Winter Session: ಸಂಸತ್ ಅಧಿವೇಶನ ನಾಡಿದ್ದಿಂದ:”ವಕ್ಫ್’ ವಿಧೇಯಕ ಮಂಡನೆ?
ವಕ್ಫ್ ಸೇರಿದಂತೆ ಒಟ್ಟು 16 ವಿಧೇಯಕ ಮಂಡನೆ ಸಾಧ್ಯತೆ; ನಾಳೆ ದಿಲ್ಲಿಯಲ್ಲಿ ಸರ್ವ ಪಕ್ಷ ಸಭೆ
Team Udayavani, Nov 23, 2024, 7:25 AM IST
ನವದೆಹಲಿ: ಮಹಾರಾಷ್ಟ್ರ ಮತ್ತು ಜಾರ್ಖಂಡ್ ಫಲಿತಾಂಶ, ಅದಾನಿ ಗ್ರೂಪ್ ವಿರುದ್ಧದ ಲಂಚದ ಆರೋಪ, ಮಣಿಪುರ ಹಿಂಸಾಚಾರದ ಕರಿನೆರಳಿನಲ್ಲಿಯೇ ನ.25ರಿಂದ ಡಿ.20ರವರೆಗೆ ಸಂಸತ್ನ ಚಳಿಗಾಲದ ಅಧಿವೇಶನ ನಡೆಯಲಿದೆ.
ಈ ಅವಧಿಯಲ್ಲಿ ಕೇಂದ್ರ ಸರ್ಕಾರ ವಿವಾದಾತ್ಮಕ ವಕ್ಫ್ ತಿದ್ದುಪಡಿ ವಿಧೇಯಕ, ರಾಷ್ಟ್ರೀಯ ಸಹಕಾರ ವಿವಿ ಸ್ಥಾಪನೆ ಸೇರಿ 16 ವಿಧೇಯಕಗಳನ್ನು ಮಂಡಿಸಿ ಅಂಗೀಕಾರ ಪಡೆಯಲು ಮುಂದಾಗಿದೆ. ಈ ಪೈಕಿ 5 ಹೊಸ ವಿಧೇಯಕಗಳಾಗಿವೆ. ಪ್ರಸಕ್ತ ವಿತ್ತೀಯ ವರ್ಷಕ್ಕಾಗಿನ ಮೊದಲ ಹಂತದ ಪೂರಕ ಅಂದಾಜು ಅನುದಾನ ಮಂಡನೆ ಮತ್ತು ಚರ್ಚೆ ಇದೇ ಅಧಿವೇಶನದಲ್ಲಿ ನಡೆಯುವ ಸಾಧ್ಯತೆಗಳಿವೆ.
ಇದಲ್ಲದೆ, ಬಿಜೆಪಿ ಸಂಸದ ಜಗದಂಬಿಕಾ ಪಾಲ್ ನೇತೃತ್ವದ ವಕ್ಫ್ ವಿಧೇಯಕ ತಿದ್ದುಪಡಿ ಪರಿಶೀಲನೆಗಾಗಿನ ಜೆಪಿಸಿ ನ.29ರಂದು ಸಂಸತ್ಗೆ ತನ್ನ ವರದಿ ಸಲ್ಲಿಸುವ ಸಾಧ್ಯತೆಗಳು ಇವೆ.
ನಾಳೆ ಸರ್ವ ಪಕ್ಷ ಸಭೆ:
ಅಧಿವೇಶನದ ಹಿನ್ನೆಲೆಯಲ್ಲಿ ನವದೆಹಲಿಯಲ್ಲಿ ಭಾನುವಾರ ಸರ್ವಪಕ್ಷ ಸಭೆ ನಡೆಯಲಿದೆ. ಅಲ್ಲಿ ಸುಗಮ ಕಲಾಪ ನಡೆಸುವುದು, ದೇಶಕ್ಕೆ ಸಂವಿಧಾನ ಸ್ವೀಕರಿಸಿ 75 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಆಯೋಜಿಸಬೇಕಾದ ಕಾರ್ಯಕ್ರಮ ಬಗ್ಗೆ ಪ್ರಮುಖ ಪಕ್ಷಗಳ ಜತೆಗೆ ಸರ್ಕಾರ ಸಮಾಲೋಚನೆ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Mahakumbh 2025: 45 ಕೋಟಿ ಯಾತ್ರಾರ್ಥಿಗಳ ನಿರೀಕ್ಷೆ
Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ
UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Kambli Health: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!
Unlock Raghava Movie: ರಾಘವನ ಮೇಲೆ ಕಣ್ಣಿಟ್ಟ ರಚೆಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.