ಮಹದಾಯಿ ನಮಗೆ ತಾಯಿಯಷ್ಟೇ ಮುಖ್ಯ… ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ: ಗೋವಾ ಸಿಎಂ
Team Udayavani, Jan 4, 2023, 1:58 PM IST
ಪಣಜಿ: ಮಹದಾಯಿ ನಮಗೆ ತಾಯಿಯಷ್ಟೇ ಮುಖ್ಯ. ಗೋವಾದ ಅಸ್ಮಿತೆಯನ್ನು ಕಾಪಾಡಲು ಮತ್ತು ಅದನ್ನು ಎಲ್ಲಾ ರೀತಿಯಲ್ಲೂ ರಕ್ಷಿಸಲು, ದೇಶದ ಪರಿಣಿತ ಕಾನೂನು ತಜ್ಞರು ಮತ್ತು ಪರಿಸರವಾದಿಗಳ ಸಹಾಯದಿಂದ ಸುಪ್ರೀಂ ಕೋರ್ಟ್‍ನಲ್ಲಿ ಗೋವಾದ ಪರವನ್ನು ಬಲವಾಗಿ ಮಂಡಿಸಲಾಗುವುದು. ಇನ್ನೆರಡು ಮೂರು ದಿನಗಳಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ರಾಜ್ಯದ ನಿಯೋಗ ಭೇಟಿ ಮಾಡಲಿದೆ. ಮಹದಾಯಿ ವಿಚಾರದಲ್ಲಿ ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಾ. ಪ್ರಮೋದ ಸಾವಂತ್ ತಮ್ಮ ನಿಲುವನ್ನು ಸ್ಪಷ್ಟಪಡಿಸಿದರು.
ಮುಖ್ಯಮಂತ್ರಿ ಪ್ರಮೋದ ಸಾವಂತ್ ರವರು ಸ್ಥಳೀಯ ಸುದ್ಧಿವಾಹಿನಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿ- ಈ ಸಂದರ್ಭದಲ್ಲಿ ಮಹದಾಯಿ ರಕ್ಷಣೆಗೆ ರಾಜ್ಯ ಸರ್ಕಾರ ನಡೆಸುತ್ತಿರುವ ಪ್ರಯತ್ನಗಳನ್ನು ಮಂಡಿಸಿದ ಮುಖ್ಯಮಂತ್ರಿಗಳು, ಮಹದಾಯಿ ನಮ್ಮ ಅಸ್ಮಿತೆಯಾಗಿದ್ದು, ಅದರ ಸಂರಕ್ಷಣೆಗಾಗಿ ನಮ್ಮ ಶಕ್ತಿಮೀರಿ ಹೋರಾಡುತ್ತೇವೆ ಎಂದು ವಿವರಿಸಿದರು. ಸದ್ಯ ಈ ಪ್ರಕರಣ ಸುಪ್ರೀಂ ಕೋರ್ಟ್‍ನಲ್ಲಿದ್ದು ಜನವರಿ 5 ರಂದು ವಿಚಾರಣೆ ನಡೆಯಲಿದೆ. ಈ ವಿಚಾರಣೆಯ ಸಮಯದಲ್ಲಿ, ಮಹದಾಯಿಗೆ ಸಂಬಂಧಿಸಿದ ವಿವರವಾದ ವಿಷಯಗಳನ್ನು ಮಂಡಿಸಲಾಗುವುದು ಎಂದರು.
