ಗೋವಾದಲ್ಲಿ ಕನ್ನಡ ಭವನ ನಿರ್ಮಾಣ: ಸಿಎಂಗೆ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಅಭಿನಂದನೆ
Team Udayavani, Nov 10, 2021, 3:26 PM IST
ಪಣಜಿ: ಸುಮಾರು 6 ಲಕ್ಷ ಕನ್ನಡಿಗರು ನೆಲೆಸಿರುವ ಗೋವಾ ರಾಜ್ಯದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಕರ್ನಾಟಕ ಸರ್ಕಾರವು 10 ಕೋಟಿ ರೂ ಮಂಜೂರು ಮಾಡಿರುವುದು ಸಂತಸದ ಸಂಗತಿ. ಗೋವಾದಲ್ಲಿ ಕನ್ನಡ ಭವನವು ಅಲ್ಲಿನ 30 ಕ್ಕೂ ಹೆಚ್ಚು ಕನ್ನಡ ಸಂಘಗಳಿಗೆ ಒಂದು ವೇದಿಕೆಯಾಗುವಲ್ಲಿ ಯಾವುದೇ ಸಂದೇಹವಿಲ್ಲ ಎಂದು ಬೆಳಗಾವಿ ಹುಕ್ಕೇರಿಯ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಅಭಿಪ್ರಾಯಪಟ್ಟಿದ್ದಾರೆ.
ಕರ್ನಾಟಕ ಸರ್ಕಾರವು ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ 10 ಕೋಟಿ ರೂ ನಿಧಿ ಮಂಜೂರು ಮಾಡಿರುವ ವಿಷಯಕ್ಕೆ ಸಂಬಂಧಿಸಿದಂತೆ ಶ್ರೀಗಳು ಪ್ರತಿಕ್ರಿಯೆ ನೀಡಿ- ಕಳೆದ 15 ಕ್ಕೂ ಹೆಚ್ಚು ವರ್ಷಗಳಿಂದ ನಾನು ಗೋವಾಕ್ಕೆ ಆಗಮಿಸುತ್ತಿದ್ದು ಪ್ರತಿ ವರ್ಷ ಅಲ್ಲಿನ ಕನ್ನಡ ಸಂಘಗಳ ಬಹುತೇಕ ಕಾರ್ಯಕ್ರಮಗಳಲ್ಲಿ ಪಾಕ್ಗೊಳ್ಳುತ್ತಿದ್ದೇನೆ ಎಂದರು.
ಕನ್ನಡ ಸಂಘಗಳಿಗೆ ಸ್ವಂತ ಕಟ್ಟಡವಿಲ್ಲದ ಕಾರಣ ಬೇರೆ ಯಾವುದೇ ಸಭಾಗೃಹ ಆಶ್ರಯಿಸಿ ಕಾರ್ಯಕ್ರಮ ಹಮ್ಮಿಕೊಳ್ಳುವ ಅನಿವಾರ್ಯತೆಯಿತ್ತು. ಆದರೆ ಕರ್ನಾಟಕ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ರವರು ಗೋವಾದಲ್ಲಿ ಕನ್ನಡ ಭವನ ನಿರ್ಮಾಣ ಮಾಡಿ ಕನ್ನಡಿಗರಿಗೆ ಒಂದು ವೇದಿಕೆ ಕಲ್ಪಿಸಿಕೊಡಲು ಮುಂದಾಗಿರುವುದು ಸಂತಸದ ಸಂಗತಿ. ಇದಕ್ಕಾಗಿ ನಾನು ಮುಖ್ಯಮಂತ್ರಿಗಳನ್ನು ಅಭಿನಂದಿಸುತ್ತೇನೆ. ಗೋವಾ ಕನ್ನಡಿಗರಿಗೆ ಕನ್ನಡ ಭವನ ನಿರ್ಮಾಣ ವಿಷಯಕ್ಕೆ ಸಂಬಂಧಿಸಿದಂತೆ ಸಹಾಯ ಸಹಕಾರ ನೀಡಿದ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ರವರನ್ನು ಕೂಡ ಅಭಿನಂದಿಸುತ್ತೇನೆ ಎಂದು ಹುಕ್ಕೇರಿ ಶ್ರೀ ನುಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Parliament Winter Session: ಇಂದಿನಿಂದ ಸಂಸತ್ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Maharashtra Election: ಅಘಾಡಿ ಸೋಲಿಗೆ ಉದ್ಧವ್,ಶರದ್ ಕಾರಣ: ಕಾಂಗ್ರೆಸ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Bidar: ವಕ್ಫ್ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.