ಬೇಳೆಕಾಳು ರಫ್ತು ಮೇಲಿನ ನಿರ್ಬಂಧ ತೆರವು
Team Udayavani, Nov 17, 2017, 6:00 AM IST
ನವದೆಹಲಿ: ಅತಿವೃಷ್ಟಿ, ಅನಾವೃಷ್ಟಿಯಿಂದ ಕಂಗಾಲಾಗಿದ್ದ ದೇಶದ ರೈತರಿಗೆ ಕೇಂದ್ರ ಸರ್ಕಾರದಿಂದ ಸಿಹಿಸುದ್ದಿಯೊಂದು ಬಂದಿದೆ. ಎಲ್ಲ ರೀತಿಯ ಬೇಳೆಕಾಳುಗಳ (ದ್ವಿದಳ ಧಾನ್ಯ) ರಫ್ತು ಮೇಲೆ ಹೇರಲಾಗಿದ್ದ ನಿರ್ಬಂಧವನ್ನು ವಾಪಸ್ ಪಡೆದು ಕೇಂದ್ರ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ. ರೈತರು ತಮ್ಮ ಬೆಳೆಗಳಿಗೆ ಉತ್ತಮ ಬೆಲೆ ಪಡೆಯಲಿ ಎಂಬ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಂಪುಟ ಈ ನಿರ್ಧಾರಕ್ಕೆ ಬಂದಿದೆ.
ಈ ಕುರಿತು ಮಾಹಿತಿ ನೀಡಿದ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್, “ಬೇಳೆ ಕಾಳುಗಳ ರಫ್ತಿನ ಮೇಲೆ ಇದ್ದ ನಿರ್ಬಂಧವನ್ನು ತೆರವು ಮಾಡಿದ್ದೇವೆ. ಪರಿಣಾಮ ರಫ್ತಿಗೆ ಮುಕ್ತ ಅವಕಾಶ ಇರುವ ಕಾರಣ ರೈತರು ತಮ್ಮ ಬೆಳೆಗಳಿಗೆ ಉತ್ತಮ ಆದಾಯ ಪಡೆಯಬಹುದು ಮತ್ತು ಬಿತ್ತನೆ ಪ್ರದೇಶವನ್ನೂ ವಿಸ್ತರಿಸಿಕೊಳ್ಳಬಹುದಾಗಿದೆ,’ ಎಂದಿದ್ದಾರೆ.
ಜತೆಗೆ, ಬೇಳೆಕಾಳುಗಳ ರಫ್ತಿಗೆ ಅನುಮತಿ ನೀಡುವುದರಿಂದ ಹೆಚ್ಚುವರಿ ಉತ್ಪನ್ನಗಳಿಗೆ ಪರ್ಯಾಯ ಮಾರುಕಟ್ಟೆ ಸೃಷ್ಟಿಯಾಗುತ್ತದೆ. ಅಲ್ಲದೆ, ದೇಶದ ರಫ್ತುದಾರರು ಮತ್ತೆ ಮಾರುಕಟ್ಟೆಯ ಮೇಲೆ ನಿಯಂತ್ರಣ ಸಾಧಿಸಲೂ ನೆರವಾಗುತ್ತದೆ ಎಂದಿದ್ದಾರೆ ಸಚಿವ ಪ್ರಸಾದ್. ಇದೇ ವೇಳೆ, ಬೇಳುಕಾಳುಗಳ ಮೇಲಿನ ರಫ್ತು ಮತ್ತು ಆಮದು ನೀತಿಯನ್ನು ಮರುಪರಿಶೀಲಿಸಲು ಆಹಾರ ಮತ್ತು ನಾಗರಿಕ ಸರಬರಾಜು ಕಾರ್ಯದರ್ಶಿ ನೇತೃತ್ವದ ಸಮಿತಿಗೆ ಆರ್ಥಿಕ ವ್ಯವಹಾರಗಳಿಗೆ ಸಂಬಂಧಿಸಿದ ಸಂಸದೀಯ ಸಮಿತಿ(ಸಿಸಿಇಎ) ಅಧಿಕಾರ ಕಲ್ಪಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.