ಮಹದಾಯಿಯನ್ನು ಬೇರೆಡೆಗೆ ತಿರುಗಿಸುವ ಕರ್ನಾಟಕದ ಪ್ರಯತ್ನಗಳು 1998 ರಲ್ಲಿ ಪ್ರಾರಂಭವಾಯಿತು. ಅಂದಿನಿಂದ ನಾನು ಕಾರ್ಯಕರ್ತನಾಗಿ, ಶಾಸಕನಾಗಿ ಮತ್ತು ಸ್ಪೀಕರ್ ಆಗಿ ಇಡೀ ಪ್ರದೇಶವನ್ನು ಭೇಟಿ ಮಾಡಿದ್ದೇನೆ. ಇಂದಿಗೂ ಮುಖ್ಯಮಂತ್ರಿಯಾಗಿ ನನ್ನ ಸರ್ಕಾರ ಮಹದಾಯಿ ಸಂರಕ್ಷಣೆಗೆ ಬದ್ಧವಾಗಿದೆ ಮತ್ತು ಶ್ರಮಿಸುತ್ತಿದೆ. ಇದಕ್ಕಾಗಿ ಎಲ್ಲರೂ ಒಗ್ಗಟ್ಟಾಗಿ ನಿಲ್ಲುವುದು ಅಗತ್ಯವಾಗಿದೆ. ರಾಜಕೀಯ ಲಾಭಕ್ಕಾಗಿ ಬಿಜೆಪಿಯ ಹಿರಿಯ ನಾಯಕರು ಕರ್ನಾಟಕಕ್ಕೆ ಮಹದಾಯಿ ನದಿ ನೀರಿಗೆ ಪರವಾನಗಿ ನೀಡಿದ್ದಾರೆ ಎಂಬುದು ತಪ್ಪು ಕಲ್ಪನೆ. 2002ರಲ್ಲಿ ಅಂದಿನ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಕರ್ನಾಟಕದಲ್ಲಿ ಈ ಯೋಜನೆಗೆ ಅವಕಾಶ ನೀಡಲಿಲ್ಲ. ಮಹದಾಯಿ ವಿಷಯವು ಗೋವಾ, ಕರ್ನಾಟಕ ಮತ್ತು ಮಹಾರಾಷ್ಟ್ರದ ಮೂರು ರಾಜ್ಯಗಳಿಗೆ ಸಂಬಂಧಿಸಿದೆ, ನದಿಯ ನೀರು ಮತ್ತು ಭೂಪ್ರದೇಶದ 87 ಪ್ರತಿಶತವು ಗೋವಾದಲ್ಲಿದೆ. ಇದು ಅಂತಾರಾಜ್ಯ ಸಮಸ್ಯೆಯಾಗಿರುವುದರಿಂದ ನೀರು ನಿರ್ವಹಣಾ ಪ್ರಾಧಿಕಾರದ ಅಗತ್ಯವಿದೆ. ಜಲವಿದ್ಯುತ್ ಸಚಿವಾಲಯಕ್ಕೆ ಈ ಬೇಡಿಕೆ ಸಲ್ಲಿಸಿದ್ದೇವೆ. ಮುಂದಿನ ಎಂಟು-ಹತ್ತು ದಿನಗಳಲ್ಲಿ ಈ ಪ್ರಾಧಿಕಾರವನ್ನು ಸ್ಥಾಪಿಸಲು ಪ್ರಯತ್ನಿಸಲಾಗುವುದು ಎಂದು ಮುಖ್ಯಮಂತ್ರಿ ಸಾವಂತ್ ಮಾಹಿತಿ ನೀಡಿದರು.
ಪ್ರಸ್ತುತ, ನೀರಿನ ತಿರುವಿನ ಪರಿಷ್ಕೃತ ಯೋಜನೆಯ ಯೋಜನೆಯನ್ನು ಜಲ ಆಯೋಗವು ಅನುಮೋದಿಸಿದೆ, ಆದರೆ ಯೋಜನೆಗೆ ಅರಣ್ಯ, ಪರಿಸರ ಮತ್ತು ಹವಾಮಾನ ಬದಲಾವಣೆ ಇಲಾಖೆಯಿಂದ ಅನುಮತಿ ಅಗತ್ಯವಿದೆ. ಈ ಪ್ರಶ್ನೆ ನ್ಯಾಯಾಲಯದಲ್ಲಿದ್ದು, ಕರ್ನಾಟಕದ ಒಪ್ಪಿಗೆ ನಂತರ ಹೊಸ ಬೆಳವಣಿಗೆಗಳ ಬಗ್ಗೆ ನ್ಯಾಯಾಲಯಕ್ಕೆ ತಿಳಿಸುವುದಾಗಿ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿದರು. ಮಧ್ಯಸ್ಥಿಕೆದಾರರು ಕರ್ನಾಟಕಕ್ಕೆ 3.9 ಟಿಎಂಸಿ ನೀರನ್ನು ನೀಡಿದ್ದರೂ, ನಾವು ಈ ತೀರ್ಪನ್ನು ಸುಪ್ರೀಂ ಕೋರ್ಟ್‍ನಲ್ಲಿ ಪ್ರಶ್ನಿಸಿದ್ದೇವೆ. ಇದಲ್ಲದೆ, ಈ ಅರಣ್ಯ ಪ್ರದೇಶಗಳಲ್ಲಿ ದೊಡ್ಡ ಅಣೆಕಟ್ಟುಗಳನ್ನು ನಿರ್ಮಿಸಲಾಗುವುದಿಲ್ಲ ಮತ್ತು ಅಣೆಕಟ್ಟುಗಳನ್ನು ನಿರ್ಮಿಸಿದ ನಂತರವೂ ಮಲಪ್ರಭಾ ಜಲಾನಯನ ಪ್ರದೇಶಕ್ಕೆ ನೀರು ಹರಿಸಲಾಗುವುದಿಲ್ಲ. ಪ್ರಸ್ತುತ ಡಿಪಿಆರ್‍ಗೆ ಅನುಮೋದನೆ ದೊರೆತಿದ್ದರೂ ಅದನ್ನು ಹಿಂಪಡೆಯಲು ಸಂಬಂಧಿತ ಅಧಿಕಾರಿಗಳೊಂದಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡುತ್ತೇವೆ. ಮೇಲಾಗಿ ಕಾನೂನು ಹೋರಾಟ ಮುಂದುವರಿಯಲಿದೆ ಎಂದು ಮುಖ್ಯಮಂತ್ರಿ ಹೇಳಿದರು.
ವಾಸ್ತವವಾಗಿ ಈಗ ದಿಕ್ಕು ತಪ್ಪಿಸಿರುವುದು 2008ರಿಂದ 2012ರ ನಡುವಿನ ಕರ್ನಾಟಕದ ಕುತಂತ್ರ. ಆಗ ಕರ್ನಾಟಕ ಮತ್ತು ಗೋವಾ ರಾಜ್ಯಗಳ ಜೊತೆಗೆ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿತ್ತು. ಅಂದು ಕಳಸಾ ಯೋಜನೆಯಲ್ಲಿ 20 ಮೀಟರ್ ಆಳದ ಕಾಲುವೆಗಳನ್ನು ಅಗೆದು ನಿರ್ಮಿಸಿ ಸುರಂಗ ನಿರ್ಮಾಣ ಮಾಡಲಾಗಿತ್ತು. ಈ ಸುರಂಗಮಾರ್ಗಗಳು ಮತ್ತು ತೆರೆದ ಕಾಲುವೆಗಳನ್ನು ಕಾಂಗ್ರೆಸ್ ಅವಧಿಯಲ್ಲಿ ನಿರ್ಮಿಸಲಾಗಿದೆ. ಅಂದು ಕಾಂಗ್ರೆಸ್‍ನ ಯಾರೂ ರಾಜ್ಯದ ಹಿತದೃಷ್ಟಿಯಿಂದ ಘಟನೆ ನಡೆದ ನೈಜ ಸ್ಥಳಕ್ಕೆ ಭೇಟಿ ನೀಡಲು ಆಸಕ್ತಿ ತೋರದ ಅವರು ಇಂದು ಕೇವಲ ಈ ವಿಚಾರದಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಸರಕಾರವನ್ನು ಮನಬಂದಂತೆ ಟೀಕಿಸಲಾಗುತ್ತಿದೆ. ಜೀವ ಕೊಡುವ ಮಹದಾಯಿ ನದಿಯನ್ನು ಉಳಿಸುವ ಜವಾಬ್ದಾರಿಯನ್ನು ನಾವು ಜವಾಬ್ದಾರಿಯಿಂದ ನಿರ್ವಹಿಸುತ್ತಿದ್ದೇವೆ ಎಂದು ಮುಖ್ಯಮಂತ್ರಿ ಪ್ರಮೋದ ಸಾವಂತ್ ಹೇಳಿದರು.
ಇದನ್ನೂ ಓದಿ: ಲಿಂಬಾವಳಿ ಹೆಸರು ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆ ವಿಚಾರ… ತಪ್ಪಿತಸ್ಥರಾಗಿದ್ದರೆ ಶಿಕ್ಷೆ ಖಚಿತ: ಗೃಹ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್ ಶಿವಸೇನೆ ಇಂಗಿತ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.