ಗೋರಖ್‌ಪುರ ದುರಂತ: ವರದಿ ಕೇಳಿದ ಕೋರ್ಟ್
Team Udayavani, Aug 19, 2017, 8:15 AM IST
ಲಕ್ನೋ: ಗೋರಖ್‌ಪುರದ ಆಸ್ಪತ್ರೆಯಲ್ಲಿ ಆಮ್ಲಜನಕದ ಕೊರತೆಯಿಂದ 70ಕ್ಕೂ ಹೆಚ್ಚು ಮಕ್ಕಳು ಸಾವಿಗೀಡಾದ ಕುರಿತು ಪ್ರತಿ ಅಫಿದವಿತ್ ಸಲ್ಲಿಸುವಂತೆ ಅಲಹಾಬಾದ್ ಹೈಕೋರ್ಟ್ ಶುಕ್ರವಾರ ಉತ್ತರ ಪ್ರದೇಶ ಸರಕಾರ ಮತ್ತು ವೈದ್ಯಕೀಯ ಶಿಕ್ಷಣ ಮಹಾ ನಿರ್ದೇಶಕರಿಗೆ ನಿರ್ದೇಶಿಸಿದೆ. ಅಫಿದವಿತ್ ಸಲ್ಲಿಸಲು 6 ವಾರಗಳ ಗಡುವನ್ನೂ ವಿಧಿಸಿದೆ.
ಮಕ್ಕಳ ಸಾವಿನ ಕುರಿತು ಸಾಮಾಜಿಕ ಕಾರ್ಯಕರ್ತೆ ನೂತನ್ ಠಾಕೂರ್ ಎಂಬವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ವೇಳೆ ನ್ಯಾಯಾಲಯ ಈ ಸೂಚನೆ ನೀಡಿದೆ. ಸರಕಾರದ ಇದುವರೆಗಿನ ನಡವಳಿಕೆಗಳು ಸತ್ಯಾಂಶವನ್ನು ಮುಚ್ಚಿಡಲು ಮತ್ತು ತಪ್ಪಿತಸ್ಥರಿಗೆ ರಕ್ಷಣೆ ನೀಡಲು ನಡೆಸುತ್ತಿರುವ ಪ್ರಯತ್ನ ಎಂಬಂತೆ ಕಾಣುತ್ತಿದೆ ಎಂದು ಅರ್ಜಿದಾರರು ಆರೋಪಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಪೀಠ ಈ ಆದೇಶ ಹೊರಡಿಸಿದೆ. ಮುಂದಿನ ವಿಚಾರಣೆ ಅ.9ಕ್ಕೆ ನಡೆಯಲಿದೆ. ಏತನ್ಮಧ್ಯೆ, ಶನಿವಾರ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಹಾಗೂ ಉ.ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರು ಗೋರಖ್‌ಪುರಕ್ಕೆ ಭೇಟಿ ನೀಡಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.