Goa: ಕಡಲತೀರಗಳಲ್ಲಿ ಅಕ್ರಮ ಚಟುವಟಿಕೆ ತಡೆಯಲು ಅರಣ್ಯ ಇಲಾಖೆ ಕ್ರಮ
Team Udayavani, Apr 20, 2023, 6:28 PM IST
ಪಣಜಿ: ಗೋವಾದ ಕಡಲತೀರಗಳಲ್ಲಿ ಅಕ್ರಮ ಚಟುವಟಿಕೆಗಳನ್ನು ತಡೆಯಲು ಅರಣ್ಯ ಇಲಾಖೆಯು ಕ್ರಮ ಕೈಗೊಂಡಿದೆ, ಕಡಲತೀರಗಳಲ್ಲಿ ವಾಹನಗಳು ಓಡಿಸುವುದನ್ನು ತಡೆಯಲು ಮತ್ತು ಒಟ್ಟಾರೆ ಕರಾವಳಿ ಸುರಕ್ಷತೆಗೆ ಅರಣ್ಯ ಇಲಾಖೆ ಮುಂದಾಗಿದೆ.
ಅದರಂತೆ ರಾಜ್ಯ ಪ್ರವಾಸೋದ್ಯಮ ಇಲಾಖೆ, ಮೀನುಗಾರಿಕೆ ಇಲಾಖೆ, ವಿಷನ್ ಲೈಫ್‍ಗಾರ್ಡ್‍ಗಳು, ಪ್ರವಾಸಿ ಪೊಲೀಸರು, ಬಾರ್ ಮತ್ತು ರೆಸ್ಟೊರೆಂಟ್ ಮಾಲಕರು ಮತ್ತು ಎನ್‍ಜಿಒಗಳು ಈ ಕಾರ್ಯಚರಣೆಯಲ್ಲಿ ಭಾಗಿಯಾಗಲಿವೆ. ಈ ಇಲಾಖೆಗಳು ಕಡಲ ಜೀವವೈವಿಧ್ಯ ರಕ್ಷಣೆಯೊಂದಿಗೆ ಕರಾವಳಿಯಲ್ಲಿ ಅಕ್ರಮ ಚಟುವಟಿಕೆಗಳ ಬಗ್ಗೆ ಜಾಗೃತಿ ಮೂಡಿಸಲು ಅರಣ್ಯ ಇಲಾಖೆಗೆ ನೆರವು ನೀಡಲಿವೆ. ಗೋವಾ ರಾಜ್ಯ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಸೌರಭ್ ಕುಮಾರ್ ಅವರು ಪಣಜಿಯಲ್ಲಿ ಮಾಧ್ಯಮಗಳಿಗೆ ಈ ಮಾಹಿತಿ ನೀಡಿದ್ದಾರೆ.
ಸೌರಭ್ ಕುಮಾರ್ ಮಾತನಾಡಿ-ಗೋವಾದ ಕಡಲ ತೀರಗಳಲ್ಲಿ ಅಕ್ರಮ ಚಟುವಟಿಕೆಗಳನ್ನು ತಡೆಯಲು ಎಲ್ಲ ಇಲಾಖೆಗಳಿಂದ ವ್ಯವಸ್ಥಿತ ಜಂಟಿ ಜನಜಾಗೃತಿ ಕಾರ್ಯಕ್ರಮ ನಡೆಸಲಾಗುತ್ತಿದೆ. ವಿವಿಧ ಇಲಾಖೆಗಳು, ಎನ್‍ಜಿಒಗಳು, ಪರಿಣಿತ ಸಂಸ್ಥೆಗಳು ಮತ್ತು ಸಾರ್ವಜನಿಕ ಸಹಭಾಗಿತ್ವದಲ್ಲಿ ರಾಜ್ಯದ ಸಂಪೂರ್ಣ ಕರಾವಳಿಯಲ್ಲಿ ಸಮೃದ್ಧ ಸಮುದ್ರ ಜೀವವೈವಿಧ್ಯದ ಸುರಕ್ಷತೆ, ರಕ್ಷಣೆ, ಸಂರಕ್ಷಣೆ ಮತ್ತು ಸುಸ್ಥಿರ ಅಭಿವೃದ್ಧಿಗಾಗಿ ಪ್ರಯತ್ನಗಳನ್ನು ಮಾಡುಲು ಮುಂದಾಗಿದೆ.
