ಗೋವಾ : ಮೇ 31ರ ತನಕ ಕರ್ಫ್ಯೂ ವಿಸ್ತರಣೆ, ಮಾರ್ಗಸೂಚಿಯಲ್ಲಿ ಬದಲಾವಣೆ ಇಲ್ಲ : ಸಾವಂತ್
Team Udayavani, May 21, 2021, 3:49 PM IST
ಪ್ರಾತಿನೀಧಿಕ ಚಿತ್ರ
ಪಣಜಿ : ಕೋವಿಡ್ ಸೋಂಕಿನ ರೂಪಾಂತರಿ ಅಲೆ ಕಾರಣದಿಂದ ಸೋಂಕಿನ ಪ್ರಮಾಣ ಹೆಚ್ಚಾಗುತ್ತಿರುವುದರಿಂದ ಗೋವಾ ಸರ್ಕಾರ ಕರ್ಫ್ಯೂವನ್ನು ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ.
ಸಚಿವ ಸಂಪುಟ ಸಭೆಯ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಗೋವಾ ಮುಖ್ಯಮಂತ್ರ ಪ್ರಮೋದ್ ಸಾವಂತ್, ಕೋವಿಡ್ ಸೋಂಕಿನ ಪ್ರಮಾಣ ರಾಜ್ಯದಲ್ಲಿ ಹೆಚ್ಚಳವಾಗುತ್ತಿರುವುದರಿಂದ ಕರ್ಫ್ಯೂವನ್ನು ವಿಸ್ತರಣೆ ಮಾಡಲು ಸಂಪುಟ ಸಭೆ ನಿರ್ಧರಿಸಿದ್ದು, ಈ ಕರ್ಫೂ ಮೇ 31 ರ ತನಕ ಮುಂದುವರಿಯಲಿದ್ದು, ಯಾವುದೇ ನಿರ್ಬಂಧಗಳ ಬದಲಾವಣೆ ಇಲ್ಲದೆ ಹಿಂದಿನ ಮಾರ್ಗ ಸೂಚಿಯಂತೆ ಕರ್ಫೂ ಮುಂದುವರಿಯಲಿದೆ ಎಂದು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ : ಡಿಸಿಗಳಿಂದ ಮಾಹಿತಿ ಸಂಗ್ರಹಿಸಲು ಅಡ್ಡಿ;ಹಕ್ಕುಚ್ಯುತಿನಿರ್ಣಯ ಮಂಡನೆಗೆ ನಿರ್ಧಾರ:ಸಿದ್ದರಾಮಯ್ಯ
ಇನ್ನು, ಮ್ಯೂಕೋರ್ಮೈಕೋಸಿಸ್ ರೋಗಿಗಳಿಗೆ ಪ್ರತ್ಯೇಕ ಚಿಕಿತ್ಸಾ ಪ್ರೋಟೋಕಾಲ್ ನನ್ನು ರೂಪಿಸಬೇಕೆಂದು ಸಚಿವರು ನೀಡಿದ ಸಲಹೆಯಂತೆ ಚೇತರಿಸಿಕೊಳ್ಳುತ್ತಿರುವ ಕೋವಿಡ್ ರೋಗಿಗಳಲ್ಲಿ ಪ್ರಚಲಿತದಲ್ಲಿರುವ ಬ್ಲ್ಯಾಕ್ ಫಂಗಸ್ ನಿಂದ ಬಳಲುತ್ತಿರುವವರಿಗೆ ಚಿಕಿತ್ಸೆ ನೀಡಲು ಪ್ರತ್ಯೇಕವಾಗಿ 25 ಹಾಸಿಗೆಗಳ ವಾರ್ಡ್ ಮೀಸಲಿಡಲಾಗುವುದು ಎಂದು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿದ್ದಾರೆ.
