ಗೋವಾ ಕಾಂಗ್ರೆಸ್ ನಲ್ಲಿ ಭಾರಿ ಬೆಳವಣಿಗೆ ; ಲೋಬೊ ಪ್ರತಿಪಕ್ಷ ನಾಯಕ ಸ್ಥಾನದಿಂದ ವಜಾ
ದಿಗಂಬರ್ ಕಾಮತ್ ರವರ ವಿರುದ್ಧವೂ ಕ್ರಮ
Team Udayavani, Jul 10, 2022, 9:39 PM IST
ಪಣಜಿ: ಗೋವಾ ಕಾಂಗ್ರೆಸ್ ವಿರೋಧ ಪಕ್ಷದ ನಾಯಕ ಮೈಕಲ್ ಲೋಬೊ ರವರನ್ನು ಪ್ರತಿಪಕ್ಷ ನಾಯಕ ಸ್ಥಾನದಿಂದ ವಜಾಗೊಳಿಸಿದೆ. ಶಾಸಕ ದಿಗಂಬರ್ ಕಾಮತ್ ರವರ ವಿರುದ್ಧವೂ ಕ್ರಮ ತೆಗೆದುಕೊಳ್ಳಲಾಗುವುದು. ಈ ಇಬ್ಬರು ನಾಯಕರು ಪಕ್ಷಾಂತರ ಮಾಡಿ ಬಿಜೆಪಿ ಸೇರುವ ಸಾಧ್ಯತೆಯಿದೆ ಎಂದು ಗೋವಾ ಕಾಂಗ್ರೆಸ್ ಉಸ್ತುವಾರಿ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಪಣಜಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವನ್ನು ಒಡೆಯಲು ಬಿಜೆಪಿಯವರು ಎಷ್ಟು ಹಣ ಖರ್ಚು ಮಾಡಿದ್ದಾರೆ ಎಂದು ನಾನು ಹೇಳಲಾರೆ ಎಂದರು. ಶಾಸಕ ಮೈಕಲ್ ಲೋಬೋ ಮತ್ತು ದಿಗಂಬರ್ ಕಾಮತ್ ರವರ ವಿರುದ್ಧ ಪಕ್ಷ ಕ್ರಮ ಕೈಗೊಳ್ಳಲಿದೆ. ಸದ್ಯ ಕಾಂಗ್ರೇಸ್ 6 ಶಾಸಕರನ್ನು ಹೊಂದಿದ್ದು ಇತರ ಶಾಸಕರು ತಾವು ವಿಚಾರ ಮಾಡಿ ಕೂಡಲೇ ಪಕ್ಷಕ್ಕೆ ಮರಳುವಂತೆ ದಿನೇಶ್ ಗುಂಡೂರಾವ್ ಎಚ್ಚರಿಕೆ ನೀಡಿದರು.
ಶಾಸಕರು ಗೈರು…!
ಶಾಸಕ ಮೈಕಲ್ ಲೋಬೊ, ದಿಗಂಬರ್ ಕಾಮತ್, ಕೇದಾರ್ ನಾಯ್ಕ, ಅಲೆಕ್ಸ ಸಿಕ್ಕೇರಾ, ಕಾರ್ಲೊಸ್ ಪೆರೇರಾ, ಅಲ್ತೊನೊ ಡಿಕೋಸ್ತಾ, ಯೂರಿ ಅಲೆಮಾಂವ, ರಾಜೇಶ್ ಫಳದೇಸಾಯಿ ಈ ಶಾಸಕರು ಬಿಜೆಪಿ ಸಂಪರ್ಕದಲ್ಲಿದ್ದಾರೆ ಎಂದು ಹೇಳಲಾಗುತ್ತಿದ್ದು, ಶಾಸಕರು ಕಾಂಗ್ರೆಸ್ ಸಭೆಗೆ ಗೈರು ಹಾಜರಾಗಿದ್ದರು.
ಇದನ್ನೂ ಓದಿ :ಗೋವಾ: ಚರ್ಚೆಗೆ ಕಾರಣವಾದ 10 ಕಾಂಗ್ರೆಸ್ ಶಾಸಕರು ಬಿಜೆಪಿಯಲ್ಲಿ ವಿಲೀನ ಸುದ್ದಿ !
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.