ಗೋವಾದಲ್ಲಿ ಹೆಚ್ಚುತ್ತಿರುವ ವಿಮಾನ ಸಂಚಾರ: ಕಾರಣ?
Team Udayavani, Oct 12, 2021, 3:52 PM IST
ಪಣಜಿ: ಗೋವಾಕ್ಕೆ ಆಗಮಿಸುವ ಪ್ರವಾಸಿಗರ ಸಂಖ್ಯೆ ದಿನೆ ದಿನೇ ಹೆಚ್ಚುತ್ತಿದೆ. ಗೋವಾಕ್ಕೆ ಆಗಮಿಸುವ ದೇಶೀಯ ವಿಮಾನಗಳ ಸಂಖ್ಯೆ ಕೂಡ ಹೆಚ್ಚುತ್ತಲೇ ಇದ್ದು ಸದ್ಯ ಪ್ರತಿದಿನ ವಿವಿಧ ರಾಜ್ಯಗಳಿಂದ ಗೋವಾಕ್ಕೆ 65 ವಿಮಾನಗಳು ಬಂದಿಳಿಯುತ್ತಿದೆ. ಪ್ರವಾಸಿಗರ ಸುರಕ್ಷತಾ ದೃಷ್ಠಿಯಿಂದ ವಿಮಾನ ನಿಲ್ದಾಣ ಪ್ರಾಧಿಕಾರವು ಎಲ್ಲಾ ಕ್ರಮ ಕೈಗೊಳ್ಳುತ್ತಿದೆ. ಮುಂಬರುವ ದಿನಗಳಲ್ಲಿ ಗೋವಾಕ್ಕೆ ಆಗಮಿಸುವ ಪ್ರವಾಸಿಗರ ಸಂಖ್ಯೆ ಇನ್ನೂ ಹೆಚ್ಚಲಿದೆ ಎಂದು ಗೋವಾ ದಾಬೋಲಿಂ ವಿಮಾನ ನಿಲ್ದಾಣದ ಸಂಚಾಲಕ ಗಗನ್ ಮಲಿಕ್ ಮಾಹಿತಿ ನೀಡಿದ್ದಾರೆ.
ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಅವರು- ಗೋವಾ ರಾಜ್ಯದಲ್ಲಿ ಸದ್ಯ ದೇಶೀಯ ವಿಮಾನಗಳ ಓಡಾಟಕ್ಕೆ ಮಾತ್ರ ಪರವಾನಗಿ ನೀಡಲಾಗಿದೆ. ಪ್ರಸಕ್ತ ಅಕ್ಟೋಬರ್ ತಿಂಗಳಲ್ಲೆ ವಿದೇಶಿ ಚಾರ್ಟರ್ ವಿಮಾನಗಳ ಓಡಾಟ ಆರಂಭಿಸಲು ರಾಜ್ಯ ಸರ್ಕಾರ ಪ್ರಯತ್ನ ನಡೆಸುತ್ತಿದೆ. ಆದರೆ ನವೆಂಬರ್ ಎರಡನೆಯ ವಾರದಲ್ಲಿ ಗೋವಾಕ್ಕೆ ಚಾರ್ಟರ್ ವಿಮಾನಗಳ ಆಗಮನ ಆರಂಭಗೊಳ್ಳುವ ಸಾಧ್ಯತೆಯಿದೆ. ಗೋವಾಕ್ಕೆ ಸದ್ಯ ಮಹಾರಾಷ್ಟ್ರ, ದೆಹಲಿ, ಗುಜರಾತ್ ಮತ್ತು ರಾಜಸ್ಥಾನದಿಂದ ಬರುವ ವಿಮಾನಗಳ ಸಂಖ್ಯೆ ಹೆಚ್ಚಾಗಿದೆ. ಕಳೆದ ಭಾನುವಾರ ಒಂದೇ ದಿನ 22000 ಪ್ರವಾಸಿಗರು ವಿಮಾನಗಳ ಮೂಲಕ ಗೋವಾಕ್ಕೆ ಬಂದಿಳಿದಿದ್ದಾರೆ ಎಂದು ಗಗನ್ ಮಲಿಕ್ ಮಾಹಿತಿ ನೀಡಿದರು.
ಇದನ್ನೂ ಓದಿ:ನೂರಾರು ಪೊಲೀಸ್ ಕುಟುಂಬಗಳ ಮಹಿಳೆಯರು, ಮಕ್ಕಳಿಂದ ಎಸ್ಪಿ ಭೇಟಿ
ಗೋವಾ ದಾಬೋಲಿಂ ವಿಮಾನ ನಿಲ್ದಾಣದಲ್ಲಿ ಕೋವಿಡ್ ನಿಯಮಾವಳಿಗಳನ್ನು ಖಡ್ಡಾಯವಾಗಿ ಪಾಲನೆ ಮಾಡಲಾಗುತ್ತಿದೆ. ಮಾಸ್ಕ್ ಧರಿಸದ ಪ್ರವಾಸಿಗರಿಗೆ 500 ರೂ. ದಂಡ ವಿಧಿಸಲಾಗುತ್ತಿದೆ. ಕೋವಿಡ್ ನೆಗೆಟಿವ್ ಪ್ರಮಾಣಪತ್ರವಿಲ್ಲದೆಯೇ ಬಂದಿಳಿಯುವ ಪ್ರವಾಸಿಗರಿಗೆ ಕೋವಿಡ್ ತಪಾಸಣೆ ನಡೆಸಲಾಗುತ್ತದೆ ಎಂದು ದಾಬೋಲಿಂ ವಿಮಾನ ನಿಲ್ದಾಣದ ಸಂಚಾಲಕ ಗಗನ್ ಮಲಿಕ್ ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ
The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ
Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…
Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು
Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು
MUST WATCH
ಹೊಸ ಸೇರ್ಪಡೆ
KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್
Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ
Kantara Chapter 1: ರಿಷಬ್ ಶೆಟ್ಟಿ ʼಕಾಂತಾರ ಚಾಪ್ಟರ್ -1ʼ ರಿಲೀಸ್ ಗೆ ಡೇಟ್ ಫಿಕ್ಸ್
The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ
Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.