ಸ್ಥಿರ ಸರ್ಕಾರ ನೀಡುವ ಶಕ್ತಿ ಕೇವಲ ಕಾಂಗ್ರೇಸ್ ಪಕ್ಷಕ್ಕೆ ಮಾತ್ರವಿದೆ: ಪಿ.ಚಿದಂಬರಂ
Team Udayavani, Oct 15, 2021, 9:39 PM IST
ಪಣಜಿ: ಗೋವಾದಲ್ಲಿ ಸ್ಥಿರ ಸರ್ಕಾರ ನೀಡುವ ಶಕ್ತಿ ಕೇವಲ ಕಾಂಗ್ರೇಸ್ ಪಕ್ಷಕ್ಕೆ ಮಾತ್ರವಿದೆ. ಗೋವಾ ರಾಜ್ಯದ ಜನರ ಅಪೇಕ್ಷೆಯನ್ನು ನಾವು ಶೇ 100 ರಷ್ಟು ಪೂರ್ಣಗೊಳಿಸುತ್ತೇವೆ. ಇದಕ್ಕಾಗಿ ಗೋವಾ ರಾಜ್ಯದ ಜನತೆ ಕಾಂಗ್ರೇಸ್ ಪಕ್ಷಕ್ಕೆ ಪೂರ್ಣ ಬಹುಮತ ನೀಡಿ ಅಧಿಕಾರಕ್ಕೆ ತರುವ ಅಗತ್ಯವಿದೆ ಎಂದು ಕಾಂಗ್ರೇಸ್ ಪಕ್ಷದ ಕೇಂದ್ರ ಚುನಾವಣಾ ನಿರೀಕ್ಷಕ ಪಿ.ಚಿದಂಬರಂ ರಾಜ್ಯದ ಜನತೆಯ ಬಳಿ ಮನವಿ ಮಾಡಿದ್ದಾರೆ.
ಕಾಂಗ್ರೇಸ್ ಪಕ್ಷದ ಚುನಾವಣಾ ಪ್ರಣಾಳಿಕೆ ಹೇಗಿರಬೇಕು ಎಂಬ ಕುರಿತಂತೆ ಮಡಗಾಂವನಲ್ಲಿ ಪಿ. ಚಿದಂಬರಂ ರವರು ಜನತೆಯೊಂದಿಗೆ ಸಂವಾದ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು- ಜನತೆಯ ಸೂಚನೆಗಳು ಉತ್ತಮವಾಗಿದೆ. ಜನತೆಯ ಅಪೇಕ್ಷೆಯನ್ನು ನಾವು ಪೂರ್ಣಗೊಳಿಸಲು ಕಾಂಗ್ರೇಸ್ ಪಕ್ಷಕ್ಕೆ ಪೂರ್ಣ ಬಹುಮತ ನೀಡಬೇಕು. ಸದ್ಯ ಹೊರ ರಾಜ್ಯದಿಂದ ಗೋವಾಕ್ಕೆ ಬಂದಿರುವ ಪಕ್ಷ ಗೋವಾದಲ್ಲಿ ರಾಜಕೀಯ ಬಿಗಡಾಯಿಸಲು ಬಂದಿದೆ. ಇದೆಲ್ಲವನ್ನು ಜನತೆ ಗಮನದಲ್ಲಿಟ್ಟುಕೊಳ್ಳುವ ಅಗತ್ಯವಿದೆ ಎಂದು ಚಿದಂಬರಂ ನುಡಿದರು.
ಈ ಸಂದರ್ಭದಲ್ಲಿ ರಾಜ್ಯ ಪ್ರತಿಪಕ್ಷದ ನಾಯಕ ದಿಗಂಬರ್ ಕಾಮತ್, ದಕ್ಷಿಣ ಗೋವಾ ಸಂಸದ ಫ್ರಾನ್ಸಿಸ್ ಸರ್ದಿನ್, ಶಾಸಕ ಅಲೆಕ್ಸ ರೆಜಿನಾಲ್ಡ ಲಾರೆನ್ಸ, ಕಾಂಗ್ರೇಸ್ ರಾಜ್ಯಾಧ್ಯಕ್ಷ ಗಿರೀಶ್ ಚೋಡಣಕರ್ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tamil Nadu: ಗೋ ಮಾಂಸ ತಿನ್ನೋದು ಸರಿ ಎಂದಾದರೆ ಮೂತ್ರ ಯಾಕೆ ಬೇಡ: ಬಿಜೆಪಿ
Delhi Polls: ದಿಲ್ಲಿ ವಿಧಾನಸಭೆಯ 70 ಸ್ಥಾನಕ್ಕೆ ಬರೋಬ್ಬರಿ 699 ಅಭ್ಯರ್ಥಿಗಳು ಸ್ಪರ್ಧೆ!
Supreme Court: ಟೆಕಿ ಅತುಲ್ ಪುತ್ರನನ್ನು ಅಜ್ಜಿ ಸುಪರ್ದಿಗೆ ನೀಡಲು ಸುಪ್ರೀಂ ನಕಾರ
NRI: ಸಂಸತ್ತಿನಲ್ಲಿ ಎನ್‌ಆರ್‌ಐ ಪ್ರಾತಿನಿಧ್ಯ: ಸ್ಥಾಯಿ ಸಮಿತಿ ಸಭೇಲಿ ಚರ್ಚೆ
Dog’s Revenge: ತನಗೆ ಡಿಕ್ಕಿ ಹೊಡೆದ ಕಾರಿನ ಮೇಲೆ ಸೇಡು ತೀರಿಸಿಕೊಂಡ ಶ್ವಾನ…