ಮಾನವಸಹಿತ ಬಾಹ್ಯಾಕಾಶ ಯಾನ, ಹೆಲ್ತ್ ಕೇರ್ ಸ್ಕೀಮ್ ಘೋಷಿಸಿದ PM ಮೋದಿ
Team Udayavani, Aug 15, 2018, 3:09 PM IST
ನವದೆಹಲಿ:ದೇಶ ಹೊಸ ಕನಸು ಹಾಗೂ ಆತ್ಮವಿಶ್ವಾಸದ ಸಂಕಲ್ಪದೊಂದಿಗೆ ಮುನ್ನಡೆಯುತ್ತಿದೆ. ಅಲ್ಲದೇ ದೇಶದ 50 ಕೋಟಿ ಜನರಿಗೆ ಉಪಯೋಗವಾಗಲಿರುವ ವಿಮಾ ಯೋಜನೆ ಕಲ್ಪಿಸುವ ಆಯುಷ್ಮಾನ್ ಭಾರತ್ ಸ್ಕೀಮ್ ಅನ್ನು ಸೆಪ್ಟೆಂಬರ್ 25ರಂದು ಜಾರಿಗೆ ತರಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.
72ನೇ ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಬುಧವಾರ ನವದೆಹಲಿಯ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಹುಟ್ಟು ಹಬ್ಬದ ದಿನವಾದ ಸೆಪ್ಟೆಂಬರ್ 25ರಂದು ಪ್ರಧಾನ ಮಂತ್ರಿ ಜನ್ ಆರೋಗ್ಯ ಅಭಿಯಾನ್ (ಆಯುಷ್ಮಾನ್ ಭಾರತ್) ಸ್ಕೀಮ್ ಅನ್ನು ಜಾರಿಗೊಳಿಸುವುದಾಗಿ ಹೇಳಿದರು.
ಬಡವರ ಆರೋಗ್ಯ ಸುಧಾರಣೆಯ ದೃಷ್ಟಿಯಿಂದ ಹೆಲ್ತ್ ಕೇರ್ ಯೋಜನೆ ಜಾರಿಗೊಳಿಸುತ್ತಿದ್ದೇವೆ. ಆಯುಷ್ಮಾನ್ ಭಾರತ್ ನ್ಯಾಶನಲ್ ಹೆಲ್ತ್ ಪ್ರೊಟೆಕ್ಷನ್ ಯೋಜನೆಯು ಪ್ರತಿ ಕುಟುಂಬಕ್ಕೆ ವರ್ಷಕ್ಕೆ 5 ಲಕ್ಷ ರೂಪಾಯಿಯ ವಿಮಾ ಯೋಜನೆಯಾಗಿದೆ. ಇದು ದೇಶದ 10 ಕೋಟಿಗೂ ಅಧಿಕ ಬಡ ಕುಟುಂಬಗಳಿಗೆ ಅನುಕೂಲವಾಗಲಿದೆ ಎಂದು ವಿವರಿಸಿದರು.
ನಮ್ಮ ದೇಶ ಬಾಹ್ಯಾಕಾಶ ವಿಜ್ಞಾನ ವಿಷಯದಲ್ಲಿ ತುಂಬಾ ಮುಂದುವರಿದಿದೆ. ಆ ನಿಟ್ಟಿನಲ್ಲಿ ಬಹುಕಾಲದ ನಿರೀಕ್ಷೆಯ ಮಾನವ ಸಹಿತ ಅಂತರಿಕ್ಷ ಯಾನಕ್ಕಾಗಿ ಇಸ್ರೋ ಸಿದ್ಧತೆ ನಡೆಸುತ್ತಿದ್ದು, 2022ಕ್ಕೆ ಈ ಕನಸು ನನಸಾಗಲಿದೆ ಎಂದು ಮೋದಿ ಘೋಷಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ಮದುವೆ ಸಂಭ್ರಮದಲ್ಲಿದ್ದ ವರನಿಗೆ ಹೃದಯಾಘಾತ… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು
Maharastra: ಕಾರಿನ ಮೇಲೆ ಕಲ್ಲು ತೂರಾಟ… ಮಾಜಿ ಸಚಿವ ಅನಿಲ್ ದೇಶಮುಖ್ ಹಣೆಗೆ ಗಾಯ
Assembly Election: ಮಹಾರಾಷ್ಟ್ರ ಕದನದಲ್ಲಿ ಘಟಾನುಘಟಿಗಳ ಭವಿಷ್ಯ ಪಣಕ್ಕೆ
Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್ ಭೀತಿ!
Election: ಮಹಾರಾಷ್ಟ್ರ, ಜಾರ್ಖಂಡ್ ಚುನಾವಣೆ ಪ್ರಚಾರಕ್ಕೆ ತೆರೆ: ನಾಳೆ ಮತದಾನ
MUST WATCH
ಹೊಸ ಸೇರ್ಪಡೆ
Air Pollutionಗೆ ಪಾಕಿಸ್ತಾನ ಕಂಗಾಲು- 3 ದಿನ ಸಂಪೂರ್ಣ ಲಾಕ್ ಡೌನ್…AQI ಮಟ್ಟ 2000!
Keerthy Suresh: ಬಾಲ್ಯದ ಗೆಳೆಯನೊಂದಿಗೆ ಈ ದಿನ ನೆರವೇರಲಿದೆ ಕೀರ್ತಿ ಸುರೇಶ್ ವಿವಾಹ?
Belthangady: ಪತ್ರಕರ್ತ ಭುವನೇಂದ್ರ ಪುದುವೆಟ್ಟು ನಿಧನ
Max Movie: ಬಿಗ್ ಬಾಸ್ ವೇದಿಕೆಯಲ್ಲಿ ʼಮ್ಯಾಕ್ಸ್ʼ ಬಗ್ಗೆ ಮಾತನಾಡಿದ ಕಿಚ್ಚ ಸುದೀಪ್
Fraud: “ವಿಡಿಯೋಗೆ ಲೈಕ್ ನೀಡಿ’ 13.97 ಲಕ್ಷ ಕಳೆದುಕೊಂಡರು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.