Goa: ಕ್ಯಾಸಲ್ರಾಕ್-ಕರಂಜೋಲ್ ರೈಲು ನಿಲ್ದಾಣದ ಬಳಿ ಮಣ್ಣು ತೆರವು ಕಾರ್ಯ ಬಹುತೇಕ ಪೂರ್ಣ
ಹಳಿಗಳ ದುರಸ್ಥಿ ಕಾರ್ಯ ಪೂರ್ಣಗೊಂಡ ನಂತರ ರೈಲು ಓಡಾಟ ಪುನರಾರಂಭ
Team Udayavani, Jul 28, 2023, 4:21 PM IST
ಪಣಜಿ: ಗೋವಾದ ಕ್ಯಾಸಲ್ರಾಕ್-ಕರಂಜೋಲ್ ರೈಲು ನಿಲ್ದಾಣದ ಬಳಿ ಸುರಂಗ ಮಾರ್ಗದ ಬಳಿ ರೈಲ್ವೆ ಹಳಿಗಳ ಮೇಲೆ ಭಾರಿ ಪ್ರಮಾಣದಲ್ಲಿ ಗುಡ್ಡ ಕುಸಿತವುಂಟಾಗಿ ನಾಲ್ಕು ದಿನಗಳಿಂದ ಸಿಬ್ಬಂದಿಗಳು ಸತತವಾಗಿ ಮಣ್ಣು ತೆರವು ಕಾರ್ಯ ಕೈಗೆತ್ತಿಕೊಂಡಿದ್ದಾರೆ. ಇದೀಗ ಮಣ್ಣು ತೆರವು ಕಾರ್ಯ ಬಹುತೇಕ ಪೂರ್ಣಗೊಂಡಿದೆ. ಇನ್ನು ಹಳಿಗಳ ದುರಸ್ಥಿ ಕಾರ್ಯ ಪೂರ್ಣಗೊಂಡ ನಂತರ ಈ ಮಾರ್ಗದಲ್ಲಿ ರೈಲು ಓಡಾಟ ಪುನರಾರಂಭಗೊಳ್ಳುವ ಸಾಧ್ಯತೆಯಿದೆ ಎಂದು ರೈಲ್ವೆ ಅಧಿಕಾರಿಗಳಿಂದ ಮಾಹಿತಿ ಲಭ್ಯವಾಗಿದೆ.
ಕಳೆದ ಸುಮಾರು ನಾಲ್ಕು ದಿಗಳಿಂದ ಈ ಮಾರ್ಗದಲ್ಲಿ ಓಡಾಟ ನಡೆಸುವ ಎಲ್ಲ ರೈಲುಗಳ ಮಾರ್ಗ ಬದಲಾವಣೆ ಮಾಡಲಾಗುತ್ತಿದೆ. ಕ್ಯಾಸಲ್ರಾಕ್ ಬಳಿ ರೈಲ್ವೆ ಹಳಿಗಳ ಮೇಲೆ ಭೂಕುಸಿತದಿಂದಾಗಿ ಕೆಲವು ನಿಲ್ದಾಣಗಳ ಮೊದಲು ಹುಬ್ಬಳ್ಳಿಯಲ್ಲಿ ರೈಲುಗಳನ್ನು ನಿಲ್ಲಿಸಲಾಗುತ್ತಿದೆ. ಹೀಗಾಗಿ ಗೋವಾಕ್ಕೆ ಬರುವ ಪ್ರಯಾಣಿಕರು ಪರದಾಡುತ್ತಿದ್ದಾರೆ.
ಹಳಿಗಳ ಮೇಲೆ ಭಾರಿ ಪ್ರಮಾಣದಲ್ಲಿ ಬಿದ್ದಿದ್ದ ಮಣ್ಣು ಮತ್ತು ಮರಗಳನ್ನು ಸಿಬ್ಬಂದಿಗಳು ತೆರವುಗೊಳಿಸುತ್ತಿದ್ದು, ಅಂತಿಮ ಹಂತದಲ್ಲಿ ತೆರವು ಕಾರ್ಯ ನಡೆಯುತ್ತಿದೆ. ಇದೀಗ ರೈಲು ಹಳಿಗಳ ಜೋಡಣೆ ಹಾಗೂ ದುರಸ್ಥಿ ಕಾರ್ಯ ಪೂರ್ಣಗೊಂಡ ನಂತರ ಈ ಮಾರ್ಗದಲ್ಲಿ ಎಂದಿನಂತೆ ರೈಲು ಓಡಾಟ ಆರಂಭಗೊಳ್ಳಲಿದೆ ಎನ್ನಲಾಗಿದೆ.
ಇದನ್ನೂ ಓದಿ: Reunite; 35 ವರ್ಷಗಳ ನಂತರ ತಾಯಿ-ಮಗನನ್ನು ಒಂದುಗೂಡಿಸಿದ ಪ್ರವಾಹ ರಕ್ಷಣಾ ಕಾರ್ಯಾಚರಣೆ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa: ಕ್ಯಾಲಂಗುಟ್ ಬೀಚ್ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್ ಜೈಲಿಗೆ
Road Project: ಶಿರಾಡಿ ಘಾಟ್ ಸುರಂಗ ಯೋಜನೆಗೆ ಡಿಪಿಆರ್ ರಚಿಸಿ: ಕೇಂದ್ರ ಸೂಚನೆ
Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು
GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಒಲವಿನ ಊಟಕ್ಕೆ ಅಕ್ಕಂದಿರು ಸಿದ್ಧ!
PV Sindhu: ವಿಮಾನದಲ್ಲಿ ಶುರುವಾಯ್ತು ಸಿಂಧು-ದತ್ತಾ ಲವ್ ಸ್ಟೋರಿ
Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ
Kundapura: ಅನೂಪ್ ಪೂಜಾರಿ ಪಾರ್ಥೀವ ಶರೀರ ಹುಟ್ಟೂರಿಗೆ; ತಾಯಿ, ಪತ್ನಿಯಿಂದ ಅಂತಿಮ ದರ್ಶನ
Mangaluru: ಪದವು ಜಂಕ್ಷನ್- ಶರ್ಬತ್ ಕಟ್ಟೆ ರಸ್ತೆಗೆ ಅಗತ್ಯವಿದೆ ಫುಟ್ಪಾತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.