ದೇಶದ ಪ್ರಮುಖ ವಿಮಾನ ನಿಲ್ದಾಣಗಳ ಖಾಸಗೀಕರಣಕ್ಕೆ ಮುಂದಾದ ಕೇಂದ್ರ ಸರ್ಕಾರ
13 ಎಎಐ (Airports Authority of India ) ವಿಮಾನ ನಿಲ್ದಾಣಗಳನ್ನು ಈಗಾಗಲೇ ಮುಂದಿನ ಆರ್ಥಿಕ ವರ್ಷ ಮುಗಿಯುವುದರೊಳಗಾಗಿ ಖಾಸಗೀಕರಣ ಮಾಡಲು ನಿರ್ಧರಿಸಿದ ಸರ್ಕಾರ
Team Udayavani, Mar 15, 2021, 10:50 AM IST
ನವ ದೆಹಲಿ : 2.5 ಲಕ್ಷ ಕೋಟಿ ಆಸ್ತಿ ಹಣ ಗಳಿಸುವ ಭಾಗವಾಗಿ ದೇಶದ ಪ್ರಮುಖ ನಾಲ್ಕು ವಿಮಾನ ನಿಲ್ದಾಣಗಳಾದ ಬೆಂಗಳೂರು, ದೆಹಲಿ, ಮುಂಬೈ ಹಾಗೂ ಹೈದರಾಬಾದ್ ವಿಮಾನ ನಿಲ್ದಾಣಗಳಲ್ಲಿ ಉಳಿದಿರುವ ತನ್ನ ಸಂಪೂರ್ಣ ಪಾಲನ್ನು ಮಾರಾಟ ಮಾಡಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ನಿರ್ಧರಿಸಿದೆ.
ಮುಂದಿನ ಆರ್ಥಿಕ ವರ್ಷದೊಳಗಾಗಿ ದೇಶದ ಒಟ್ಟು 13 ವಿಮಾನ ನಿಲ್ದಾಣಗಳ ಖಾಸಗೀಕರಣ ಮಾಡಲು ಯೋಜಿಸಿದೆ ಎಂದು ರಾಷ್ಟ್ರೀಯ ಸುದ್ದಿ ಸಂಸ್ಥೆಗಳು ವರದಿ ಮಾಡಿವೆ.
ಓದಿ : ತಮಿಳುನಾಡು: ಚುನಾವಣಾ ಪ್ರಚಾರ ಮುಗಿಸಿ ವಾಪಾಸಾಗುತ್ತಿದ್ದ ಕಮಲ್ ಹಾಸನ್ ಮೇಲೆ ದಾಳಿ!
ಬೆಂಗಳೂರು, ದೆಹಲಿ, ಮುಂಬೈ ಹಾಗೂ ಹೈದರಾಬಾದ್ ವಿಮಾನ ನಿಲ್ದಾಣಗಳನ್ನು ಈಗಾಗಲೇ ಖಾಸಗಿ ಕಂಪನಿಗಳು ನಿರ್ವಹಿಸುತ್ತಿದ್ದು, ತಮ್ಮ ಪೂರ್ಣ ಪ್ರಮಾಣದ ಷೇರನ್ನು ಕಂಪೆನಿಗಳಿಗೆ ಮಾರಾಟ ಮಾಡಲು ಸರ್ಕಾರ ನಿರ್ಧರಿಸಿದೆ ಎಂದು ನಾಗರಿಕ ವಿಮಾನಯಾನ ಸಚಿವಾಲಯ ತಿಳಿಸಿದೆ.
13 ಎಎಐ (Airports Authority of India ) ವಿಮಾನ ನಿಲ್ದಾಣಗಳನ್ನು ಈಗಾಗಲೇ ಮುಂದಿನ ಆರ್ಥಿಕ ವರ್ಷ ಮುಗಿಯುವುದರೊಳಗಾಗಿ ಖಾಸಗೀಕರಣ ಮಾಡಲು ನಿರ್ಧರಿಸಿದ್ದು, ಹೆಚ್ಚು ಆಕರ್ಷಕ ಪ್ಯಾಕೇಜ್ ಗಳನ್ನು ರಚಿಸಿ ಲಾಭದಾಯಕ ಹಾಗೂ ಲಾಭರಹಿತ ವಿಮಾನ ನಿಲ್ದಾಣಗಳನ್ನು ಒಟ್ಟುಗೂಡಿಸುವ ಸಾಧ್ಯತೆಗಳನ್ನು ನೋಡಲಾಗುತ್ತಿದೆ ಎಂಬ ಮಾಹಿತಿಯನ್ನು ಕೂಡ ನಾಗರಿಕ ವಿಮಾನಯಾನ ಸಚಿವಾಲಯ ತಿಳಿಸಿದೆ.
