ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ,ಯಾರ ಬೆಂಬಲವೂ ಅಗತ್ಯವಿಲ್ಲ: ಸಿಎಂ ಪ್ರಮೋದ್ ಸಾವಂತ್
Team Udayavani, Mar 2, 2022, 5:44 PM IST
ಪಣಜಿ: ಗೋವಾದಲ್ಲಿ ಬಿಜೆಪಿ ಡಬಲ್ ಎಂಜಿನ್ ಸರ್ಕಾರವಾಗಿದ್ದು ರಾಜ್ಯದಲ್ಲಿ ಉತ್ತಮ ಅಭಿವೃದ್ಧಿ ಕಾರ್ಯ ಕೈಗೊಂಡಿದೆ. ಮುಂಬರುವ ದಿನಗಳಲ್ಲಿ ಎಲ್ಲ ಕ್ಷೇತ್ರಗಳಲ್ಲಿಯೂ ಪರಿವರ್ತನೆ ತರಲಿದೆ. ಪ್ರಸಕ್ತ ಬಾರಿ ಗೋವಾದಲ್ಲಿ ಬಿಜೆಪಿ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ. ಬಿಜೆಪಿ ಸರ್ಕಾರ ರಚಿಸಲಿದೆ. ಯಾವುದೇ ಪಕ್ಷ ಅಥವಾ ಶಾಸಕರ ಬೆಂಬಲ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಪಣಜಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು- ಗೋವಾ ರಾಜ್ಯವು ಕಳೆದ 50 ವರ್ಷಗಳಿಂದ ಕಂಡಿರದಷ್ಟು ಹೆಚ್ಚಿನ ಅಭಿವೃದ್ಧಿ ಕಾರ್ಯವನ್ನು ಗೋವಾದಲ್ಲಿ ಬಿಜೆಪಿ ಅಧಿಕಾರಾವಧಿಯಲ್ಲಿ ಕೈಗೊಂಡಿದೆ. ಪ್ರಧಾನಿ ಜನರೇಂದ್ರ ಮೋದಿಯವರು ತಮ್ಮ ಭಾಷಣದಲ್ಲಿ ಗೋವಾ ರಾಜ್ಯವು ಇತರ ರಾಜ್ಯಗಳಿಗೆ ಮಾದರಿಯಾಗಲಿದೆ ಎಂದು ಹೇಳಿದ್ದರು. ರಾಜ್ಯದಲ್ಲಿ ನಮ್ಮ ಡಬಲ್ ಎಂಜಿನ್ ಸರ್ಕಾರದಿಂದ ಕೈಗೊಂಡಿರುವ ಮೂಲಭೂತ ಅಭಿವೃದ್ಧಿ ಮತ್ತು ಸಮಗ್ರ ಅಭಿವೃದ್ಧಿಯು ಇತರ ರಾಜ್ಯಗಳಿಗೆ ಮಾದರಿಯಾಗಲಿದೆ ಎಂದು ಮುಖ್ಯಮಂತ್ರಿ ಸಾವಂತ್ ವಿಶ್ವಾಸ ವ್ಯಕ್ತಪಡಿಸಿದರು.
ಪ್ರಸಕ್ತ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಯಾವುದೇ ಪಕ್ಷ ಅಥವಾ ಶಾಸಕರ ಬೆಂಬಲದ ಅಗತ್ಯವಿಲ್ಲದೆಯೇ ಬಿಜೆಪೆ ಸ್ವಂತ ಬಲದೊಂದಿಗೆ, ಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸಲಿದೆ. ಗೋವಾದಲ್ಲಿ ಮತ್ತೆ ಪ್ರಧಾನಿ ನರೇಂದ್ರ ಮೋದಿಯವರ ಡಬಲ್ ಎಂಜಿನ್ ಸರ್ಕಾರವನ್ನು ಜನತೆ ಬಯಸಿದ್ದಾರೆ ಎಂದು ಮುಖ್ಯಮಂತ್ರಿ ಪ್ರಮೋದ ಸಾವಂತ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ
ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ
Sheesh Mahal Row: ಶೀಶ್ಮಹಲ್ ವರ್ಸಸ್ ರಾಜ್ ಮಹಲ್: ದಿಲ್ಲೀಲಿ ಬಿಜೆಪಿ, ಆಪ್ ಹೈಡ್ರಾಮ
Foundation: ಆಂಧ್ರ ಅಭಿವೃದ್ಧಿಗೆ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡುವೆವು: ಮೋದಿ
Delhi: ಜ.15ಕ್ಕೆ ಹೊಸ ಕಟ್ಟಡಕ್ಕೆ ಕಾಂಗ್ರೆಸ್ ಪ್ರಧಾನ ಕಚೇರಿ ಸ್ಥಳಾಂತರ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.