ಇನ್ನು ನಾಲ್ಕೈದು ದಿನಗಳಲ್ಲಿ ಮಹಾರಾಷ್ಟ್ರದಲ್ಲಿ ನೂತನ ಸರಕಾರ: ರಾವತ್
Team Udayavani, Nov 20, 2019, 10:03 PM IST
ಮುಂಬೈ: ಮಹಾರಾಷ್ಟ್ರ ಸರಕಾರ ರಚನೆಯ ಸರ್ಕಸ್ ಕೊನೆಗೂ ಒಂದು ಹಂತಕ್ಕೆ ಬಂದು ನಿಲ್ಲುವ ಲಕ್ಷಣಗಳು ಗೋಚರಿಸಿವೆ. ರಾಷ್ಟ್ರಪತಿ ಆಡಳಿತ ಜಾರಿಗೊಂಡಿರುವ ಮಹಾರಾಷ್ಟ್ರದಲ್ಲಿ ಇನ್ನು ನಾಲ್ಕೈದು ದಿನಗಳಲ್ಲಿ ಶಿವಸೇನೆ-ಎನ್.ಸಿ.ಪಿ.-ಕಾಂಗ್ರೆಸ್ ನೇತೃತ್ವದ ನೂತನ ಸರಕಾರ ಅಸ್ತಿತ್ವಕ್ಕೆ ಬರಲಿದೆ ಎಂದು ಶಿವಸೇನಾ ನಾಯಕ ಸಂಜಯ್ ರಾವತ್ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಬುಧವಾರ ಮಹಾರಾಷ್ಟ್ರದಲ್ಲಿ ಶಿವಸೇನೆಗೆ ಬೆಂಬಲ ನೀಡಲು ತಮ್ಮ ಒಪ್ಪಿಗೆಯನ್ನು ನೀಡಿದ್ದರು. ಸೋಮವಾರವಷ್ಟೇ ಎನ್.ಸಿ.ಪಿ. ಮುಖ್ಯಸ್ಥ ಶರದ್ ಪವಾರ್ ಅವರು ಸೋನಿಯಾ ಗಾಂಧಿ ಅವರೊಂದಿಗೆ ಮಾತುಕತೆ ನಡೆಸಿದ್ದರು. ಈ ಸಂದರ್ಭದಲ್ಲೇ ಶಿವಸೇನೆಗೆ ಬೆಂಬಲ ನೀಡುವ ಕುರಿತಾಗಿ ಚರ್ಚೆ ನಡೆದಿತ್ತು ಎಂಬ ಮಾಹಿತಿ ಇದೀಗ ಲಭ್ಯವಾಗಿದೆ.
ಮಹಾರಾಷ್ಟ್ರದಲ್ಲಿ ಸರಕಾರ ರಚನೆಗೆ ಸಾಮಾನ್ಯ ಕಾರ್ಯಸೂಚಿಗೆ ಒಪ್ಪಿಕೊಂಡಿದ್ದಾರೆ ಎಂದು ಉಭಯ ಪಕ್ಷಗಳ ನಾಯಕರು ಶಿವಸೇನೆಗೆ ಮನವರಿಕೆ ಮಾಡಿದ್ದಾರೆ ಎಂದು ಸಂಜಯ್ ರಾವತ್ ಅವರು ತಿಳಿಸಿದರು.
ಮಹಾರಾಷ್ಟ್ರದ ಜನತೆ ಶಿವಸೇನೆಯ ವ್ಯಕ್ತಿ ಮುಖ್ಯಮಂತ್ರಿಯಾಗುವುದನ್ನು ಎದುರು ನೋಡುತ್ತಿದ್ದಾರೆ. ರಾಜ್ಯದಲ್ಲಿ ಸ್ಥಿರ ಸರಕಾವನ್ನು ನೀಡುವ ನಿಟ್ಟಿನಲ್ಲಿ ಪ್ರಯತ್ನಗಳು ಇಂದಿನಿಂದ ಪ್ರಾರಂಭಗೊಂಡಿದೆ ಮತ್ತಿದು ನಾಲ್ಕೈದು ದಿನಗಳಲ್ಲಿ ಇದು ಪೂರ್ಣಗೊಳ್ಳಲಿದೆ ಎಂದು ರಾವತ್ ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.