ಇನ್ನು,ನರೇಂದ್ರ ಮೋದಿಯವರ ಸರ್ಕಾರದ ಅಡಿಯಲ್ಲಿ ಮೊದಲ ಹಂತದ ವಿಮಾನ ನಿಲ್ದಾಣಗಳ ಖಾಸಗೀಕರಣದ ಸಂದರ್ಭದಲ್ಲಿ, ಅದಾನಿ ಗ್ರೂಪ್, ಲಕ್ನೋ, ಅಹಮದಾಬಾದ್, ಜೈಪುರ, ಮಂಗಳೂರು(ಬಜ್ಪೆ)(ಕಳೆದ ನವೆಂಬರ್ ನಲ್ಲಿ ಕರ್ನಾಟಕದ ರಾಜ್ಯದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಅದಾನಿ ಕಂಪೆನಿಗೆ ಹಸ್ತಾಂತರ ಮಾಡಿದ್ದು, ಅದಾನಿ ಕಂಪೆನಿ ಈಗ ಮಂಗಳೂರು ವಿಮಾನ ನಿಲ್ದಾಣವನ್ನು ನಿರ್ವಹಣೆ ಮಾಡುತ್ತಿದೆ.), ತಿರುವನಂತಪುರ, ಗುವಾಹಟಿಯ ವಿಮಾನ ನಿಲ್ದಾಣಗಳನ್ನು ಅದಾನಿ ಕಂಪೆನಿ ಸರ್ಕಾರದೊಂದಿಗೆ ಒಪ್ಪಂದ ಮಾಡಿಕೊಂಡಿದೆ.
ಓದಿ : ಸೋಂಕು ಹೆಚ್ಚಳ; ಲಾಕ್‌ಡೌನ್, ಕರ್ಫ್ಯೂ ಚರ್ಚೆ ಮುನ್ನೆಲೆಗೆ : ಸಿಎಂ ಎಚ್ಚರದ ಮನವಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Burhan Wani; ಬುರ್ಹಾನ್ ವಾನಿ ಅನುಚರ ಸೇರಿ 5 ಉಗ್ರರ ಎನ್‌ಕೌಂಟರ್
IED explodes: ನಕ್ಸಲರು ಇರಿಸಿದ್ದ ಐಇಡಿ ಸ್ಫೋಟ: ಮೂರು ಕರಡಿಗಳು ಸಾವು
Formula E race; ಫಾರ್ಮುಲಾ-ಇ ರೇಸ್ ಪ್ರಕರಣ: ಕೆಟಿಆರ್ ಮೇಲೆ ಎಸಿಬಿ ಎಫ್ಐಆರ್
Onion Price; ಈರುಳ್ಳಿ ಬೆಲೆ ಇಳಿಕೆ: ಹರಾಜು ನಿಲ್ಲಿಸಿ ರೈತರ ಪ್ರತಿಭಟನೆ
Electricity theft: ಎಸ್ಪಿ, ಸಂಸದನ ವಿರುದ್ಧ ದೂರು ದಾಖಲು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Burhan Wani; ಬುರ್ಹಾನ್ ವಾನಿ ಅನುಚರ ಸೇರಿ 5 ಉಗ್ರರ ಎನ್‌ಕೌಂಟರ್
IED explodes: ನಕ್ಸಲರು ಇರಿಸಿದ್ದ ಐಇಡಿ ಸ್ಫೋಟ: ಮೂರು ಕರಡಿಗಳು ಸಾವು
Formula E race; ಫಾರ್ಮುಲಾ-ಇ ರೇಸ್ ಪ್ರಕರಣ: ಕೆಟಿಆರ್ ಮೇಲೆ ಎಸಿಬಿ ಎಫ್ಐಆರ್
GDP ಕುಸಿತ: ಆರ್ಥಿಕ ಹಿಂಜರಿತದತ್ತ ನ್ಯೂಜಿಲ್ಯಾಂಡ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.