ಡಿಗ್ರಿ ಪ್ರವೇಶಕ್ಕೆ ಒಂದೇ ಪರೀಕ್ಷೆ : ಕೇಂದ್ರ ಸಚಿವ ರಮೇಶ್ ಪೊಖ್ರಿಯಾಲ್ ಘೋಷಣೆ
Team Udayavani, Oct 23, 2019, 6:40 AM IST
ಹೊಸದಿಲ್ಲಿ: ಕಾಲೇಜು ಮತ್ತು ವಿಶ್ವವಿದ್ಯಾಲಯ ಮಟ್ಟದ ಶಿಕ್ಷಣಕ್ಕಾಗಿ ರಾಷ್ಟ್ರವ್ಯಾಪಿ ಒಂದೇ ಪ್ರವೇಶ ಪರೀಕ್ಷೆ ನಡೆಸಲು ಕೇಂದ್ರ ಸರಕಾರ ತೀರ್ಮಾನಿಸಿದೆ ಎಂದು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಮೇಶ್ ಪೊಖ್ರಿಯಾಲ್ ತಿಳಿಸಿದ್ದಾರೆ.
ರಾಷ್ಟ್ರೀಯ ಶಿಕ್ಷಣ ನೀತಿಯಡಿ, “ಎನ್ಇಪಿ’ ಎಂಬ ಹೆಸರಿನ ಈ ಪರೀಕ್ಷೆ ಮುಂದಿನ ವರ್ಷದಿಂದ ಜಾರಿಗೆ ಬರಲಿದ್ದು, ಅದಕ್ಕಾಗಿ ಸಿದ್ಧತೆ ನಡೆಸಲಾಗಿದೆ. ಅದೊಂದು ಸಾಮಾನ್ಯ ಜ್ಞಾನ ಮತ್ತು ವಿಷಯಾಧಾರಿತ ಜ್ಞಾನವನ್ನು ಅಳೆಯುವ ಪರೀಕ್ಷೆಯಾಗಿರಲಿದ್ದು, ವರ್ಷದಲ್ಲಿ ಹಲವಾರು ಬಾರಿ ಬರೆಯಬಹುದು. ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ (ಎನ್ಇಟಿ) ಈ ಪರೀಕ್ಷೆ ನಡೆಸುತ್ತದೆ.
ಬೆಂಗಳೂರಿನಲ್ಲಿ ಕಚೇರಿ: ಪದವಿ ಮತ್ತು ಉನ್ನತ ವ್ಯಾಸಂಗಕ್ಕಾಗಿ ಎರಡು “ಇನ್ಇಪಿ’ ಪರೀಕ್ಷೆ ನಡೆಸಲಾಗುತ್ತದೆ. ಉನ್ನತ ವ್ಯಾಸಂಗ ಪ್ರವೇಶ ಪರೀಕ್ಷೆಗೆ ಸಂಬಂಧಿಸಿದಂತೆ ಬರುವ ಸಲಹೆಗಳನ್ನು ಪರಿಶೀಲಿಸಲು ಬೆಂಗಳೂರಿನಲ್ಲಿ ಕಚೇರಿಯನ್ನು ತೆರೆಯಲಾಗುತ್ತದೆ. ಇನ್ನು, ಪದವಿ ಮಟ್ಟದ ಪ್ರವೇಶ ಪರೀಕ್ಷೆಯ ಸಲಹೆಗಳನ್ನು ಪರಿಶೀಲಿಸಲು ಸಿಬಿಎಸ್ಇ ಅಡಿಯಲ್ಲಿ ಒಂದು ಸಮಿತಿ ನೇಮಕ ಮಾಡಲಾಗುತ್ತದೆ. ಆ ಸಮಿತಿಗೆ ಸಿಬಿಎಸ್ಇ ಮುಖ್ಯಸ್ಥರೇ ಅಧ್ಯಕ್ಷರಾಗಿರಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?
Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.