ಮೇ 12ರ ವರೆಗೆ ಇದೆ ಎಲ್‌ಐಸಿ ಐಪಿಒ ಬಿಡುಗಡೆಗೆ ಅವಕಾಶ
ಷೇರು ಮಾರಾಟ ಅನುಮಾನ ಎಂಬ ವದಂತಿಗಳಿಗೆ ಕೇಂದ್ರದ ಸ್ಪಷ್ಟನೆ
Team Udayavani, Mar 14, 2022, 7:35 AM IST
ನವದೆಹಲಿ: ಬಹುನಿರೀಕ್ಷಿತ ಭಾರತೀಯ ಜೀವ ವಿಮಾನಿಗಮ (ಎಲ್‌ಐಸಿ)ದ ಐಪಿಒ ಅನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲು ಮೇ 12ರ ವರೆಗೆ ಸಮಯಾವಕಾಶ ಇದೆ. ಹೀಗೆಂದು ಕೇಂದ್ರ ಸರ್ಕಾರ ಭಾನುವಾರ ತಿಳಿಸಿದೆ. ಅದಕ್ಕಾಗಿ ಮತ್ತೂಮ್ಮೆ ಮಾರುಕಟ್ಟೆ ನಿಯಂತ್ರಣ ಸಂಸ್ಥೆ, ಸೆಬಿಗೆ ಮತ್ತೂಮ್ಮೆ ದಾಖಲೆಗಳನ್ನು ಸಲ್ಲಿಸಬೇಕಾಗಿಲ್ಲ ಎಂದು ಸ್ಪಷ್ಟಪಡಿಸಿದೆ.
ಉಕ್ರೇನ್ ಮತ್ತು ರಷ್ಯಾ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಐಪಿಒ ಪ್ರಕ್ರಿಯೆ ಮಾಸಾಂತ್ಯದ ಒಳಗಾಗಿ ಮಾರುಕಟ್ಟೆ ಪ್ರವೇಶಿಸುವ ಸಾಧ್ಯತೆ ಇಲ್ಲ ಎಂಬ ವದಂತಿಗಳ ಹಿನ್ನೆಲೆಯಲ್ಲಿ ಕೇಂದ್ರದಿಂದ ಈ ಸ್ಪಷ್ಟನೆ ಹೊರಬಿದ್ದಿದೆ. ಸದ್ಯ ಮಾರುಕಟ್ಟೆಯಲ್ಲಿ ಉಂಟಾಗುವ ಏರಿಳಿತಗಳ ಅಂಶಗಳನ್ನು ಪರೀಕ್ಷಿಸುತ್ತಿದ್ದೇವೆ. ಈಗ ಸೆಬಿಗೆ ಸಲ್ಲಿಸಿರುವ ದಾಖಲೆಗಳ ಪ್ರಕಾರವೇ ಮೇ 12ರ ವರೆಗೆ ಐಪಿಒ ಮಾರುಕಟ್ಟೆಗೆ ಬಿಡುಗಡೆ ಮಾಡಲು ಸರ್ಕಾರಕ್ಕೆ ಸಮಯದ ಅವಕಾಶ ಇದೆ ಎಂದು ಕೇಂದ್ರ ಸರ್ಕಾರದ ಹಿರಿಯ ಅಧಿಕಾರಿ ಭಾನುವಾರ ತಿಳಿಸಿದ್ದಾರೆ.
ಕೇಂದ್ರ ಸರ್ಕಾರ ಎಲ್‌ಐಸಿಯ 31.6 ಕೋಟಿ ಷೇರುಗಳನ್ನು ಮಾರಾಟ ಮಾಡಿ 60 ಸಾವಿರ ಕೋಟಿ ರೂ.ಗಳನ್ನು ಸಂಗ್ರಹಿಸುವ ಗುರಿ ಹಾಕಿಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.