Goa; ರಾಜ್ಯದ ಎಲ್ಲ ಶಾಲೆಗಳಲ್ಲಿ ಇಂಟರ್ ನೆಟ್ ಸೇವೆ: ಸಿಎಂ ಸಾವಂತ್
ತುರ್ತು ಸಿಬಂದಿ ಮತ್ತು ಪೊಲೀಸರ ವೇತನ ಒಂದೇ ಮಟ್ಟಕ್ಕೆ
Team Udayavani, Jun 22, 2023, 2:47 PM IST
ಪಣಜಿ: ರಾಜ್ಯದ ಎಲ್ಲ ಶಾಲೆಗಳಿಗೆ ಇಂಟರ್ ನೆಟ್ ಸೇವೆಯನ್ನು ಒದಗಿಸಲು ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ ಎಂದು ಮುಖ್ಯಮಂತ್ರಿ ಡಾ.ಪ್ರಮೋದ್ ಸಾವಂತ್ ತಿಳಿಸಿದ್ದಾರೆ.
ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ತುರ್ತು ಸಿಬಂದಿ ಮತ್ತು ಪೊಲೀಸರ ವೇತನವನ್ನು ಒಂದೇ ಮಟ್ಟಕ್ಕೆ ತರಲಾಗಿದೆ ಎಂದು ತಿಳಿಸಿದರು. ಶಾಖಳಿಯ ಬಸ್ ನಿಲ್ದಾಣವನ್ನು ಕದಂಬ ನಿಗಮಕ್ಕೆ ಹಸ್ತಾಂತರಿಸಲು ಸಚಿವ ಸಂಪುಟ ಸಭೆ ನಿರ್ಧರಿಸಿದೆ. ಕೇಂದ್ರ ಕಾರಾಗೃಹದಲ್ಲಿ ಐದು ವೈದ್ಯಕೀಯ ಅಧಿಕಾರಿಗಳ ಹುದ್ದೆಗಳನ್ನು ಭರ್ತಿ ಮಾಡಲು ಅನುಮೋದನೆ ನೀಡಲಾಗಿದೆ. ಗೋವಾ ಮೆಡಿಕಲ್ ಕಾಲೇಜಿನ ಆಸ್ಪತ್ರೆಗಳಲ್ಲಿ ಆಕ್ಯುಪೇಷನಲ್ ಥೆರಪಿಸ್ಟ್, ಕೆಮಿಸ್ಟ್ ಮತ್ತು ಇತರರ ಹುದ್ದೆಗಳನ್ನು ಸಹ ಮಂಜೂರು ಮಾಡಲಾಗಿದೆ. ಜುಲೈನಿಂದ ನಡೆಯಲಿರುವ ವಿಧಾನಸಭೆ ಅಧಿವೇಶನಕ್ಕೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ ಅಧಿವೇಶನದಲ್ಲಿ ವಿವಿಧ ವಿಷಯಗಳ ಚರ್ಚೆ ನಡೆಯಲಿದೆ ಎಂದು ಮಾಹಿತಿ ನೀಡಿದರು.
ಗೃಹ ಆಧಾರ್, ದಯಾನಂದ ಸಾಮಾಜಿಕ ಭದ್ರತಾ ಯೋಜನೆ ಹಾಗೂ ಇತರೆ ಕಲ್ಯಾಣ ಯೋಜನೆಗಳ ಹಣವನ್ನು ಫಲಾನುಭವಿಗಳ ಖಾತೆಗೆ ಪ್ರತಿ ತಿಂಗಳ 10 ರಂದು ಫಲಾನುಭವಿಗಳ ಖಾತೆಗೆ ಜಮಾ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ರಾಜ್ಯ ಸರ್ಕಾರವು ಯೋಜನೆಯನ್ನು ಸರಳೀಕರಿಸಲು ಪ್ರಯತ್ನ ನಡೆಸಿದೆ. ಈ ಯೋಜನೆಯ ಫಲಾನುಭವಿಗಳು ಆರ್ಥಿಕವಾಗಿ ದುರ್ಬಲ ವರ್ಗದವರಾಗಿದ್ದು, ಅವರಿಗೆ ಈ ಯೋಜನೆಗಳ ಹಣದ ಅವಶ್ಯಕತೆಯಿದೆ. ಕೆಲವು ಬಾರಿ ಪ್ರತಿ ತಿಂಗಳು ಈ ಯೋಜನೆಗಳ ಹಣ ಫಲಾನುಭವಿಗಳಿಗೆ ಲಭಿಸದಿದ್ದಾಗ, ಆರ್ಥಿಕವಾಗಿ ಹಿಂದುಳಿದವರಿಗೆ ಹೆಚ್ಚಿನ ತೊಂದರೆಯುಂಟಾಗುತ್ತದೆ. ಇದರಿಂದಾಗಿ ಪ್ರತಿ ತಿಂಗಳ 10 ನೇ ತಾರೀಕಿನಂದು ಈ ಯೋಜನೆಯ ಹಣವನ್ನು ಫಲಾನುಭವಿಗಳ ಖಾತೆಗೆ ಜಮಾ ಮಾಡಲು ನಿರ್ಣಯ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.