ಕರ್ನಾಟಕದ ಫಲಿತಾಂಶ ಬಿಜೆಪಿಗೆ ಪಾಠವಾಗಿದೆ: ಯೂರಿ ಅಲೆಮಾವೋ
Team Udayavani, May 14, 2023, 4:45 PM IST
ಪಣಜಿ: ಕರ್ನಾಟಕ ಚುನಾವಣಾ ಫಲಿತಾಂಶ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜಯಗಳಿಸಿದ ನಂತರ ಗೋವಾದ ಕಾಂಗ್ರೆಸ್ ನಾಯಕರು ವಿವಿಧ ಪ್ರತಿಕ್ರಿಯೆ ನೀಡಲು ಪ್ರಾರಂಭಿಸಿದ್ದಾರೆ.
ರಾಜಕೀಯಕ್ಕೆ ಹೊಸ ದಿಕ್ಕು ನೀಡಲಿರುವ ಕರ್ನಾಟಕ ಕಾಂಗ್ರೆಸ್ ಗೆಲುವಿಗೆ ಅಭಿನಂದನೆ ಸಲ್ಲಿಸುತ್ತಿದ್ದೇನೆ ಎಂದು ಗೋವಾ ರಾಜ್ಯ ವಿರೋಧ ಪಕ್ಷದ ನಾಯಕ ಯೂರಿ ಅಲೆಮಾವೋ ಹೇಳಿದ್ದಾರೆ.
ಪಣಜಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಪಕ್ಷವು ಮುಂಚೂಣಿಯಲ್ಲಿರಲಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಗೆಲುವಿನ ಬಗ್ಗೆ ಮಾತನಾಡಿದ ಯೂರಿ ಅಲೆಮಾವೋ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಈ ದೇಶದಲ್ಲಿ ಜನಸಾಮಾನ್ಯರು ಸಂಕಷ್ಟದಲ್ಲಿದ್ದಾರೆ. ಹಣದುಬ್ಬರ, ನಿರುದ್ಯೋಗ ಮತ್ತು ಭ್ರಷ್ಟಾಚಾರವು ಪ್ರತಿ ಮನೆಯ ಬಜೆಟ್ ನ್ನು ಕಡಿತಗೊಳಿಸಿದೆ. ಈವೆಂಟ್ ಮ್ಯಾನೇಜ್ಮೆಂಟ್ ಮತ್ತು ಪ್ರಚಾರಕ್ಕಾಗಿ ಹಪಹಪಿಸುತ್ತಿದ್ದ ಬಿಜೆಪಿಗೆ ಇದು ಪಾಠವಾಗಿದೆ ಎಂದು ಯೂರಿ ಅಲೆಮಾಂವ ಹೇಳಿದರು.
ಇತ್ತೀಚೆಗೆ ಬಿಡುಗಡೆಯಾದ ದಿ ಕೇರಳ ಸ್ಟೋರಿ ಸಿನಿಮಾವನ್ನು ಉಲ್ಲೇಖಿಸಿ ಅವರು ಆಡಳಿತ ಪಕ್ಷವನ್ನು ಟೀಕಿಸಿದ್ದರು.
ಇಂಥ ಕಥಾವಸ್ತುವನ್ನು ಆಧರಿಸಿದ ಸಿನಿಮಾಗಳನ್ನು ನೋಡುವುದಕ್ಕಿಂತ ಜನರ ಸಂಕಷ್ಟಗಳತ್ತ ಗಮನ ಹರಿಸುವುದು ಮುಖ್ಯ ಎಂಬುದನ್ನು ಕರ್ನಾಟಕದ ಫಲಿತಾಂಶಗಳು ತೋರಿಸಿವೆ ಎಂದು ಅಲೆಮಾಂವ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
Gujarat: 700 ಕೆ.ಜಿ. ಡ್ರಗ್ಸ್ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ
Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್
Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ
Gujarat: 700 ಕೆ.ಜಿ. ಡ್ರಗ್ಸ್ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.