Budget 2024; ಕೃಷಿಗೆ ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯ
Team Udayavani, Jul 24, 2024, 6:15 AM IST
ಹೊಸದಿಲ್ಲಿ: ಕೃಷಿಗಾಗಿ ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯ(ಡಿಪಿಐ)ವನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ 3 ವರ್ಷಗಳ ಯೋಜನೆಯನ್ನು ಘೋಷಿಸಲಾಗಿದೆ.
ಕೇಂದ್ರ ಸರ್ಕಾರವು, 3 ವರ್ಷಗಳಲ್ಲಿ ರೈತರು ಹಾಗೂ ಅವರ ಜಮೀನುಗಳ ವ್ಯಾಪ್ತಿಗಾಗಿ ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯವನ್ನು ಸುಗಮಗೊಳಿಸುತ್ತಿದೆ. ಈ ವರ್ಷ 400 ಜಿಲ್ಲೆಗಳಲ್ಲಿ ಖಾರಿಫ್(ಮುಂಗಾರು) ಬೆಳೆಗಳಿಗೆ ಡಿಜಿಟಲ್ ಬೆಳೆ ಸಮೀಕ್ಷೆಯನ್ನು ನಡೆಸಲಾಗುವುದು.
ರಾಜ್ಯಗಳ ಸಹಭಾಗಿತ್ವದಲ್ಲಿ ಕೃಷಿಯಲ್ಲಿ ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯ (ಡಿಪಿಐ) ಅಭಿವೃದ್ಧಿಪಡಿಸಲಾಗುತ್ತಿದೆ. 6 ಕೋಟಿ ರೈತರು ಮತ್ತು ಅವರ ಜಮೀನುಗಳ ವಿವರಗಳನ್ನು ರೈತರು ಮತ್ತು ಭೂ ನೋಂದಣಿಗೆ ಸಂಯೋಜಿಸಗೊಳಿಸಲಾಗುತ್ತಿದೆ. ಜೊತೆಗೆ 5 ರಾಜ್ಯಗಳಲ್ಲಿ ಜನ-ಸಮರ್ಥ ಆಧಾರಿತ ಕಿಸಾನ್ ಕ್ರೆಡಿಟ್ ಕಾರ್ಡ್‌ಗಳ ವಿತರಿಸುವ ಗುರಿಯನ್ನು ಹೊಂದಲಾಗಿದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.
ಏನಿದು ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯ?
ಕೃಷಿ ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯದಿಂದ ಅನ್ನದಾತರಿಗೆ ಬೆಳೆಗೆ ಸಂಬಂಧಿಸಿದಂತೆ ಮಾಹಿತಿಗಳು ತ್ವರಿತಗತಿಯಲ್ಲಿ ಸಿಗಲಿವೆ. ಬೆಳೆ ಸಲಹಾ ಸೇವೆಗಳು, ಯಂತ್ರೋಪಕರಣಗಳು, ಬೆಳೆ ಸಮೀಕ್ಷೆ, ರೈತರಿಗೆ ಹವಾಮಾನ ಮುನ್ಸೂಚನೆ, ಸರ್ಕಾರಿ ಯೋಜನೆಗಳ ಸೌಲಭ್ಯಗಳು, ಮಾರುಕಟ್ಟೆ, ಬೆಳೆ ದಾಸ್ತಾನು ಮತ್ತಿತರರ ವಿವರಗಳು ಸುಲಭವಾಗಿ ಸಿಗಲಿವೆ.
ನೈಸರ್ಗಿಕ ಕೃಷಿಗೆ 1 ಕೋಟಿ ರೈತರಿಗೆ ನೆರವು
ದೇಶದಲ್ಲಿ ಸುಸ್ಥಿರ ಕೃಷಿ ಪದ್ಧತಿಯನ್ನು ಪ್ರೋತ್ಸಾಹಿಸಲು ಮುಂದಿನ 2 ವರ್ಷಗಳ ಅವಧಿಯಲ್ಲಿ 1 ಕೋಟಿ ರೈತರಿಗೆ ನೈಸರ್ಗಿಕ ಕೃಷಿಯಲ್ಲಿ ತೊಡಗಿಸಿಕೊಳ್ಳಲು ನೆರವು ನೀಡಲು ಉದ್ದೇಶಿಸಲಾಗಿದೆ. ಹೊಸ 109 ಅಧಿಕ ಇಳುವರಿ ನೀಡುವ ಹಾಗೂ ಹವಾಮಾನ ಸ್ಥಿತಿಸ್ಥಾಪಕ ತೋಟಗಾರಿಕೆ ತಳಿಗಳನ್ನು ಬಿಡುಗಡೆ ಮಾಡಲಾಗುತ್ತಿದೆ. ರಾಸಾಯನಿಕ ಗೊಬ್ಬರ ಹಾಗೂ ಕೀಟನಾಶಕಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡುವ ಮೂಲಕ ಅತಿ ಕಡಿಮೆ ವೆಚ್ಚದಲ್ಲಿ ಕೃಷಿ ಕೈಗೊಂಡು ಲಾಭದಾಯಕತೆಯನ್ನು ಹೆಚ್ಚಿಸಲಾಗುತ್ತಿದೆ. ಇದರಿಂದ ಮಣ್ಣಿನ ಆರೋಗ್ಯ ಹೆಚ್ಚಿಸುವುದರ ಜೊತೆಗೆ ಜೀವ ವೈವಿಧ್ಯತೆಯನ್ನು ಸುಸ್ಥಿರಗೊಳಿಸಲಿದೆ. ಪ್ರಮಾಣೀಕರಣ ಹಾಗೂ ಬ್ರ್ಯಾಂಡಿಂಗ್ ಬೆಂಬಲದೊಂದಿಗೆ 1 ಕೋಟಿ ರೈತರು ನೈಸರ್ಗಿಕ ಕೃಷಿಯಲ್ಲಿ ತೊಡಗಿಸಿಕೊಳ್ಳುವಂತೆ ಉತ್ತೇಜನ ನೀಡಲಾಗುತ್ತಿದೆ ಎಂದು ವಿತ್ತ ಸಚಿವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Divorce: 29 ವರ್ಷಗಳ ದಾಂಪತ್ಯಕ್ಕೆ ಅಂತ್ಯ ಹಾಡಿದ ಎ.ಆರ್.ರೆಹಮಾನ್
ಮಣಿಪುರವನ್ನು ರಕ್ಷಿಸಿ: ರಾಷ್ಟ್ರಪತಿಗೆ ಖರ್ಗೆ ಪತ್ರ
Chennai: ಕೃಷ್ಣಗೆ ಎಂ.ಎಸ್.ಸುಬ್ಬುಲಕ್ಷ್ಮಿಪ್ರಶಸ್ತಿ ನೀಡಿಕೆಗೆ ಮದ್ರಾಸ್ ಹೈಕೋರ್ಟ್ ತಡೆ
Savarkar defamation case:: ಡಿ.2ರಂದು ಖುದ್ದು ಹಾಜರಾಗಲು ರಾಹುಲ್‌ಗೆ ಆದೇಶ
Flight: ಭಾರತ, ಚೀನಾ ನಡುವೆ ನೇರ ವಿಮಾನಯಾನ ಸೌಲಭ್ಯ ಪುನಾರಂಭ?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.