ಜಮ್ಮು ಕಾಶ್ಮೀರ ಮೇಘ ಸ್ಪೋಟ : ಸರ್ಕಾರ ಪರಿಸ್ಥಿತಿಯನ್ನು ಗಮನಿಸುತ್ತಿದೆ : ಪ್ರಧಾನಿ
Team Udayavani, Jul 28, 2021, 1:13 PM IST
ನವ ದೆಹಲಿ : ಭಾರಿ ಮೇಘಸ್ಫೋಟ ಸಂಭವಿಸಿದ ನಂತರ ಕಾರ್ಗಿಲ್ ನ ಕಿಶ್ಟ್ ವಾರ್ ನಲ್ಲಿನ ಪರಿಸ್ಥಿತಿಯನ್ನು ಸರ್ಕಾರ ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಸಾಧ್ಯತೆಗಳುಳ್ಳ ಎಲ್ಲಾ ನೆರವುಗಳನ್ನು ಪೀಡಿತ ಪ್ರದೇಶಗಳಿಗೆ ನೀಡಲಾಗುತ್ತಿದೆ. ಎಲ್ಲರ ಹಿತ ಕಾಯುವುದಕ್ಕೆ ಸರ್ಕಾರ ಸಂಪೂರ್ಣ ಪ್ರಯತ್ನ ಮಾಡುತ್ತದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ : ಜಮೀನಿನ ಮ್ಯುಟೇಶನ್ ಮಾಡಲು 15 ಲಕ್ಷ ರೂ. ಲಂಚ : ಎಸಿಬಿ ಬಲೆಗೆ ಬಿದ್ದ ತಹಸೀಲ್ದಾರ್
ಇನ್ನು, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಕೂಡ ಮೇಘ ಸ್ಪೋಟದಿಂದ ಮೃತಪಟ್ಟವರಿಗೆ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಕ್ಕೆ ಸಾಂತ್ವಾನ ಹೇಳಿದ್ದಾರೆ.
ಜಮ್ಮು ಕಾಶ್ಮೀರದ ಕಿಶ್ಟ್ ವಾರ್ ಪ್ರದೇಶಗಳಲ್ಲಿ ನಡೆದ ಮೇಘ ಸ್ಫೋಟದ ಕಾರಣದಿಂದಾಗಿ ಹಲವಾರು ಮನೆಗಳು ಧರಾಶಾಯಿಯಾಗಿದ್ದು, ಆ ಪರಿಣಾಮವಾಗಿ ಕೆಲವರು ಮೃತಪಟ್ಟಿರುವುದಾಗಿ ವರದಿಯಾಗಿವೆ. ಈಗಾಗಲೇ ಐವರ ಮೃತದೇಹಗಳನ್ನು ಪತ್ತೆ ಮಾಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಸುಮಾರು 25 ಮಂದಿ ನಾಪತ್ತೆಯಾಗಿದ್ದು, ಪತ್ತೆ ಕಾರ್ಯಾಚರಣೆ ಮುಂದುವರಿದಿದೆ. ಇಂದು(ಬುಧವಾರ, ಜುಲೈ 28) ಮುಂಜಾನೆ 4.30 ರ ಸುಮಾರಿಗೆ ಡಚ್ಚನ್ ತಹಸಿಲ್ ನ ಹೊಂಜಾರ್ ಗ್ರಾಮದಲ್ಲಿ ಮೇಘ ಸ್ಪೋಟ ಸಂಭವಿಸಿದ್ದು, ಪೊಲೀಸರು, ಸೇನೆ ಮತ್ತು ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆ (ಎಸ್ ಡಿ ಆರ್ ಎಫ್) ಜಂಟಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ : ಗುಡ್ ಲಕ್: ಟೋಕಿಯೋದಲ್ಲಿ ಇತಿಹಾಸ ಸೃಷ್ಟಿಸಲು ಪಣ ತೊಟ್ಟ ಬಸ್ ಚಾಲಕನ ಮಗಳು ಪ್ರಣತಿ ನಾಯಕ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.