ನಿರ್ಬಂಧವಿಲ್ಲದೆ ಪ್ರವಾಸೋದ್ಯಮ ಆರಂಭಿಸಿದ್ದರಿಂದ ಸೋಂಕು ಹೆಚ್ಚಳವಾಗಿದೆ: ವಿಶ್ವಜಿತ್ ರಾಣೆ
Team Udayavani, May 8, 2021, 7:30 PM IST
ಪಣಜಿ: ಗೋವಾದಲ್ಲಿ ಕಳೆದ ಡಿಸೆಂಬರ್ನಿಂದ ಯಾವುದೇ ನಿರ್ಬಂಧವಿಲ್ಲದೆಯೇ ಪ್ರವಾಸೋದ್ಯಮವನ್ನು ಆರಂಭಿಸಿರುವುದು ರಾಜ್ಯದ ಸಧ್ಯದ ಪರಿಸ್ಥಿತಿಗೆ ಕಾರಣವಾಗಿದೆ ಎಂದು ರಾಜ್ಯ ಆರೋಗ್ಯ ಮಂತ್ರಿ ವಿಶ್ವಜಿತ್ ರಾಣೆ ಹೇಳಿದರು.
ಪಣಜಿಯಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ರಾಜ್ಯದಲ್ಲಿ ಶೇ 51 ರಷ್ಟು ಕೋವಿಡ್ ಪಾಜಿಟಿವಿಟಿ ಪ್ರಮಾಣವಿದೆ, ಇದು ದೇಶದಲ್ಲಿಯೇ ಅತಿ ಹೆಚ್ಚಾಗಿದೆ ಎಂದು ರಾಜ್ಯ ಆರೋಗ್ಯ ಮಂತ್ರಿ ವಿಶ್ವಜಿತ್ ರಾಣೆ ಹೇಳಿದರು.
ಇದನ್ನೂ ಓದಿ :ಕೋವಿಡ್ ವಾರ್ಡ್ ನಲ್ಲಿ ಗಂಟೆಗಟ್ಟಲೇ ಇರಿಸಿದ ಶವ : ಸೋಂಕಿತರಲ್ಲಿ ಆತಂಕ
ಡಿಸೆಂಬರ್, ಜನವರಿ ಮತ್ತು ಫೆಬ್ರುವರಿಯಲ್ಲಿ ರಾಜ್ಯದಲ್ಲಿ ಯಾವುದೇ ನಿರ್ಬಂಧವಿಲ್ಲದೆಯೇ ಪ್ರವಾಸೋದ್ಯಮ ಆರಂಭಿಸಿದ್ದರಿಂದ ರಾಜ್ಯದಲ್ಲಿ ಸೋಂಕು ಹೆಚ್ಚಿನ ಪ್ರಮಾಣದಲ್ಲಿ ಹರಡಲು ಕಾರಣವಾಗಿದೆ. ಗೋವಾ ರಾಜ್ಯವು ಪ್ರಸಿದ್ಧ ಪ್ರವಾಸಿ ತಾಣವಾಗಿರುವುದರಿಂದ ರಾಜ್ಯಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಾರೆ. ವಿವಿಧ ರಾಜ್ಯಗಳಿಂದ ಗೋವಾಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದರು. ನಾವು ಅಂದೇ ಈ ಕುರಿತು ಆರೋಗ್ಯ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದೆವು, ಏಕೆಂದರೆ ನಾವು ಮುಂದಿನ ಪರಿಸ್ಥಿತಿ ಎದುರಿಸಲು ಸಿದ್ಧರಾಗಿರಬೇಕು ಎಂದು. ಇಂದು ಗೋವಾದಲ್ಲಿ ದೇಶದಲ್ಲಿಯೇ ಹೆಚ್ಚು ಪ್ರಮಾಣದಲ್ಲಿ ಕೋವಿಡ್ ಸೋಂಕಿತರು ಪತ್ತೆಯಾಗುತ್ತಿದ್ದಾರೆ ಎಂದು ರಾಜ್ಯ ಆರೋಗ್ಯ ಮಂತ್ರಿ ವಿಶ್ವಜಿತ್ ರಾಣೆ ಆತಂಕ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ಮದುವೆ ಸಂಭ್ರಮದಲ್ಲಿದ್ದ ವರನಿಗೆ ಹೃದಯಾಘಾತ… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು
Maharastra: ಕಾರಿನ ಮೇಲೆ ಕಲ್ಲು ತೂರಾಟ… ಮಾಜಿ ಸಚಿವ ಅನಿಲ್ ದೇಶಮುಖ್ ಹಣೆಗೆ ಗಾಯ
Assembly Election: ಮಹಾರಾಷ್ಟ್ರ ಕದನದಲ್ಲಿ ಘಟಾನುಘಟಿಗಳ ಭವಿಷ್ಯ ಪಣಕ್ಕೆ
Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್ ಭೀತಿ!
Election: ಮಹಾರಾಷ್ಟ್ರ, ಜಾರ್ಖಂಡ್ ಚುನಾವಣೆ ಪ್ರಚಾರಕ್ಕೆ ತೆರೆ: ನಾಳೆ ಮತದಾನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.