ಮಹಿಳೆಯರ ಮೇಲಿನ ದೌರ್ಜನ್ಯ ತಡೆಗೆ ಶಿ-ಬಾಕ್ಸ್
Team Udayavani, Jul 25, 2017, 8:55 AM IST
ಹೊಸದಿಲ್ಲಿ: ಮಹಿಳಾ ಉದ್ಯೋಗಿಗಳು ತಮ್ಮ ಉದ್ಯೋಗ ಸ್ಥಳಗಳಲ್ಲಿ ಎದುರಿಸುವ ಲೈಂಗಿಕ ದೌರ್ಜನ್ಯಗಳ ಕುರಿತು ದೂರು ನೀಡಲು ಕೇಂದ್ರ ಸರಕಾರ ಶಿ-ಬಾಕ್ಸ್ (ಸೆಕ್ಷುವಲ್ ಹರ್ಯಾಸ್ಮೆಂಟ್ ಎಲೆಕ್ಟ್ರಾನಿಕ್ ಬಾಕ್ಸ್) ಹೆಸರಿನಲ್ಲಿ ಆನ್ಲೈನ್ ವೇದಿಕೆ ಕಲ್ಪಿಸಿದೆ. ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಮನೇಕಾ ಗಾಂಧಿ ಸೋಮವಾರ ತಮ್ಮ ಕಚೇರಿಯಲ್ಲಿ ಈ ಆನ್ಲೈನ್ ಪೋರ್ಟಲ್ಗೆ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಅವರು, ‘ಮಹಿಳೆಯರು ತಮ್ಮ ಕಚೇರಿಗಳಲ್ಲಿ ಎದುರಿಸುವ ದೈಹಿಕ ದೌರ್ಜನ್ಯಗಳನ್ನು ತಡೆಯುವ ನಿಟ್ಟಿನಲ್ಲಿ ಈ ಹೊಸ ಯೋಜನೆ ಜಾರಿಗೆ ತರಲಾಗಿದೆ. ಅಲ್ಲದೇ, ಮಹಿಳೆಯರು ಎದುರಿಸುವ ದೌರ್ಜನ್ಯದ ರೀತಿ ಮತ್ತು ಪ್ರಮಾಣದ ಬಗ್ಗೆ ತಿಳಿಯಲು ದೇಶದಾದ್ಯಂತ ಶೀಘ್ರದಲ್ಲೇ ಅಧ್ಯಯನ ಕೈಗೊಳ್ಳಲಾಗುವುದು’ ಎಂದರು. ಸದ್ಯಕ್ಕೆ ಕೇಂದ್ರ ಸರಕಾರದ ಮಹಿಳಾ ನೌಕರರಿಗೆ ಮಾತ್ರ ದೂರು ನೋಂದಾಯಿಸಲು ಅವಕಾಶ ಮಾಡಿಕೊಡಲಾಗಿದೆ. ಶೀಘ್ರವೇ ಎಲ್ಲಾ ಸರಕಾರಿ ಮತ್ತು ಖಾಸಗಿ ಕ್ಷೇತ್ರಗಳ ಉದ್ಯೋಗಿಗಳಿಗೂ ಶಿ-ಬಾಕ್ಸ್ ಅನುಕೂಲ ವಿಸ್ತರಿಸಲಾಗುವುದು ಎಂದೂ ಅವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Coconut Oil Controversy: 20 ವರ್ಷಗಳ ಕೊಬ್ಬರಿ ಎಣ್ಣೆ ವಿವಾದಕ್ಕೆ ಸುಪ್ರೀಂ ಬ್ರೇಕ್
Tragedy: ಬೆಳ್ಳಂಬೆಳಗ್ಗೆ ಭೀಕರ ಅಪಘಾತ… ಗ್ಯಾಸ್ ಟ್ಯಾಂಕರ್ ಸೇರಿ ಹಲವು ವಾಹನ ಬೆಂಕಿಗಾಹುತಿ
Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.