ಜೆಎನ್‌ಯು ಘರ್ಷಣೆ: ಕೇಂದ್ರಕ್ಕೆ ತಿವಿದ ಸೇನೆ
Team Udayavani, Nov 21, 2019, 8:34 PM IST
ಮುಂಬಯಿ: ಜೆಎನ್‌ಯು ಹಾಸ್ಟೆಲ್ ಶುಲ್ಕ ಹೆಚ್ಚಳವನ್ನು ವಿರೋಧಿಸಿ ಪ್ರತಿಭಟಿಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ದಿಲ್ಲಿ ಪೊಲೀಸರ ಅಮಾನವೀಯ ಲಾಠಿಚಾರ್ಜ್ ಅನ್ನು ಶಿವಸೇನೆ ಖಂಡಿಸಿದೆ. ಈ ಘಟನೆಗೆ ಕೇಂದ್ರ ಸರಕಾರವೇ ನೇರ ಹೊಣೆ ಎಂದು ಹೇಳಿದೆ.
ಹೊಸದಿಲ್ಲಿ ಕೇಂದ್ರಾಡಳಿತ ಪ್ರದೇಶವಾಗಿರುವುದರಿಂದ ಕಾನೂನು ಸುವ್ಯವಸ್ಥೆ ಕಾಪಾಡುವ ಜವಾಬ್ದಾರಿ ಕೇಂದ್ರದ ಮೇಲಿದೆ. ಶುಲ್ಕ ಹೆಚ್ಚಳವನ್ನು ವಿರೋಧಿಸಿ ಸಂಸತ್ತಿನತ್ತ ಮೆರವಣಿಗೆ ಮಾಡುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ನಡೆಸಿದ ದೌರ್ಜನ್ಯವನ್ನು ಖಂಡಿಸಿದೆ.
ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ ಇಂತಹ ಘಟನೆ ನಡೆದಿದ್ದರೆ ಬಿಜೆಪಿ ಸಂಸತ್ತಿನಲ್ಲಿ ರಾದ್ಧಾಂತ ಮಾಡುತ್ತಿತ್ತು. ಮಾತ್ರವಲ್ಲದೇ ಎಬಿವಿಪಿಯಂತಹ ಸಂಸ್ಥೆಗಳು ರಾಷ್ಟ್ರವ್ಯಾಪಿ ಬಂದ್ ಗೆ ಕರೆ ನೀಡುತ್ತಿದ್ದವು ಎಂದು ಸೇನೆಯ ಮುಖವಾಣಿ ಸಾಮ್ನಾದಲ್ಲಿ ಹೇಳಿದೆ. ವಿದ್ಯಾರ್ಥಿಗಳು ಶಿಸ್ತು ಮತ್ತು ಸಂಯಮವನ್ನು ಕಾಪಾಡಿಕೊಳ್ಳಬೇಕು ಎಂದು ಹೇಳಿದೆ.
ವಿವಿಗಳಲ್ಲಿ ಎಡಪಂಥ ಮತ್ತು ಬಲಪಂಥ ಎಂದು ವಿಂಗಡಿಸುವುದು ಸರಿಯಲ್ಲ. ವಿಶ್ವವಿದ್ಯಾನಿಲಯವು ನೊಬೆಲ್ ಪ್ರಶಸ್ತಿ ವಿಜೇತ ಅಭಿಜಿತ್ ಬ್ಯಾನರ್ಜಿ, ಕೆಲವು ಉನ್ನತ ರಾಜಕಾರಣಿಗಳು ಮತ್ತು ತಜ್ಞರನ್ನು ದೇಶ ಮತ್ತು ವಿಶ್ವಕ್ಕೆ ನೀಡಿದೆ. ಅಂತಹ ವಿದ್ಯಾ ಕೇಂದ್ರಗಳು ಘರ್ಷಣೆಯ ಕೇಂದ್ರಗಳಾಗಿ ಬದಲಾಗಬಾರದು ಸೇನೆ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!
ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ
ಶೀಘ್ರವೇ ದೇಶದ ಬುಲೆಟ್; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್ ಬುಲೆಟ್ ರೈಲು ಯೋಜನೆ
Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!
Enforcement Directorate: ಕ್ರಿಮಿನಲ್ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!
Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ
Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!
ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ
ಶೀಘ್ರವೇ ದೇಶದ ಬುಲೆಟ್; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್ ಬುಲೆಟ್ ರೈಲು ಯೋಜನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.