‘ಸನ್‍ಬರ್ನ್ ಫೆಸ್ಟಿವಲ್’ಗೆ ಕೊನೆಗೂ ಅನುಮತಿ ನೀಡಿದ ಗೋವಾ ಸರಕಾರ
ನಿಬಂಧನೆಗಳನ್ನು ಉಲ್ಲಂಘಿಸಿದರೆ ಕೋಟಿ ರೂ. ಮೊತ್ತ ಮುಟ್ಟುಗೋಲು, ಭಾರೀ ದಂಡ !
Team Udayavani, Dec 17, 2022, 6:31 PM IST
ಪಣಜಿ: ಗೋವಾದಲ್ಲಿ ನಡೆಯಲಿರುವ ವಿಶ್ವ ಪ್ರಸಿದ್ಧ ‘ಸನ್‍ಬರ್ನ್ ಫೆಸ್ಟಿವಲ್’ಗೆ ಗೋವಾದ ಪ್ರವಾಸೋದ್ಯಮ ಇಲಾಖೆ ಅಂತಿಮವಾಗಿ ಅನುಮತಿ ನೀಡಿದೆ. ಸಂಗೀತೋತ್ಸವವು ಡಿಸೆಂಬರ್ 28 ರಿಂದ 30 ರವರೆಗೆ ಗೋವಾದ ವಾಗಾತೋರ್‍ನಲ್ಲಿ ನಡೆಯಲಿದೆ.
ಕೋವಿಡ್ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷ ಈ ಉತ್ಸವವನ್ನು ನಡೆಸಲು ಸಾಧ್ಯವಾಗಲಿಲ್ಲ. ಪ್ರಸಕ್ತ ವರ್ಷ ಈ ಸಂಗೀತ ಮಹೋತ್ಸವದಲ್ಲಿ ದೇಶ ವಿದೇಶಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಪಾಲ್ಗೊಳ್ಳುವ ಇರೀಕ್ಷೆಯಿದೆ ಎಂದೇ ಹೇಳಲಾಗಿದೆ.
ಗೋವಾ ಪ್ರವಾಸೋದ್ಯಮ ಇಲಾಖೆಯು ಸನ್‍ಬರ್ನ್ ಉತ್ಸವಕ್ಕೆ ಪರವಾನಗಿ ನೀಡುವ ಸಂದರ್ಭದಲ್ಲಿ ಸಂಘಟಕರಿಗೆ ಕೆಲವು ಷರತ್ತುಗಳನ್ನು ವಿಧಿಸಿದೆ. ಈ ನಿಯಮಗಳನ್ನು ಉಲ್ಲಂಘಿಸಿದರೆ, ಅವರು ಭಾರೀ ದಂಡವನ್ನು ಪಾವತಿಸಬೇಕಾಗುತ್ತದೆ. 17,700 ಸಂಸ್ಕರಣಾ ಶುಲ್ಕವನ್ನು ಪಾವತಿಸುವಂತೆ ಪ್ರವಾಸೋದ್ಯಮ ಇಲಾಖೆ ಸಂಘಟಕರಿಗೆ ತಿಳಿಸಿದೆ. ಅಲ್ಲದೆ 1 ಕೋಟಿ 10 ಲಕ್ಷ ರೂ.ಗಳ ಭದ್ರತಾ ಠೇವಣಿಯನ್ನೂ ಪಾವತಿಸುವಂತೆ ತಿಳಿಸಲಾಗಿದೆ. ಅದರಲ್ಲೂ ಪ್ರವಾಸೋದ್ಯಮ ಇಲಾಖೆ ವಿಧಿಸಿರುವ ನಿಬಂಧನೆಗಳನ್ನು ಉಲ್ಲಂಘಿಸಿದರೆ ಮೊತ್ತವನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುವುದು ಎಂದು ಪ್ರವಾಸೋದ್ಯಮ ಇಲಾಖೆ ತಿಳಿಸಿದೆ.
ವರ್ಷಾಂತ್ಯದಲ್ಲಿ ಹೊಸ ವರ್ಷವನ್ನು ಸ್ವಾಗತಿಸಲು ದೇಶ-ವಿದೇಶಗಳಿಂದ ಲಕ್ಷಾಂತರ ಪ್ರವಾಸಿಗರು ಗೋವಾಕ್ಕೆ ಭೇಟಿ ನೀಡುತ್ತಾರೆ. ಡಿಸೆಂಬರ್ ತಿಂಗಳ ಕೊನೆಯ ದಿನಗಳಲ್ಲಿ ನಡೆಯುವ ಸನ್ ಬರ್ನ್ ಫೆಸ್ಟಿವಲ್ ವಿಶ್ವವಿಖ್ಯಾತವಾಗಿದೆ. ಈ ಹಬ್ಬದಲ್ಲಿ ಭಾಗವಹಿಸುವ ಯುವತಿಯರ ಸಂಖ್ಯೆಯೇ ಹೆಚ್ಚು. ರಾಷ್ಟ್ರೀಯ ಮತ್ತು ವಿದೇಶಿ ಸಂಗೀತ ಮತ್ತು ಲೇಸರ್ ಶೋಗಳು ಈ ಉತ್ಸವದ ಮುಖ್ಯಾಕರ್ಷಣೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.