#COVID19 | Goa Chief Minister Pramod Sawant has announced the extension of curfew up to May 31
(File pic) pic.twitter.com/apkzCGorSk
— ANI (@ANI) May 21, 2021
ಈ ಮೊದಲು ಗೋವಾದಲ್ಲಿ ಮೇ 9 ರಿಂದ 15 ದಿನಗಳ ಕಾಲ ಕರ್ಫ್ಯೂ ವಿಧಿಸಲಾಗಿತ್ತು. ವೈದ್ಯಕೀಯ ತುರ್ತು ಸೇವೆಗಳನ್ನು ಸೇರಿ, ಕಿರಾಣಿ ಅಂಗಡಿಗಳು ಸೇರಿದಂತೆ ಅಗತ್ಯ ವಸ್ತುಗಳನ್ನು ಮಾರಾಟ ಮಾಡುವ ಮಳಿಗೆಗಳಿಗೆ ಬೆಳಿಗ್ಗೆ 7 ರಿಂದ ಮಧ್ಯಾಹ್ನ 1 ರವರೆಗೆ ತೆರೆದಿರಲು ಅವಕಾಶ ನೀಡಲಾಗಿತ್ತು. ರೆಸ್ಟೋರೆಂಟ್ ಗಳನ್ನು ಬೆಳಿಗ್ಗೆ 7 ರಿಂದ ಸಂಜೆ 7 ರವರೆಗೆ ತೆರೆದಿರಲು ಅನುಮತಿಸಲಾಗಿತ್ತು.
ಹಿಂದಿನ ಮಾರ್ಗ ಸೂಚಿಯಂತೆಯೇ ಕರ್ಫ್ಯೂ ಮುಂದುವರಿಯುತ್ತದೆ. ಸಾಮಾಜಿಕ, ರಾಜಕೀಯ, ಕ್ರೀಡೆ, ಮನರಂಜನೆ, ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಕಾರ್ಯಗಳು ಮತ್ತು ಇತರ ಸಭೆಗಳು ಮಾಡುವಂತಿಲ್ಲ. ಸಾರ್ವಜನಿಕ ಸ್ಥಳಗಳಲ್ಲಿ ಐದು ಅಥವಾ ಅದಕ್ಕಿಂತ ಹೆಚ್ಚು ಜನರು ಸೇರುವಂತಿಲ್ಲ ಎಂದು ಸರ್ಕಾರ ಹೇಳಿದೆ.
ಇನ್ನು, ಕಳೆದ 24 ಗಂಟೆಗಳಲ್ಲಿ 1,582 ಹೊಸ ಕೋವಿಡ್ -19 ಹೊಸ ಕೋವಿಡ್ ಪ್ರಕರಣಗಳು ರಾಜ್ಯದಲ್ಲಿ ದಾಖಲಾಗುವುದರ ಮೂಲಕ ಒಟ್ಟು ಈವರೆಗೆ ದಾಖಲಾದ ಸೋಂಕಿತರ ಸಂಖ್ಯೆ 1,41,567 ಕ್ಕೆ ಏರಿಕೆಯಾಗಿದೆ. ಸಾವಿನ ಸಂಖ್ಯೆ ಒಟ್ಟು 2,272ಕ್ಕೆ ತಲುಪಿದೆ ಎಂದು ಗೋವಾ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಇದನ್ನೂ ಓದಿ : ಕೋವಿಡ್ ವಿರುದ್ಧ ದೀರ್ಘ ಹೋರಾಟ ನಡೆಸಬೇಕು, ಬ್ಲ್ಯಾಕ್ ಫಂಗಸ್ ದೊಡ್ಡ ಸವಾಲು:ಪ್ರಧಾನಿ ಮೋದಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್‌ಗೆ 7 ದಿನಗಳ ಮಧ್ಯಂತರ ಜಾಮೀನು
Loksabha:ಕಾಂಗ್ರೆಸ್ ಅಂಬೇಡ್ಕರ್ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು
SC;ಪ್ರಕರಣಗಳ ವರ್ಗಾವಣೆ:ಪ್ರತಿಕ್ರಿಯಿಸಲು ಯಾಸಿನ್ ಮಲಿಕ್ ಸೇರಿ ಐವರಿಗೆ 2 ವಾರ ಕಾಲಾವಕಾಶ
ರಿವರ್ಸ್ ತೆಗೆಯುವಾಗ ಸಮುದ್ರಕ್ಕೆ ಬಿದ್ದ ಕಾರು… ನೌಕಾಪಡೆ ಅಧಿಕಾರಿ ಪಾರು, ಚಾಲಕ ನಾಪತ್ತೆ
MUST WATCH
ಹೊಸ ಸೇರ್ಪಡೆ
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್
Ujire: ಕಥನ ಸೃಜನಶೀಲತೆಯಿಂದ ಪ್ರಾದೇಶಿಕ ಸಂವೇದನೆಯ ಅಭಿವ್ಯಕ್ತಿ; ಅನುಪಮಾ ಪ್ರಸಾದ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.