ ಸಿದ್ಧತೆ; ಪ್ರಮೋದ್ ಸಾವಂತ್
Team Udayavani, Jul 1, 2023, 3:18 PM IST
ಪಣಜಿ: ಮುಂಬರುವ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಮಸೂದೆಯನ್ನು ಮಂಡಿಸಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ. ಲೋಕಸಭೆಯಲ್ಲಿ ಭಾರತೀಯ ಜನತಾ ಪಕ್ಷ ಮಾತ್ರ ಬಹುಮತ ಹೊಂದಿದೆ. ಹಾಗಾಗಿ ಲೋಕಸಭೆಯಲ್ಲಿ ಮಸೂದೆ ಅಂಗೀಕಾರಕ್ಕೆ ಯಾವುದೇ ಅಡ್ಡಿಯಿಲ್ಲ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಏಕರೂಪ ನಾಗರಿಕ ಕಾನೂನು ವಿಚಾರವಾಗಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಪಣಜಿಯಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು ಏಕರೂಪ ನಾಗರಿಕ ಸಂಹಿತೆ ಜಾರಿಗೆ ತಂದ ದೇಶದಲ್ಲೇ ಮೊದಲ ರಾಜ್ಯ ಗೋವಾ ಎಂಬ ಹೆಗ್ಗಳಿಕೆ ನಮಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಏಕರೂಪ ನಾಗರಿಕ ಸಂಹಿತೆಯ ಬಗ್ಗೆ ಪ್ರಸ್ತಾಪಿಸಿದ್ದಾರೆ. ಆದರೆ ಅದನ್ನು ಹೇಗೆ ಮತ್ತು ಯಾವಾಗ ಜಾರಿಗೊಳಿಸಬೇಕು ಎಂಬುದು ಕೇಂದ್ರ ಸರ್ಕಾರಕ್ಕೆ ಬಿಟ್ಟದ್ದು. “ಸಮಾನ ನಾಗರಿಕ ಕಾನೂನು ಜನನ, ಮರಣ ಮತ್ತು ವಿವಾಹಗಳ ನೋಂದಣಿಯನ್ನು ಕಡ್ಡಾಯಗೊಳಿಸಿದೆ. ಈ ಎಲ್ಲಾ ನೋಂದಣಿಗಳನ್ನು ಗೋವಾದಲ್ಲಿ ಮಾಡಲಾಗುತ್ತದೆ, ಇದು ಅಲ್ಪಸಂಖ್ಯಾತರಿಗೆ ಅಥವಾ ಯಾವುದೇ ಸಮುದಾಯಕ್ಕೆ ಹಾನಿಯಾಗುವುದಿಲ್ಲ. ಮಹಿಳಾ ಸಬಲೀಕರಣ ಮತ್ತು ಲಿಂಗ ಸಮಾನತೆಗೆ ಸಮಾನ ನಾಗರಿಕ ಕಾನೂನು ಬಹಳ ಮುಖ್ಯವಾಗಿದೆ.” ಎಂದು ಮುಖ್ಯಮಂತ್ರಿ ಪ್ರಮೋದ ಸಾವಂತ್ ನುಡಿದರು.
“ಇತ್ತೀಚೆಗೆ ಸಮಾಜವಾದಿ ಪಕ್ಷಗಳು ಮತ್ತು ಕಾಂಗ್ರೆಸ್ ಒಂದೇ ನಾಗರಿಕ ಕಾನೂನಿನ ವಿಷಯದಲ್ಲಿ ರಾಜಕೀಯ ಮಾಡುತ್ತಿವೆ, ರಾಜಕೀಯ ಮಾಡುವ ಪಕ್ಷಗಳು ಮಹಿಳಾ ಸಬಲೀಕರಣ ಮತ್ತು ಲಿಂಗ ಸಮಾನತೆಯನ್ನು ಬಯಸುವುದಿಲ್ಲ, ಈ ಕಾನೂನು ಜಾತಿ ಅಥವಾ ಧರ್ಮವನ್ನು ಆಧರಿಸಿಲ್ಲ, ಈ ಕಾನೂನನ್ನು ವಿರೋಧಿಸುವವರು ಕಾನೂನನ್ನು ಅರ್ಥಮಾಡಿಕೊಳ್ಳಬೇಕು. ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆಯ ಅಗತ್ಯದ ಬಗ್ಗೆ ಮಾತನಾಡಿದ್ದಕ್ಕಾಗಿ ನಾನು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಭಿನಂದಿಸುತ್ತೇನೆ ಮತ್ತು ಕೇಂದ್ರ ಸರ್ಕಾರ ಏಕರೂಪ ನಾಗರಿಕ ಸಂಹಿತೆ ತರಲು ಪ್ರಯತ್ನಿಸುತ್ತಿರುವುದು ಒಳ್ಳೆಯದು, ಅದನ್ನು ದೇಶದಲ್ಲಿ ಶೀಘ್ರವಾಗಿ ಜಾರಿಗೆ ತರಲಿ ” ಎಂದು ಹೇಳಿದರು.
“ಕಳೆದ 60 ವರ್ಷಗಳಲ್ಲಿ ಗೋವಾದಲ್ಲಿ ಸಮಾನ ನಾಗರಿಕ ಕಾನೂನಿನ ಬಗ್ಗೆ ಎಂದಿಗೂ ವಿವಾದಗಳಿಲ್ಲ. ಅಲ್ಲದೆ, ಪೋಷಕರ ಮರಣದ ನಂತರ, ಹುಡುಗ ಮತ್ತು ಹುಡುಗಿಯರಿಬ್ಬರೂ ಅವರ ಆಸ್ತಿಯಲ್ಲಿ ಸಮಾನ ಹಕ್ಕುಗಳನ್ನು ಪಡೆಯುತ್ತಾರೆ. ಅದಕ್ಕಾಗಿಯೇ ಸಮಾನ ನಾಗರಿಕ ಕಾನೂನು ಮಹಿಳಾ ಸಬಲೀಕರಣ ಮತ್ತು ಲಿಂಗ ಸಮಾನತೆ ಅಗತ್ಯ ಎಂದು ಅಭಿಪ್ರಾಯಪಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ
Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ
Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್ ತರಾಟೆ
Rajasthan:ಪೊಲೀಸ್ ಭದ್ರತೆಗೆ ಆದ 9 ಲಕ್ಷ ರೂ.ಬಿಲ್ ಪಾವತಿಸಿ: ರಾಜಸ್ಥಾನ ರೈತನಿಗೆ ನೋಟಿಸ್
ED: ಭೂಗತ ಪಾತಕಿ ದಾವೂದ್ ಇಬ್ರಾಹಿಂ ಸಹೋದರ ಫ್ಲ್ಯಾಟ್ ಇ.ಡಿ.ವಶಕ್ಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ
Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ
Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್ ತರಾಟೆ
England; ಬೆನ್ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್ ಟ್ರೋಫಿಗೆ ಅಲಭ್ಯ
Bailhongal: ಅನೈತಿಕ ಸಂಬಂಧದ ಹಿನ್ನೆಲೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ; ಆರೋಪಿ ಪರಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.