ಆರ್ಬಿಐ ಕಾರ್ಯ ವಿಧಾನ ಬದಲಾವಣೆಗೆ ಸರಕಾರದ ಚಿಂತನೆ
Team Udayavani, Nov 28, 2018, 7:11 PM IST
ಹೊಸದಿಲ್ಲಿ : ಭಾರತೀಯ ರಿಸರ್ವ್ ಬ್ಯಾಂಕಿನ ಕಾರ್ಯ ವಿಧಾನವನ್ನು ಬದಲಾಯಿಸುವ ಬಗ್ಗೆ ಕೇಂದ್ರ ಸರಕಾರ ಚಿಂತನೆ ನಡೆಸುತ್ತಿದೆ ಎಂದು ವರದಿಗಳು ತಿಳಿಸಿವೆ.
ಡಿ.14ರಂದು ನಡೆಯುವ ಸರಕಾರದ ಜತೆಗಿನ ಸಭೆಯಲ್ಲಿ ಈ ವಿಷಯ ಮತ್ತೆ ಚರ್ಚೆಗೆ ಬರಲಿದ್ದು ಸರಕಾರ ಆರ್ಬಿಐ ಕಾರ್ಯ ವಿಧಾನವನ್ನು ಬದಲಾಯಿಸುವ ದಿಶೆಯಲ್ಲಿ ಒತ್ತಡ ತರಲಿದೆ ಎಂದು ವರದಿಗಳು ಹೇಳಿವೆ.
ಕಳೆದ ನ.19ರ ಸಭೆಯಲ್ಲೇ ಈ ವಿಷಯ ಚರ್ಚೆಗೆ ಬಂದಿತ್ತು. ಆದರೆ ಈ ಬಗ್ಗೆ ನಿಖರ ಚರ್ಚೆಯನ್ನು ಮುಂದಿನ (ಡಿ.14) ಸಭೆಯಲ್ಲಿ ಚರ್ಚಿಸುವುದೆಂದು ಒಪ್ಪಲಾಗಿತ್ತು ಎಂದು ಮೂಲಗಳು ತಿಳಿಸಿವೆ.
ಆರ್ಬಿಐ ನಿರ್ದೇಶಕರ ಮಂಡಳಿಯಲ್ಲಿ 18 ಸದಸ್ಯರಿದ್ದು ಇವರಲ್ಲಿ ಸರಕಾರದ ನಾಮಿನಿಗಳೂ ಇದ್ದಾರೆ. ಸರಕಾರದ ಹಾಗೇ ಆರ್ಬಿಐ ಮಂಡಳಿ ಸದಸ್ಯರು ಕೂಡ ಆರ್ಬಿಐ ಕಾರ್ಯ ವೈಖರಿಯಲ್ಲಿ ಹೆಚ್ಚಿನ ಪಾರದರ್ಶಕತೆ ಮತ್ತು ಉತ್ತರದಾಯಿತ್ವ ಇರಬೇಕೆಂದು ಬಯಸುತ್ತಾರೆ ಎಂದು ಮೂಲಗಳು ಹೇಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar Remarks: ಕನಸಲ್ಲೂ ಅಂಬೇಡ್ಕರ್ರನ್ನು ಅವಮಾನಿಸಿಲ್ಲ: ಅಮಿತ್ ಶಾ
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Mumbai: ಗೇಟ್ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.