ಮಧ್ಯಪ್ರದೇಶ: ಹಳೆ ಮನೆ ಅವಶೇಷ ತೆರವುಗೊಳಿಸುವ ವೇಳೆ ಕಾರ್ಮಿಕರಿಗೆ ಸಿಕ್ತು 86 ಚಿನ್ನದ ನಾಣ್ಯ!
ತಮ್ಮೊಳಗೆ ಹಂಚಿಕೊಂಡ ಕಾರ್ಮಿಕರ ಗತಿ ಏನಾಯಿತು?
Team Udayavani, Aug 28, 2022, 3:57 PM IST
ಮಧ್ಯ ಪ್ರದೇಶ: ಹಳೆಯ ಮನೆಯ ಅವಶೇಷಗಳನ್ನು ತೆರವುಗೊಳಿಸುವ ವೇಳೆ ಕಾರ್ಮಿಕರಿಗೆ 60 ಲಕ್ಷ ರೂ. ಮೌಲ್ಯದ ಚಿನ್ನದ ನಾಣ್ಯಗಳು ಸಿಕ್ಕಿರುವ ಘಟನೆ ಮಧ್ಯ ಪ್ರದೇಶದ ಧಾರ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದ್ದು, ಕಾರ್ಮಿಕರನ್ನು ಪೊಲೀಸರು ಬಂಧಿಸಿದ್ದಾರೆ.
ಕೆಲ ದಿನಗಳ ಹಿಂದೆ 8 ಮಂದಿ ಕಾರ್ಮಿಕರು ಜಿಲ್ಲೆಯ ಹಳೆಯ ಮನೆಯೊಂದನ್ನು ನೆಲಸಮಗೊಳಿಸಿ, ಅವಶೇಷಗಳನ್ನು ತೆಗೆಯುವ ವೇಳೆ ಸುಮಾರು 86 ಚಿನ್ನದ ನಾಣ್ಯಗಳು ಸಿಕ್ಕಿವೆ. ಅವುಗಳನ್ನು ಕಾರ್ಮಿಕರು ಯಾರಿಗೂ ತಿಳಿಯದ ಹಾಗೆ, ಸ್ಥಳೀಯ ಪೊಲೀಸರಿಗೂ ಮಾಹಿತಿಯನ್ನು ನೀಡದೆ ತಮ್ಮ ತಮ್ಮೊಳಗೆ ಹಂಚಿಕೊಂಡಿದ್ದಾರೆ.
ಹೇಗೋ ವಿಷಯವನ್ನು ತಿಳಿದ ಸ್ಥಳೀಯ ಪೊಲೀಸರು 8 ಮಂದಿ ಕಾರ್ಮಿಕರನ್ನು ಬಂಧಿಸಿದ್ದಾರೆ. ಅವರಿಂದ 1 ಕಿ.ಗ್ರಾಂ ತೂಕದ 86 ಚಿನ್ನದ ನಾಣ್ಯಗಳನ್ನು ಜಪ್ತಿ ಮಾಡಿದ್ದಾರೆ.
ಈ ಬಗ್ಗೆ ಮಾತಾನಾಡಿರುವ ಸ್ಥಳೀಯ ಎಸ್ ಪಿ. ದೇವೇಂದ್ರ ಪಾಟಿದಾರ್, ಕೆಲ ದಿನಗಳ ಹಿಂದೆ ಹಳೆ ಮನೆಯ ಅವಶೇಷವನ್ನು ತೆರವುಗೊಳಿಸುವ ವೇಳೆ ಕಾರ್ಮಿಕರಿಗೆ ಚಿನ್ನದ ನಾಣ್ಯಗಳು ಸಿಕ್ಕಿದೆ. ಪುರಾತತ್ವ ಮಹತ್ವವನ್ನು ಹೊಂದಿರುವ ನಾಣ್ಯವನ್ನು ಪೊಲೀಸರಿಗೆ ತಿಳಿಸದೆ ಹಂಚಿಕೊಂಡಿರುವ ಕಾರ್ಮಿಕರನ್ನು ಬಂಧಿಸಲಾಗಿದೆ. ಇದರ ಮೌಲ್ಯ 60 ಲಕ್ಷ ರೂ.ಇರಬಹುದು. ಇದನ್ನು ಪುರಾತತ್ವ ಇಲಾಖೆಯ ಅಧಿಕಾರಿಗಳಿಗೆ ನೀಡುತ್ತೇವೆ. ಅದನ್ನು ಅವರು ಪರಿಶೀಲನೆ ನಡೆಸುತ್ತಾರೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್: ನದಿಗೆ ಬಿದ್ದು ಮೂವರ ಸಾವು
Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ
NCP Vs NCP: ಶರದ್ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್ ಬಣ
Maharashtra: ಉದ್ದವ್ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ
PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.