ಅಲೆಮಾರಿ ಕುಟುಂಬದ ಮೇಲೆ ಗೋರಕ್ಷಕರ ದಾಳಿ
Team Udayavani, Apr 23, 2017, 3:45 AM IST
ಶ್ರೀನಗರ: ರಾಜಸ್ಥಾನದ ಅಳ್ವಾರ್ನಲ್ಲಿ ಗೋರಕ್ಷಕರ ದಾಳಿ ಘಟನೆ ನೆನಪಲ್ಲಿರುವಾಗಲೇ, ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ 9 ವರ್ಷದ ಬಾಲಕಿ ಸೇರಿದಂತೆ ಒಂದೇ ಕುಟುಂಬದ ಐವರ ಮೇಲೆ ಸ್ವಘೋಷಿತ ಗೋರಕ್ಷಕರು ಹಲ್ಲೆ ನಡೆಸಿದ ಘಟನೆ ಶುಕ್ರವಾರ ಸಂಜೆ ನಡೆದಿದೆ. ಘಟನೆಯಲ್ಲಿ 9ರ ಬಾಲಕಿ ಶಮ್ಮಿ ತೀವ್ರ ಗಾಯಗೊಂಡಿದ್ದು, ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. 10ರ ಮಗನೊಬ್ಬ ಕಾಣೆಯಾಗಿದ್ದು, ಇನ್ನೂ ಪತ್ತೆಯಾಗಿಲ್ಲ ಎಂದು ಸಂತ್ರಸ್ತ ಕುಟುಂಬ ಹೇಳಿದೆ.
ಇಲ್ಲಿನ ಅಲೆಮಾರಿ ಜನಾಂಗದ ಕುಟುಂಬವೊಂದು ಶುಕ್ರವಾರ 16 ಹಸುಗಳು, ಮೇಕೆಗಳು, ಕುರಿಗಳು ಸೇರಿದಂತೆ ತಮ್ಮ ಜಾನುವಾರುಗಳೊಂದಿಗೆ ಬೇರೆ ಪ್ರದೇಶಕ್ಕೆ ಹೊರಟಿತ್ತು. ತಲ್ವಾರಾ ಪ್ರದೇಶ ತಲುಪುತ್ತಿದ್ದಂತೆ ಅಲ್ಲಿಗೆ ಲಗ್ಗೆಯಿಟ್ಟ ಗೋರಕ್ಷಕರ ಗುಂಪು, ಏಕಾಏಕಿ ಈ ಕುಟುಂಬದ ಮೇಲೆ ಕಬ್ಬಿಣದ ರಾಡ್ಗಳಿಂದ ಹಲ್ಲೆ ನಡೆಸಿತು. “ನಮ್ಮ ಮಕ್ಕಳನ್ನು, ಹಿರಿಯರನ್ನೂ ಬಿಡದೇ ರಾಡ್ನಿಂದ ಥಳಿಸಿದರು. 10 ವರ್ಷದ ಮಗ ಕಾಣುತ್ತಿಲ್ಲ. ಅವನು ಬದುಕಿದ್ದಾನೋ, ಇಲ್ಲವೋ ಎಂದೂ ಗೊತ್ತಿಲ್ಲ,’ ಎಂದು ಸಂತ್ರಸ್ತೆ ನಸೀಂ ಬೇಗಂ ಹೇಳಿದ್ದಾರೆ.
ಘಟನೆ ಸಂಬಂಧ ಪ್ರಕರಣ ದಾಖಲಾಗಿದೆ. ಐವರು ಆರೋಪಿಗಳ ಗುರುತು ಪತ್ತೆಯಾಗಿದೆ. ಆದರೆ, ಯಾರನ್ನೂ ಬಂಧಿಸಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ
BJP; ಅಭಿವೃದ್ಧಿ, ಉತ್ತಮ ಆಡಳಿತ ಗೆದ್ದೇ ಗೆಲ್ಲುತ್ತದೆ: ಜಯಕ್ಕೆ ಪ್ರಧಾನಿ ಬಣ್ಣನೆ
Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್
Tour: ಮೂರು ದೇಶ ಪ್ರವಾಸ: ಪ್ರಧಾನಿ ಮೋದಿ 31 ದ್ವಿಪಕ್ಷೀಯ ಸಭೆಗಳು!
Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್ಡಿಎ ಮೇಲುಗೈ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Rishabh Pant: ಅಪಘಾತದ ವೇಳೆ ನೆರವಾದವರಿಗೆ ಗಿಫ್ಟ್ ನೀಡಿದ ರಿಷಭ್ ಪಂತ್
Prabhutva movie review: ಪ್ರಗತಿ ಪಥದಲ್ಲಿ ಕ್ರಾಂತಿಯ ಕಿಡಿ
BBK11: ಇವತ್ತು ಬಿಗ್ಬಾಸ್ ಮನೆಯಿಂದ ಆಚೆ ಬರುವುದು ಇವರೇ ನೋಡಿ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.