ಜೂನ್ನೊಳಗೆ 60 ಲಕ್ಷ ಉದ್ಯೋಗ ಸೃಷ್ಟಿ
ಆತ್ಮನಿರ್ಭರ ಭಾರತ್ ರೋಜ್ಗಾರ್ ಯೋಜನೆಯನ್ವಯ ಕ್ರಮ
Team Udayavani, Nov 18, 2020, 1:07 AM IST
ಹೊಸದಿಲ್ಲಿ: ಮುಂದಿನ ವರ್ಷದ ಜೂನ್ ಒಳಗಾಗಿ “ಆತ್ಮನಿರ್ಭರ ಭಾರತ್ ರೋಜ್ಗಾರ್ ಯೋಜನೆ’ (ಎಬಿಆರ್ವೈ) ಅನ್ವಯ 50-60 ಲಕ್ಷ ಉದ್ಯೋಗ ಸೃಷ್ಟಿಸುವ ಗುರಿಯನ್ನು ಕೇಂದ್ರ ಸರ್ಕಾರ ಹೊಂದಿದೆ. ಇದು ಕಳೆದ ವಾರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಪ್ರಕಟಿಸಿದ ಹೊಸ ಯೋಜನೆಯಾಗಿದೆ. ಮತ್ತೂಂದು ಮಹತ್ವದ ಮಾಹಿತಿಯಂತೆ ಉದ್ಯೋಗಿಗಳ ಭವಿಷ್ಯ ನಿಧಿ ಮಂಡಳಿ (ಇಪಿಎಫ್ಒ)ಯ ದತ್ತಾಂಶ ಪ್ರಕಾರ ಕೊರೊನಾ ವೈರಸ್ ದೇಶದಲ್ಲಿ ಧಾಂಗುಡಿ ಇಡಲು ಶುರು ಮಾಡಿದ ಸಂದರ್ಭದಲ್ಲಿ 20 ಲಕ್ಷ ಉದ್ಯೋಗಗಳು ನಷ್ಟವಾಗಿವೆ ಎಂದು ಗೊತ್ತಾಗಿದೆ.
“ಕೇಂದ್ರ ಸರ್ಕಾರ 2021ರ ಜೂನ್ ಒಳಗಾಗಿ 50-60 ಲಕ್ಷ ಉದ್ಯೋಗವನ್ನು ಎಬಿಆರ್ವೈ ಮೂಲಕ ಸೃಷ್ಟಿಸಲು ಉದ್ದೇಶಿಸಲಾಗಿದೆ. ಇಪಿಎಫ್ಒ ಪ್ರಕಾರ ಸೋಂಕು ವ್ಯಾಪಕವಾಗಿ ಹಬ್ಬಲು ಆರಂಭವಾದ ದಿನಗಳಲ್ಲಿ 20 ಲಕ್ಷ ಉದ್ಯೋಗ ನಷ್ಟವಾಗಿದೆ’ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಹೊಸ ಯೋಜನೆ ಬಗ್ಗೆ ಮಾತನಾಡಿದ ಆ ಅಧಿಕಾರಿ, 2020ರ ಅಕ್ಟೋಬರ್ನಿಂದ 2021 ಜೂನ್ವರೆಗೆ ಖಾಸಗಿ ಕಂಪನಿಗಳು ಕನಿಷ್ಠ ಉದ್ಯೋಗಿಗಳನ್ನು ಇರಿಸಿಕೊಳ್ಳಬೇಕಾಗಿದೆ. ಈ ಮೂಲಕ ಇಪಿಎಫ್ನ ಸಬ್ಸಿಡಿ ಪಡೆಯಲು ಅರ್ಹತೆ ಪಡೆಯುತ್ತವೆ ಎಂದಿದ್ದಾರೆ.
ಮೋದಿ ಕರೆಗೆ ಆಧ್ಯಾತ್ಮಿಕ ಗುರುಗಳ ಸ್ಪಂದನೆ
ಆತ್ಮನಿರ್ಭರ ಭಾರತ ನಿರ್ಮಾಣಕ್ಕಾಗಿ “ಸ್ಥಳೀಯ ಉತ್ಪನ್ನಗಳ ಖರೀದಿ’ಗೆ ಆದ್ಯತೆ ನೀಡುವಂಥ ಅಭಿಯಾನಕ್ಕೆ ಬೆಂಬಲ ನೀಡುವಂತೆ ಪ್ರಧಾನಿ ಮೋದಿ ನೀಡಿದ್ದ ಕರೆಗೆ ಹಲವು ಆಧ್ಯಾತ್ಮಿಕ ಗುರುಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಶ್ರೀ ರವಿಶಂಕರ್ ಗುರೂಜಿ, ಸದ್ಗುರು ಜಗ್ಗಿ ವಾಸುದೇವ್, ಸ್ವಾಮಿ ಅವಧೇಶಾನಂದ, ದೇವಕಿ ನಂದನ್ ಠಾಕೂರ್ ಹಾಗೂ ಯೋಗಗುರು ಬಾಬಾ ರಾಮ್ದೇವ್ ಅವರು ಪ್ರಧಾನಿ ಮೋದಿಯವರ ಕರೆಗೆ ಬೆಂಬಲ ನೀಡುವುದಾಗಿ ಘೋಷಿಸಿದ್ದಾರೆ. ಸ್ವಾವಲಂಬನೆ ಎನ್ನುವುದು ಒಂದು ಬಲಿಷ್ಠ ರಾಷ್ಟ್ರ ನಿರ್ಮಾಣಕ್ಕೆ ಅಗತ್ಯವಾದ ಮೂಲ ಶಕ್ತಿಯಾಗಿದೆ ಎಂದು ಆಧ್ಯಾತ್ಮಿಕ ಗುರುಗಳು ಅಭಿಪ್ರಾಯಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sambhal Mosque Survey: ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್
Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ
ED Raids: ಬೆಳ್ಳಂಬೆಳಗ್ಗೆ ಉದ್ಯಮಿ ರಾಜ್ ಕುಂದ್ರಾ ಮನೆ, ಕಚೇರಿ ಮೇಲೆ ಇಡಿ ದಾಳಿ…
Commando: ಮೋದಿ ರಕ್ಷಣೆಯ ಮಹಿಳಾ ಕಮಾಂಡೋ ಫೋಟೊ ವೈರಲ್: ಏನಿದರ ಅಸಲೀಯತ್ತು?
Sabarimala: ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Sambhal Mosque Survey: ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್
Gadget Review: iPhone 16: ಆಕರ್ಷಕ ವಿನ್ಯಾಸ, ಉತ್ತಮ ಕ್ಯಾಮರಾ, ವೇಗದ ಕಾರ್ಯಾಚರಣೆ
Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್ ಭರಾಟೆ ಬಲು ಜೋರು
Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ
Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.