ಆರ್‌ಟಿಐ ಅರ್ಜಿಯ ಅಗತ್ಯತೆಯನ್ನೇ ಸರ್ಕಾರ ಕಡಿಮೆ ಮಾಡಿದೆ: ಶಾ
Team Udayavani, Oct 12, 2019, 7:20 PM IST
ನವದೆಹಲಿ: ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಎಷ್ಟು ಸಾಧ್ಯವೋ ಅಷ್ಟು ಮಾಹಿತಿಗಳನ್ನು ಸಾರ್ವಜನಿಕರೊಂದಿಗೆ ಹಂಚಿಕೊಳ್ಳುವ ಮೂಲಕ ಮಾಹಿತಿ ಹಕ್ಕು ಕಾಯ್ದೆ(ಆರ್‌ಟಿಐ)ಯಡಿ ಅರ್ಜಿ ಸಲ್ಲಿಸಬೇಕಾದ ಅಗತ್ಯತೆಯನ್ನೇ ಕಡಿಮೆ ಮಾಡಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಶನಿವಾರ ನವದೆಹಲಿಯಲ್ಲಿ ಕೇಂದ್ರ ಮಾಹಿತಿ ಆಯೋಗದ 14ನೇ ವಾರ್ಷಿಕ ಸಮ್ಮೇಳನವನ್ನು ಉದ್ದೇಶಿಸಿ ಮಾತನಾಡಿದ ಅವರು, “ಆರ್‌ಟಿಐ ಅರ್ಜಿ ಸಲ್ಲಿಕೆಗೆ ಸಾಕಷ್ಟು ಅವಕಾಶಗಳಿದ್ದರೂ, ಅರ್ಜಿಗಳ ಸಂಖ್ಯೆ ಕಡಿಮೆಯಾಗಿದೆ ಎಂದರೆ, ಸರ್ಕಾರದ ಕೆಲಸವು ಜನರಿಗೆ ತೃಪ್ತಿ ತಂದಿದೆ ಎಂದರ್ಥ. ಹೆಚ್ಚಿನ ಸಂಖ್ಯೆಯ ಆರ್‌ಟಿಐ ಅರ್ಜಿಗಳು ಸರ್ಕಾರದ ಯಶಸ್ಸನ್ನು ಪ್ರತಿನಿಧಿಸುವುದಿಲ್ಲ’ ಎಂದಿದ್ದಾರೆ.
ಪ್ರಧಾನಿ ಮೋದಿ ಪರಿಚಯಿಸಿರುವ ವ್ಯವಸ್ಥೆಯಿಂದಾಗಿ, ಜನರು ಆರ್‌ಟಿಐ ಅರ್ಜಿ ಸಲ್ಲಿಸದೆಯೇ, ಸರ್ಕಾರದ ಎಲ್ಲ ಯೋಜನೆಗಳ ಮಾಹಿತಿಯನ್ನೂ ಆನ್‌ಲೈನ್ ಮೂಲಕವೇ ತಿಳಿದುಕೊಳ್ಳಬಹುದಾಗಿದೆ ಎಂದಿದ್ದಾರೆ ಶಾ.
ಇದೇ ವೇಳೆ, ಆಡಳಿತಕ್ಕೆ ತಂತ್ರಜ್ಞಾನಗಳ ಬಳಕೆ ಕುರಿತು ಮಾತನಾಡಿದ ಅಮಿತ್ ಶಾ, ಕೇದಾರನಾಥ ಮರುನಿರ್ಮಾಣ ಯೋಜನೆಯ ಮೇಲ್ವಿಚಾರಣೆಯನ್ನು ಡ್ರೋನ್ ಮೂಲಕ ನಡೆಸಿದ ಕುರಿತೂ ವಿವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಮತ ನೀಡಿದರೆ ಮದುವೆ ಮಾಡಿಸುವೆ: ಶರದ್ ಬಣದ ನಾಯಕ
India-Afghanistan: ಆಫ್ಘನ್ ಜೊತೆಗೆ ಬಾಂಧವ್ಯ ಪುನಃಸ್ಥಾಪನೆಗೆ ಭಾರತ ಸಜ್ಜು?
Doctor: ಸೀರೆ ಉಟ್ಟ ಸ್ತ್ರೀಯರೇ,ಪೆಟಿಕೋಟ್ ಕ್ಯಾನ್ಸರ್ ಬಗ್ಗೆ ಎಚ್ಚರವಿರಲಿ
Panaji: ವಿದೇಶಿ ಪ್ರವಾಸಿಗರ ಕಳೆದುಕೊಂಡ ಗೋವಾ: ಆರ್ಥಿಕ ಅಪಾಯದ ಭೀತಿ!
Nagpur: ರಾಹುಲ್ ಕಾರ್ಯಕ್ರಮದಲ್ಲಿ ಖಾಲಿ ಸಂವಿಧಾನ ಪುಸ್ತಕ ಹಂಚಿಕೆ: ಬಿಜೆಪಿ ಆರೋಪ
MUST WATCH
ಹೊಸ ಸೇರ್ಪಡೆ
Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್ ಸೃಷ್ಟಿ!
Canada-India: ಕಾನ್ಸುಲರ್ ಕ್ಯಾಂಪ್ ರದ್ದು; ಕೆನಡಾಗೆ ಭಾರತ ತಿರುಗೇಟು
Electricity Price: ರಾಜ್ಯದ ಜನತೆಗೆ ಈ ಬಾರಿಯೂ ವಿದ್ಯುತ್ ದರ ಏರಿಕೆ ಶಾಕ್?
Waqf Property: ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ರಾಜ್ಯ ಭೇಟಿ: ಕಾಂಗ್ರೆಸ್ ಕೆಂಡ
Injustice: ಮೊಟ್ಟೆ ಕೇಳಿದ ಶಾಲಾ ವಿದ್ಯಾರ್ಥಿಗಳಿಗೆ ಸಿಕ್ಕಿದ್ದು ಚಿಕ್ಕ ಚಿಕ್ಕಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.