ರಿಟರ್ನ್ಸ್ ಸಲ್ಲಿಸದ ಕಂಪೆನಿ ಖಾತೆ ಸ್ಥಗಿತಕ್ಕೆ ಸೂಚನೆ
Team Udayavani, Jul 30, 2017, 7:50 AM IST
ಹೊಸದಿಲ್ಲಿ: ಅನುತ್ಪಾದಕ ಆಸ್ತಿ ಸಮಸ್ಯೆಯಿಂದ ಬಳಲುತ್ತಿರುವ ಬ್ಯಾಂಕ್ಗಳ ನೆರವಿಗೆ ಕೇಂದ್ರ ಸರಕಾರ ಧಾವಿಸಿದೆ. ಆದಾಯ ತೆರಿಗೆ ರಿಟರ್ನ್ಸ್ ಮತ್ತು ವಾರ್ಷಿಕ ಹಣಕಾಸು ವರದಿ ಸಲ್ಲಿಸದ ಸಂಸ್ಥೆಗಳ ಖಾತೆಗಳನ್ನು ಸ್ತಂಭನಗೊಳಿಸುವಂತೆ ಕೇಂದ್ರ ಸರಕಾರ ಆರ್ಬಿಐಗೆ ಸೂಚನೆ ನೀಡಿದೆ. ಮಾತ್ರವಲ್ಲದೆ ಎಲ್ಲ ಬ್ಯಾಂಕ್ಗಳಿಗೆ ಮತ್ತು ಸಂಸ್ಥೆಗಳಿಗೆ ಈ ಬಗ್ಗೆ ಸುತ್ತೋಲೆ ಹೊರಡಿಸುವಂತೆಯೂ ಸರಕಾರ ಸೂಚಿಸಿದೆ ಎಂದು ಕೇಂದ್ರ ಹಣಕಾಸು ಖಾತೆ ಸಹಾಯಕ ಸಚಿವ ಸಂತೋಷ್ ಕುಮಾರ್ ಗಂಗ್ವಾರ್ ಲೋಕಸಭೆಯಲ್ಲಿ ತಿಳಿಸಿದ್ದಾರೆ.
ಇತ್ತೀಚೆಗಷ್ಟೇ ಕೇಂದ್ರ ಕಾರ್ಪೊರೇಟ್ ಸಚಿವಾಲಯ 1,62,618 ಕಂಪೆನಿಗಳನ್ನು ಕಂಪೆನಿಗಳ ನೋಂದಣಿಯಿಂದ ರದ್ದು ಮಾಡಿತ್ತು. ಜತೆಗೆ ಯಾವ ಕಂಪೆನಿಗಳ ನಿರ್ದೇಶಕರು ಹಣಕಾಸು ವರದಿ ಸಲ್ಲಿಸುವಲ್ಲಿ ವಂಚನೆ ಎಸಗಿದ್ದಾರೆ ಎಂಬುದನ್ನೂ ಪತ್ತೆಹಚ್ಚುತ್ತಿದೆ. ಸತತ 3 ವರ್ಷ ವರದಿ ಸಲ್ಲಿಕೆ ಮಾಡದೇ ಇದ್ದರೆ, ಅಂಥ ನಿರ್ದೇಶಕರನ್ನು ಉದ್ದೇಶಪೂರ್ವಕ ಸುಸ್ತಿದಾರರು ಎಂದು ಘೋಷಿಸಲೂ ನಿರ್ಧರಿಸಲಾಗಿದೆ. ಜತೆಗೆ ಅವರನ್ನು ಮತ್ತೆ ಕಂಪೆನಿಯ ನಿರ್ದೇಶಕರನ್ನಾಗಿ ಮಾಡದೇ ಇರಲೂ ಶಿಫಾರಸು ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Varanasi: ಕುಟುಂಬಿಕರ ಎದುರಿಗೆ ಪೊಲೀಸ್ ಅಧಿಕಾರಿಗೆ ಥಳಿಸಿದ ಗುಂಪು
Rishabh Pant: ಅಪಘಾತದ ವೇಳೆ ನೆರವಾದವರಿಗೆ ಗಿಫ್ಟ್ ನೀಡಿದ ರಿಷಭ್ ಪಂತ್
Prabhutva movie review: ಪ್ರಗತಿ ಪಥದಲ್ಲಿ ಕ್ರಾಂತಿಯ ಕಿಡಿ
BBK11: ಇವತ್ತು ಬಿಗ್ಬಾಸ್ ಮನೆಯಿಂದ ಆಚೆ ಬರುವುದು ಇವರೇ ನೋಡಿ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.