ರಾಜ್ಯ ಅರಣ್ಯ ಇಲಾಖೆಯು ಕಳೆದ ಡಿಸೆಂಬರ್‍ನಲ್ಲಿ ಮೊದಲ ಬಾರಿಗೆ ಗೋವಾ ಕರಾವಳಿಯನ್ನು ಎರಡು ಸಮುದ್ರ ಶ್ರೇಣಿಗಳಾಗಿ ವಿಂಗಡಿಸಿತ್ತು. ಕಡಲತೀರಗಳಲ್ಲಿ ವಾಹನ ಚಾಲನೆಯಂತಹ ನಿಯಮ ಉಲ್ಲಂಘನೆಗಳಿಂದ ಗೋವಾದ ಕರಾವಳಿಯನ್ನು ರಕ್ಷಿಸಲು ರಾಯಭಾರಿಗಳಾಗಿ ಕಾರ್ಯನಿರ್ವಹಿಸಲು ಅರಣ್ಯ ಇಲಾಖೆಯು ಮುಂದಾಗಿದೆ. ಈ ವರ್ಷದ ಜನವರಿ ಮತ್ತು ಫೆಬ್ರವರಿಯಲ್ಲಿ ಈ ಕುರಿತಂತೆ ಎರಡು ಸಭೆಗಳು ನಡೆದಿದ್ದು, ಮೂರನೇ ಸಭೆ ಶೀಘ್ರದಲ್ಲೇ ನಡೆಯಲಿದೆ. ಸಭೆಯಲ್ಲಿ ಎಲ್ಲಾ ಇಲಾಖೆಗಳ ನಡುವೆ ಪರಿಣಾಮಕಾರಿ ಸಮನ್ವಯದ ಅಗತ್ಯತೆ ಕುರಿತು ಚರ್ಚಿಸಲಾಯಿತು. ಸಭೆಯು ಸಮುದ್ರ ರಕ್ಷಣೆಗಾಗಿ ಪ್ರಮಾಣಿತ ಪ್ರೋಟೋಕಾಲ್ ಅನ್ನು ಸಹ ಒಪ್ಪಿಕೊಂಡಿದೆ ಎಂದು ಗೋವಾ ರಾಜ್ಯ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಸೌರಭ್ ಕುಮಾರ್ ಮಾಹಿತಿ ನೀಡಿದರು.
ಕರಾವಳಿ ಸುರಕ್ಷತೆಗೆ ಹೆಚ್ಚಿನ ಸ್ವಯಂಸೇವಕರನ್ನು ನೇಮಿಸಿಕೊಳ್ಳಲು ಪ್ರಯತ್ನಿಸಲಾಗುತ್ತಿದೆ. ಕಡಲತೀರಗಳಲ್ಲಿ ವಾಹನ ಚಲಾಯಿಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಅದರ ಅನುಷ್ಠಾನಕ್ಕೆ ಗಮನ ಹರಿಸಲಾಗುವುದು. ಸೆಂಟರ್ ಫಾರ್ ಎನ್ವಿರಾನ್ಮೆಂಟಲ್ ಎಜುಕೇಶನ್ ಮತ್ತು ವೈಲ್ಡ್ ಲೈಫ್ ಕನ್ಸರ್ವೇಶನ್ ಸೊಸೈಟಿಯಂತಹ ಸಂಸ್ಥೆಗಳು ಸಹ ಸಹಕಾರ ನೀಡಲಿದೆ. ಅರಣ್ಯ ಇಲಾಖೆಯು ಕಡಲ ತೀರದ ಆಮೆ ಸಂರಕ್ಷಣಾ ಯೋಜನೆಯನ್ನು ಮತ್ತಷ್ಟು ಬಲಪಡಿಸಲು ಹವಳ ಮತ್ತು ಬಂಡೆಗಳ ಸಂರಕ್ಷಣೆ, ಸಮುದ್ರ ಜೀವ ವೈವಿದ್ಯ ಸಂರಕ್ಷಣೆಗಾಗಿ “ಮರಿನ್ ರೆಂಜೆಸ್”ನ್ನು ಸ್ಥಾಪಿಸಿದೆ ಎಂದು ಗೋವಾ ರಾಜ್ಯ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಸೌರಭ್ ಕುಮಾರ್ ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ
Maharashtra ; ಕೈ ಯಿಂದ ಲೋಕಸಭಾ ಸ್ಥಾನ ಕಸಿದ ಬಿಜೆಪಿ: ರಾಜ್ಯಸಭೆ ಬಹುಮತದತ್ತ ಚಿತ್ತ
Maharashtra; ಪತಿಗೆ ಸೋಲು: ಮತಯಂತ್ರಗಳ ಕುರಿತು ಆಪಾದಿಸಿದ ನಟಿ ಸ್ವರಾ ಭಾಸ್ಕರ್
West Bengal bypolls; ಟಿಎಂಸಿ ಕ್ಲೀನ್ ಸ್ವೀಪ್: ಪ್ರತಿಭಟನೆಗಳು ಬಿಜೆಪಿಗೆ ಸಹಕಾರಿಯಾಗಲಿಲ್ಲ
Maharashtra Polls: ಯಾರಾಗಲಿದ್ದಾರೆ ಮಹಾ ಮುಖ್ಯಮಂತ್ರಿ? ಸುಳಿವು ನೀಡಿದ ಫಡ್ನವೀಸ್
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.