ರಾಜಪಥವಲ್ಲ “ಕರ್ತವ್ಯಪಥ’ ಮರು ನಾಮಕರಣಕ್ಕೆ ಕೇಂದ್ರದ ನಿರ್ಧಾರ
Team Udayavani, Sep 6, 2022, 6:30 AM IST
ನವದೆಹಲಿ: ದೆಹಲಿಯ ಸುಪ್ರಸಿದ್ಧ ರಾಜಪಥ ಹಾಗೂ ಸೆಂಟ್ರಲ್ ವಿಸ್ತಾದ ಹುಲ್ಲುಹಾಸನ್ನು “ಕರ್ತವ್ಯ ಪಥ’ ಎಂದು ಮರು ನಾಮಕರಣ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಇನ್ನು ಮುಂದೆ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಪ್ರತಿಮೆ ಇರುವ ಸ್ಥಳದಿಂದ ರಾಷ್ಟ್ರಪತಿ ಭವನದವರೆಗೂ “ಕರ್ತವ್ಯ ಪಥ’ ಎಂದು ಹೆಸರಿಸಲಾಗುವುದು.
ಅದಷ್ಟೇ ಅಲ್ಲದೆ “ರಾಜ’ ಎಂದಿರುವುದನ್ನು “ಕರ್ತವ್ಯ’ ಎಂದು ಬದಲಿಸುವ ಮೂಲಕ ಕೇಂದ್ರವು ಇದು ಆಳ್ವಿಕೆ ಮಾಡುವವರ ಕಾಲವಲ್ಲ ಬದಲಾಗಿ ನಿಷ್ಠೆಯಿಂದ ದುಡಿಯುವವರ ಕಾಲ ಎಂದು ಹೇಳಲು ಬಯಸುತ್ತಿದೆ ಎಂದೂ ವಿಶ್ಲೇಷಿಸಲಾಗುತ್ತಿದೆ. ನವೀಕರಣಗೊಂಡಿರುವ ಸೆಂಟ್ರಲ್ ವಿಸ್ತಾ ಅವೆನ್ಯೂ ಅನ್ನು ಪ್ರಧಾನಿ ಮೋದಿ ಅವರು ಸೆ.8ರಂದು ಉದ್ಘಾಟಿಸಲಿದ್ದಾರೆ.
ಆ.15ರ ಸ್ವಾತಂತ್ರ್ಯ ದಿನೋತ್ಸವದಂದು ಮಾತನಾಡಿದ್ದ ಪ್ರಧಾನಿ ಅವರು, ದೇಶದಲ್ಲಿ ಬ್ರಿಟಿಷರ ಆಳ್ವಿಕೆಯ ಕುರುಹನ್ನು ತೆಗೆದುಹಾಕುವುದಾಗಿ ಹೇಳಿದ್ದರು. ಅದೇ ಹಿನ್ನೆಲೆ ಇದೀಗ ರಾಜಪಥ ಹೆಸರು ಬದಲಾವಣೆಗೆ ನಿರ್ಧರಿಸಲಾಗಿದೆ. ವಸಾಹತು ಶಾಹಿ ಆಳ್ವಿಕೆಯ ಕುರುಹಿದ್ದ ಭಾರತೀಯ ನೌಕಾಪಡೆಯ ಧ್ವಜವನ್ನೂ ಇತ್ತೀಚೆಗೆ ಬದಲಾವಣೆ ಮಾಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್ 2.0? ಇದರ ವೈಶಿಷ್ಟ್ಯವೇನು?
Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ
RBI ಗವರ್ನರ್ ಶಕ್ತಿಕಾಂತ್ ದಾಸ್ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್ ಚಾರ್ಜ್
26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ
Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್ ಯಡಿಯೂರಪ್ಪ
Kannada: ಕನ್ನಡ ನಾಡಲ್ಲಿ ಪ್ರತಿದಿನವೂ ನಿತ್ಯೋತ್ಸವವಿರಲಿ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್
ಹೊಸಪೇಟೆ: ಸ್ಕ್ಯಾನ್ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.